ಕುಮಾರಣ್ಣ ಕಾಲಿಟ್ಟ ಘಳಿಗೆ; ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್
ಕಾಂಗ್ರೆಸ್ ಪಕ್ಷದ ಕಂಟ್ರೋಲ್‌ನಲ್ಲಿದ್ದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಕಾಂಗ್ರೆಸ್‌ನ ಕೈತಪ್ಪುತ್ತಿದೆ ಎಂಬ ಮಾತಿಗೆ ಪುಷ್ಟಿ ನೀಡುವಂತಹ ಮತ್ತೊಂದು ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಕೇಂದ್ರ ಸಚಿವರೂ ಆಗಿದ್ದಾರೆ. ಈಗ ಸ್ಥಳೀಯವಾಗಿ ಮಂಡ್ಯ ನಗರಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಮಣ್ಣುಮುಕ್ಕಿಸುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.
ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ನಾಗೇಶ್ ಅವರು ಆಯ್ಕೆಯಾಗಿದ್ದು, ಇದರಿಂದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದೆ. ಈ ನಗರಸಭೆ ಚುನಾವಣೆಯು ಕೇಂದ್ರ ಸಚಿವ ಜೆಡಿಎಸ್‌ನ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಸಚಿವ ಚಲುವರಾಯಸ್ವಾಮಿ ಅವರ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಿತ್ತು. ಆದರೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಮಂಡ್ಯ ನಗರಸಭೆಯು ಜೆಡಿಎಸ್ ಪಾಲಾಗಿದೆ.

ಇಂದು ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿಜೇತರನ್ನು ಅಭಿನಂದಿಸಿದ್ದಾರೆ. ಮಂಡ್ಯ ನಗರಸಭೆಯ ನೂತನ ಅಧ್ಯಕ್ಷರಾಗಿ ನಾಗೇಶ್ ಮತ್ತು ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಅವರುಗಳು ಆಯ್ಕೆಯಾಗಿದ್ದು, ಇಬ್ಬರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಕುಮಾರಸ್ವಾಮಿ ವಿಶ್ ಮಾಡಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಹೂಡಿದ ಷಡ್ಯಂತ್ರ್ಯ, ಕುತಂತ್ರಗಳನ್ನು ಮೆಟ್ಟಿನಿಂತು ಮಂಡ್ಯ ಜನರ ಆಶಯದ ಪ್ರತೀಕವಾಗಿ ನಗರಸಭೆಯ ಅಧಿಕಾರವು ಜೆಡಿಎಸ್-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸಿಕ್ಕಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ. ಈ ಗೆಲುವಿಗೆ ಕಾರಣರಾದ ಎರಡೂ ಪಕ್ಷಗಳ ನಗರಸಭೆ ಸದಸ್ಯರು, ಮೈತ್ರಿಕೂಟದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು ಎಂದಿದ್ದಾರೆ.

ಈ ಹಿಂದೆ ಮಂಡ್ಯದಲ್ಲಿ ಜೆಡಿಎಸ್ ಪಕ್ಷವು ಪಾರುಪತ್ಯ ಸಾಧಿಸಿತ್ತು. ಇದೇ ಹುರುಪಿನಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸುಮಲತಾ ಅವರ ಎದುರು ಸ್ಪರ್ಧೆಗಿಳಿಸಿದ್ದರು. ಆದರೆ, ಸುಮಲತಾ ಗೆದ್ದು ಬೀಗುವ ಮೂಲಕ ಜೆಡಿಎಸ್‌ಗೆ ಮುಖಭಂಗ ಮಾಡಿದ್ದರು. ಇದಾದ ನಂತರ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ, ಜೆಡಿಎಸ್‌ಗೆ ಆಘಾತ ನೀಡಿದ್ದರು.
ಇದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಎದುರಾಳಿಗಳಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಸ್ಟಾರ್ ಚಂದ್ರು ಅವರನ್ನು ಕಣಕ್ಕಿಳಿಸಿತ್ತು. ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಕಾಂಗ್ರೆಸ್ ನಾಯಕರು ಗೆಲುವಿನ ಹುರುಪಿನಲ್ಲೇ ಇದ್ದರು. ಆದರೆ ಮತ್ತೊಂದೆಡೆ ಮಂಡ್ಯದ ಮೇಲೆ ಕಣ್ಣಿಟ್ಟಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಲ್ಲದೆ, ಲೀಡ್‌ನಲ್ಲಿ ಗೆದ್ದು ಕೇಂದ್ರ ಸಚಿವರೂ ಆದರು.
ಇತ್ತೀಚೆಗೆ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಆಪರೇಷನ್ ಮೂಲಕ ತಮ್ಮತ್ತ ಕರೆದುಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಕೂಡ ರಣತಂತ್ರ ರೂಪಿಸಿ, ಕಾಂಗ್ರೆಸ್‌ಗೆ ಸೆಡ್ಡು ಹೊಡೆದಿದ್ದಾರೆ. ಇದೀಗ ಮಂಡ್ಯ ನಗರಸಭೆ ಚುನಾವಣೆಯಲ್ಲಿನ ಬೆಳವಣಿಗೆಯು ಮತ್ತೊಮ್ಮೆ ಜೆಡಿಎಸ್‌ನ ಬೆಳವಣಿಗೆಗೆ ಮುನ್ನುಡಿಯಾಗುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್‌ಗೆ ಸಕ್ಕರೆ ನಾಡಿನ ಮೇಲಿರುವ ಹಿಡಿತ ಕೈ ತಪ್ಪಿ ಹೋಗುತ್ತಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications