ಮಳವಳ್ಳಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಕೆ.ಶಿವರಾಂ?

Posted By: Gururaj
Subscribe to Oneindia Kannada
Karnataka Elections 2018 : ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಮಲವಳ್ಳಿಯಿಂದ ಸ್ಪರ್ಧೆ

ಮಂಡ್ಯ, ನವೆಂಬರ್ 13 : 'ಪಕ್ಷದ ವರಿಷ್ಠರು ಸೂಚಿಸಿದರೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಬಿಜೆಪಿ ಮುಖಂಡ ಕೆ.ಶಿವರಾಂ ಹೇಳಿದ್ದಾರೆ.

ಮಳವಳ್ಳಿಯಲ್ಲಿ ಭಾನುವಾರ ಮತನಾಡಿದ ಅವರು, 'ಮಳವಳ್ಳಿ ಕ್ಷೇತ್ರದಲ್ಲಿ ನಿಕಟ ಸಂಪರ್ಕ ಹೊಂದಿದ್ದೇನೆ. ಮೀಸಲು ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ನಾಯಕರು ಸೂಚಿಸಿದ್ದಾರೆ' ಎಂದರು.

ದಲಿತ ನಾಯಕ ಕೆ.ಶಿವರಾಂಗೆ ಬಿಜೆಪಿ ರೆಡ್ ಕಾರ್ಪೆಟ್!

K Shivaram

'ನಂಜನಗೂಡು, ತಿ.ನರಸೀಪುರ, ಕೊಳ್ಳೇಗಾಲ ಕ್ಷೇತ್ರಗಳಿಗೂ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ. ವರಿಷ್ಠರು ಸೂಚನೆ ನೀಡಿದರೆ ಮಳ್ಳವಳ್ಳಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಹೇಳಿದರು.

'2013ರ ಚುನಾವಣೆಯಲ್ಲಿ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದರೂ ಕಾಂಗ್ರೆಸ್ ಅವರಿಗೆ ಸಿಎಂ ಪಟ್ಟ ನೀಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೂ ಅಧಿಕಾರ ಸಿಗಲಿಲ್ಲ. ಇದರಿಂದ ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ನೀಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ' ಎಂದರು.

ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ 2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ್ದರು. ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದ ಕೆ.ಶಿವರಾಂ ನಂತರ ಜೆಡಿಎಸ್ ಸೇರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Retired IAS officer and BJP leader K.Shivaram said, he will contest for Karnataka assembly elections 2018 from Malavalli assembly constituency if high command leaders approved for it.
Please Wait while comments are loading...