ಜೆಡಿಎಸ್ ಬಿಜೆಪಿ ಮೈತ್ರಿಯಿಂದ 28 ಸ್ಥಾನಗಳನ್ನು ಗೆದ್ದು ಇತಿಹಾಸ ನಿರ್ಮಿಸಲಿದೆ: ಮಾಜಿ ಸಿಎಂ ಕುಮಾರಸ್ವಾಮಿ

ಕೃಷ್ಣರಾಜಪೇಟೆ, ಡಿಸೆಂಬರ್‌ 11: ರಾಜ್ಯ ಸರ್ಕಾರವು ನೀಡುತ್ತಿರುವ ವಿವಿಧ ಗ್ಯಾರಂಟಿಗಳ ಪೈಕಿ ಶೇ. 50ರಷ್ಟು ಕೂಡ ಜನತೆಗೆ ಸರಿಯಾಗಿ ತಲುಪುತ್ತಿಲ್ಲ, ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ಆಡಳಿತದಿಂದ ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ರಾಜ್ಯದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಅವರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೆಳತೂರು ಗ್ರಾಮದಲ್ಲಿ ಶ್ರೀಕೋಟೆ ರಂಗನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ, ವಿಗ್ರಹದ ಪುನರ್ ಪ್ರತಿಷ್ಠಾಪನೆ, ವಿಮಾನ ಗೋಪುರ ಮತ್ತು ಗರುಡಗಂಭದ ಪ್ರತಿಷ್ಠಾಪನೆ, ಮಹಾಕುಂಭಾಬಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

JDS will create history by winning 28 seats from BJP alliance: Former CM Kumaraswamy

ರಾಜ್ಯದ ಜನತೆ ಕಾಂಗ್ರೇಸ್ ಪಕ್ಷವು ಘೋಷಿಸಿದ ಗ್ಯಾರಂಟಿಗಳಿಗೆ ಮಾರುಹೋಗಿ 136 ಸ್ಥಾನಗಳನ್ನು ನೀಡಿದ್ದಾರೆ. ಆದರೆ ಜನತೆಯ ವಿಶ್ವಾಸವನ್ನು ಉಳಿಸಿಕೊಳ್ಳಲು ವಿಫಲವಾಗಿರುವ ಸರ್ಕಾರವು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಬೇಜವಾಬ್ಧಾರಿತನದಿಂದ ವರ್ತಿಸುತ್ತಿದೆ. ಗೃಹಲಕ್ಷ್ಮೀ ಹಾಗೂ ಬಡವರ ಪಡಿತರದ ಅಕ್ಕಿಯ ಹಣವು ಶೇ.50ರಷ್ಟು ಫಲಾನುಭವಿಗಳಿಗೆ ಕೂಡಾ ತಲುಪುತ್ತಿಲ್ಲ.

200ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದ ಕಾಂಗ್ರೇಸ್ ಈಗ ಪ್ರಸ್ತುತ ಎಷ್ಟು ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡುತ್ತಿದೆ ಎಂಬುದು ಬಹಿರಂಗ ಸತ್ಯವಾಗಿದೆ. ರಾಜ್ಯದ ರೈತರು ತೀವ್ರವಾದ ಬರವನ್ನು ಎದುರಿಸುತ್ತಿರುವುದರಿಂದ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುದ ಘೋಷಣೆ ಮಾಡಿ ಎದೆಗಾರಿಕೆಯನ್ನು ಪ್ರದರ್ಶಿಸಬೇಕು ಎಂದು ಸವಾಲು ಹಾಕಿದ ಮಾಜಿ ಸಿಎಂ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಿಂದ ಕಂಗಾಲಾಗಿರುವ ಕಾಂಗ್ರೆಸ್ ಪಕ್ಷವು ಹಣದ ಹೊಳೆ ಹರಿಸಿ ಆಶ್ವಾಸನೆಗಳು ಮತ್ತು ಭರವಸೆಯನ್ನು ನೀಡಿ ತೆಲಂಗಾಣ ರಾಜ್ಯದಲ್ಲಿ ಮಾತ್ರ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ ಎಂದು ಲೇವಡಿ ಮಾಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ಬಿಜೆಪಿ ಜೊತೆ ಒಂದಾಗಿ ಪ್ರಚಾರ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಜೊತೆಗೆ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದರು.

ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮೊರೆ ಹೋಗುವುದು ಅನಿವಾರ್ಯವಾಗಿದೆ. ಭಗವಂತನ ನಾಮಸ್ಮರಣೆ ಮಾಡಿ ಪೂಜಿಸಿದರೆ ಸಾಕು ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿರುವ, ನಮ್ಮ ನೆಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ದೇವಾಲಯಗಳ ಸಂರಕ್ಷಣೆಯು ಅತ್ಯಗತ್ಯವಾಗಿ ಆಗಬೇಕಾಗಿದೆ. ಈ ದಿಕ್ಕಿನಲ್ಲಿ ಬೆಳತೂರು ಗ್ರಾಮಸ್ಥರು ಶ್ರೀ ಕೋಟೆ ರಂಗನಾಥಸ್ವಾಮಿ ದೇವಾಲಯವನ್ನು ಜೀರ್ಣೋದ್ಧಾರ ಮಾಡಿಸಿ, ಹೊಸದಾಗಿ ವಿಮಾನಗೋಪುರ ಮತ್ತು ಗರುಡಗಂಭವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ. ನಮ್ಮ ಮುಂದಿನ ತಲೆಮಾರಿಗೆ ನಮ್ಮ ನೆಲದ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಬೆಳಕು ಚೆಲ್ಲುವ ದೇವಾಲಯಗಳನ್ನು ಉಳಿಸಿ ಸಂರಕ್ಷಣೆ ಮಾಡುವುದು ಅಗತ್ಯವಾಗಿರುವುದರಿಂದ ಬೆಳತೂರು ಗ್ರಾಮಸ್ಥರನ್ನು ತಾವು ಅಭಿನಂದಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹೆಚ್.ಟಿ.ಮಂಜು ಮಾತನಾಡಿ ಬೆಳತೂರು ಗ್ರಾಮದ ಶ್ರೀ ಕೋಟೆ ರಂಗನಾಥಸ್ವಾಮಿ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿಮುಖ್ಯಮಂತ್ರಿಗಳಾದ ಕುಮಾರಣ್ಣ ಅವರು ಭಾಗವಹಿಸಿರುವುದು ಗ್ರಾಮದ ಜನತೆ ಸೇರಿದಂತೆ ಸದ್ಭಕ್ತರಿಗೆ ಸಂತೋಷವಾಗಿದೆ. ಕಾಂಗ್ರೇಸ್ ಸರ್ಕಾರವು ಅಭಿವೃದ್ಧಿಯ ವಿರೋಧಿಯಾಗಿದ್ದು ತಾಲೂಕಿನ ಕೆರೆ ಕಟ್ಟೆಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರದಲ್ಲಿ ಅಗತ್ಯವಾಗಿ ಆಗಬೇಕಾಗಿರುವ ಕೆಲಸ ಕಾರ್ಯಗಳಿಗೆ ಅನುದಾನವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಡಲು ಕುಮಾರಣ್ಣ ನೆರವಾಗಬೇಕು ಎಂದು ಶಾಸಕರು ಮನವಿ ಮಾಡಿದರು.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಮಾಜಿಅಧ್ಯಕ್ಷ ಎಂ.ಬಿ.ಹರೀಶ್, ನಿದೇಶಕರಾದ ಡಾಲುರವಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ವಡ್ಡರಹಳ್ಳಿ ಧನಂಜಯ, ರಾಜ್ಯ ಜೆಡಿಎಸ್ ಯುವ ಮುಖಂಡ ಶೀಳನೆರೆದಿನೇಶ್, ಎಪಿಎಂಸಿ ಮಾಜಿಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ನಾಗೇಶ್, ಜಿಲ್ಲಾ ಪಂಚಾಯಿತಿ ಮಾಜಿಉಪಾಧ್ಯಕ್ಷರಾದ ಗೌರಮ್ಮಶ್ರೀನಿವಾಸ್, ಗಾಯತ್ರಿರೇವಣ್ಣ, ವಕೀಲ ಕುರುಬಳ್ಳಿ ನಾಗೇಶ್, ಜೆಡಿಎಸ್ ರಾಜ್ಯ ವಕ್ತಾರ ಅಶ್ವಿನ್‌ಕುಮಾರ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಸೋಮನಹಳ್ಳಿ ಮೋಹನ್, ತಾ.ಪಂ ಮಾಜಿಸದಸ್ಯ ಸಂಜೀವಪ್ಪ, ಮುಖಂಡರಾದ ಕೆ.ಟಿ.ಚಂದ್ರೇಗೌಡ, ಲಕ್ಷ್ಮಮ್ಮ ಬಿ.ಕೆ.ಪುಟ್ಟೇಗೌಡ, ಉಮೇಶ್, ಮಾಂಬಳ್ಳಿ ಅಶೋಕ್, ಸಿದ್ದೇಗೌಡ, ಬಿ.ಎಸ್.ಶಿವಸ್ವಾಮಿ, ಸ್ವಾಮಿನಾಯಕ, ರವೀಶ್, ಸೋಮನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಮ್ಮಚಂದ್ರೇಗೌಡ ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+