ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವಿರೋಧವಾಗಿ ಮಳವಳ್ಳಿ ಪುರಸಭೆ ಚುನಾವಣೆಗೆ ಗೆದ್ದ ಜೆಡಿಎಸ್

|
Google Oneindia Kannada News

ಮಂಡ್ಯ, ಅಕ್ಟೋಬರ್ 23 : ಜೆಡಿಎಸ್ ಪಕ್ಷ ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆಯನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಜಿಲ್ಲೆ ಪಕ್ಷದ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಶುಕ್ರವಾರ ಮಳವಳ್ಳಿ ಪುರಸಭೆ ಅಧ್ಯಕ್ಷರಾಗಿ ಜೆಡಿಎಸ್‌ನ ರಾಧಾ ನಾಗರಾಜು ಮತ್ತು ಉಪಾಧ್ಯಕ್ಷರಾಗಿ ನಂದಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಪುರಸಭೆ ಆಡಳಿತ ಜೆಡಿಎಸ್ ಪಕ್ಷದ ಪಾಲಾಗಿದೆ.

ಶಿರಾ ಉಪ ಚುನಾವಣೆ; ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ ನಾಯಕರು ಶಿರಾ ಉಪ ಚುನಾವಣೆ; ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ ನಾಯಕರು

17ನೇ ವಾರ್ಡ್‌ನಿಂದ ಆಯ್ಕೆಯಾಗಿದ್ದ ರಾಧಾ ನಾಗರಾಜು ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ 10ನೇ ವಾರ್ಡ್‌ನಿಂದ ಆಯ್ಕೆಯಾಗಿದ್ದ ನಂದಕುಮಾರ್ ನಾಮಪತ್ರಗಳನ್ನು ಸಲ್ಲಿಸಿದ್ದರು. ವಿರುದ್ಧವಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.

 ಜೆಡಿಎಸ್ ಭದ್ರಕೋಟೆ ಮಂಡ್ಯದ ಮೇಲೆ ಬಿಜೆಪಿ ಕಣ್ಣಿಟ್ಟಿದೆಯಾ? ಜೆಡಿಎಸ್ ಭದ್ರಕೋಟೆ ಮಂಡ್ಯದ ಮೇಲೆ ಬಿಜೆಪಿ ಕಣ್ಣಿಟ್ಟಿದೆಯಾ?

JDS Won Malavalli Town Municipal Council Election

ಮಳವಳ್ಳಿ ಪುರಸಭೆಯಲ್ಲಿ ಒಟ್ಟು 23 ವಾರ್ಡ್‌ಗಳಿವೆ. ಜೆಡಿಎಸ್ ಪಕ್ಷದ ಅಭ್ಯರ್ಥಿಗಳು 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ 5, ಬಿಜೆಪಿ 2 ಸ್ಥಾನದಲ್ಲಿ ಜಯಗಳಿಸಿದೆ. 7 ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಹಾಸನ; ಸಹಕಾರಿ ಬ್ಯಾಂಕ್ ಚುನಾವಣೆ ಬಿಜೆಪಿಗೆ ಮುಖಭಂಗ, ಜೆಡಿಎಸ್ ಪಾರುಪತ್ಯ!ಹಾಸನ; ಸಹಕಾರಿ ಬ್ಯಾಂಕ್ ಚುನಾವಣೆ ಬಿಜೆಪಿಗೆ ಮುಖಭಂಗ, ಜೆಡಿಎಸ್ ಪಾರುಪತ್ಯ!

ಚುನಾವಣೆ ಸಮಯದಲ್ಲಿ ಕ್ಷೇತ್ರದ ಜೆಡಿಎಸ್ ಶಾಸಕ ಡಾ. ಕೆ. ಅನ್ನದಾನಿ ಅವರು ಇದ್ದರು. ಚುನಾವಣಾಧಿಕಾರಿಯಾಗಿ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಚಂದ್ರಮೌಳಿ ಕಾರ್ಯನಿರ್ವಹಿಸಿದರು.

Recommended Video

ನಮ್ ದೇಶ ಕೊಳಕಾಗಿದ್ಯ Trump ಹೇಳ್ತಿರೋದು ಏನು? | Oneindia Kannada

ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಮಳವಳ್ಳಿ, ಮದ್ದೂರು, ನಾಗಮಂಗಲ, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ.

English summary
JD(S) bagged Mandya district Malavalli town municipal council president and vice president post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X