• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಡ್ಯ ಲೋಕಸಭಾ ಚುನಾವಣೆ : ಇವಿಎಂ ಮೇಲೆ ಶಾಸಕರಿಗೆ ಅನುಮಾನ

|

ಮಂಡ್ಯ, ಜೂನ್ 02 : 'ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದ್ದು ಜನರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತ ಹಾಕಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆದ್ದಿರುವುದು ಹೇಗೆ?' ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಪ್ರಶ್ನೆ ಮಾಡಿದ್ದಾರೆ.

ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು, 'ಇವಿಎಂ ಸಂಶೋಧನೆ ಮಾಡಿದ ದೇಶದಲ್ಲಿಯೇ ಅದನ್ನು ಬಳಸುವುದಿಲ್ಲ. ಇನ್ನು ನಮ್ಮ ದೇಶದಲ್ಲಿ ಯಾಕೆ?' ಎಂದು ಪ್ರಶ್ನಿಸಿದರು.

ವಿರೋಧಪಕ್ಷಗಳ ಆರೋಪದಲ್ಲಿ ಹುರುಳಿಲ್ಲ: ಇವಿಎಂ-ವಿವಿಪ್ಯಾಟ್ ತಾಳೆ ಸಂಪೂರ್ಣ ಪಕ್ಕಾವಿರೋಧಪಕ್ಷಗಳ ಆರೋಪದಲ್ಲಿ ಹುರುಳಿಲ್ಲ: ಇವಿಎಂ-ವಿವಿಪ್ಯಾಟ್ ತಾಳೆ ಸಂಪೂರ್ಣ ಪಕ್ಕಾ

'ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆದ್ದಿರುವುದು ಹೇಗೆ?. ಇವಿಎಂಗಳ ಬಗ್ಗೆ ನಮಗೆ ನಂಬಿಕೆ ಇಲ್ಲ. ಇಬಿಎಂಗಳ ಬಗ್ಗೆ ತನಿಖೆ ನಡೆಸಬೇಕು' ಎಂದು ಸುರೇಶ್ ಗೌಡ ಹೇಳಿದರು.

ಇವಿಎಂ ದುರ್ಬಳಕೆ ಸಾಧ್ಯವೇ? ಅದಕ್ಕೆ ಇರುವ ಭದ್ರತೆ ಏನು? ಇಲ್ಲಿದೆ ಮಾಹಿತಿಇವಿಎಂ ದುರ್ಬಳಕೆ ಸಾಧ್ಯವೇ? ಅದಕ್ಕೆ ಇರುವ ಭದ್ರತೆ ಏನು? ಇಲ್ಲಿದೆ ಮಾಹಿತಿ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು.

ಮಂಡ್ಯ ಜನರ ಜೊತೆಗಿರ್ತೇನೆ ಅಂಬರೀಶ್ ಮೇಲಾಣೆ: ಸುಮಲತಾಮಂಡ್ಯ ಜನರ ಜೊತೆಗಿರ್ತೇನೆ ಅಂಬರೀಶ್ ಮೇಲಾಣೆ: ಸುಮಲತಾ

ಸುಮಲತಾ ಅಂಬರೀಶ್ ಅವರು 703660 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ನಿಖಿಲ್ ಕುಮಾರಸ್ವಾಮಿ 577784 ಮತಗಳನ್ನು ಪಡೆದಿದ್ದರು. ಸುಮಲತಾ ಅವರು 125876 ಮತಗಳ ಅಂತರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು.

English summary
Nagamangala JD(S) MLA Suresh Gowda raised the question on the Electronic Voting Machine (EVM). In Mandya Lok Sabha elections 2019 Nikhil Kumaraswamy defeated and Sumalatha Ambareesh won the election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X