• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಂದೆಯಂತೆ ಮಗ: ಸೋಂಕು ನಿವಾರಕ ಟನಲ್ ಸ್ಥಾಪಿಸಿದ ನಿಖಿಲ್ ಕುಮಾರಸ್ವಾಮಿ

|

ಮಂಡ್ಯ, ಏಪ್ರಿಲ್ 6: ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಂಡ್ಯದಲ್ಲಿ ಸೋಂಕು ನಿವಾರಕ ದ್ರವಣ ಸಿಂಪಡಣಾ ಟನಲ್‌ ಸ್ಥಾಪಿಸಿದ್ದಾರೆ.

ಮಂಡ್ಯದ ಸರ್. ಎಂ.ವಿಶ್ವೇಶ್ವರಯ್ಯ ಮೈದಾನದಲ್ಲಿ ತಾತ್ಕಾಲಿಕ ಮಾರುಕಟ್ಟೆಗೆ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಟನಲ್‌ ಅನ್ನು ಸ್ಥಾಪಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದ ಮಾನದಂಡಗಳ ಆಧಾರದಲ್ಲಿ ಟನಲ್ ಗಳನ್ನು‌ ನಿರ್ವಹಣೆ ಮಾಡಲಾಗುತ್ತಿದೆ.

ದೀಪ ಬೆಳಗಲು ಮೋದಿ ಕರೆಯ ಹಿಂದಿನ ಮರ್ಮ: ಹೊಸ ಪ್ರಶ್ನೆ ಹುಟ್ಟು ಹಾಕಿದ ಕುಮಾರಸ್ವಾಮಿ ಟ್ವೀಟ್!

ರಾಮನಗರ ಜಿಲ್ಲೆಯ ನಾಲ್ಕು ಕಡೆ ಕುಮಾರಸ್ವಾಮಿ ಅವರು ಈಗಾಗಲೇ ಟನಲ್ ಗಳನ್ನು ಸ್ಥಾಪಿಸಿದ್ದಾರೆ. ಸರ್. ಎಂವಿ ಮೈದಾನದ ಟನಲ್ ಅನ್ನು ನಿಖಿಲ್ ಕುಮಾರಸ್ವಾಮಿ ಅವರು ನಾಳೆ (ಏ 7) ಉದ್ಘಾಟಿಸಲಿದ್ದಾರೆ.

ಅಲ್ಲದೇ, ಕೊರೊನಾ ವೈರಸ್‌ ತಡೆಯಲು ದೇಶದಲ್ಲಿ ಜಾರಿಗೆ ತರಲಾಗಿರುವ ಲಾಕ್‌ ಡೌನ್‌ನಿಂದಾಗಿ ಆಹಾರದ ಸಮಸ್ಯೆಗೆ ಸಿಲುಕಿರುವವರಿಗಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಈಗಾಗಲೇ 'ಎಚ್‌ಡಿಕೆ ಜನತಾ ದಾಸೋಹ' ಎಂಬ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದಾರೆ.

ನಿಖಿಲ್ ಮದುವೆ ಮುಂದಕ್ಕೆ ಹೋಗುತ್ತಾ? ಕುಮಾರಸ್ವಾಮಿ ಪ್ರತಿಕ್ರಿಯೆ

ಈ ಕಾರ್ಯಕ್ರಮವನ್ನು ಕ್ಷೇತ್ರದ ಹಂತದಲ್ಲಿ ಶಾಸಕರು, ನಾಯಕರು, ಮುಖಂಡರು ಪಾಲಿಸುತ್ತಿದ್ದಾರೆ. ಹಸಿದವರಿಗೆ ಈ ಕಾರ್ಯಕ್ರಮದ ಮೂಲಕ ಆಹಾರದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಸೋಮವಾರ, ಚನ್ನಪಟ್ಟಣ, ರಾಮನಗರ‌ದ ಐದು ಸ್ಥಳದಲ್ಲಿ ಸ್ಥಾಪಿಸಲಾಗಿರುವ ಟನಲ್ ಗಳಿಗೆ ಎಚ್.ಡಿ.ಕುಮಾರಸ್ವಾಮಿ, ಚಾಲನೆ ನೀಡಿದರು. "ಹಳ್ಳಿಯಿಂದ ಬರುವ ರೈತರಿಗೆ ಸೋಂಕು ತಡೆಯುವ ಸಣ್ಣ ಕಾರ್ಯವನ್ನು ಪ್ರಾರಂಭ ಮಾಡಿದ್ದೇವೆ".

"ಎಲ್ಲಾ ಕಡೆ ಈ ರೀತಿ ಟನಲ್ ಗಳನ್ನ ಸ್ಥಾಪನೆ ಮಾಡಬೇಕು. ಸರ್ಕಾರಕ್ಕೆ ಟೀಕೆ‌ ಮಾಡುವ ಸಮಯ ಇದಲ್ಲ. ಸರ್ಕಾರ ಸರಿಯಾದ ರೀತಿ ಕೆಲಸ ಮಾಡಬೇಕು ಎಂದು ಸಲಹೆ ಕೊಡುತ್ತೇವೆ. ಈ ಸಮಯಕ್ಕೆ ಸೇವೆ ಮಾಡುತ್ತಿರುವ ವೈದ್ಯಕೀಯ ಇಲಾಖೆಗೆ ಅವರಿಗೆ ಅಗತ್ಯ ವಸ್ತುಗಳನ್ನ ಕೊಡಲು ಹೇಳುತ್ತೇನೆ. ಪಿಪಿಇ ಸೆಟ್ ಹಾಗೂ ಕಿಟ್ ಗಳನ್ನ ತಕ್ಷಣ ತರುವ ವ್ಯವಸ್ಥೆಯಾಗಬೇಕು" ಎಂದು ಕುಮಾರಸ್ವಾಮಿ, ಈ ಸಂದರ್ಭದಲ್ಲಿ ಆಗ್ರಹಿಸಿದ್ದರು.

English summary
JDS Youth Wing President Nikhil Kumaraswamy To Inguarate Tunnel In Mandya
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X