ಮಂಡ್ಯದ ಸ್ನೇಹಿತನ ಮನೆಯಲ್ಲಿ ನಟ ಸುಶೀಲ್ ಕುಮಾರ್ ಆತ್ಮಹತ್ಯೆ
ಮಂಡ್ಯ, ಜುಲೈ 8: ಕನ್ನಡ ಚಿತ್ರರಂಗದ ನಟ ಸುಶೀಲ್ ಕುಮಾರ್ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮದ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇವರು ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದರು. ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ʻಸಲಗʼ, ʻಕಮರೊಟ್ಟು ಚೆಕ್ ಪೋಸ್ಟ್ʼ ಸಿನಿಮಾಗಳಲ್ಲಿ ನಟಿಸಿದ್ದರು. ಕಳೆದ ಮೂರು ತಿಂಗಳಿನಿಂದ ಲಾಕ್ ಡೌನ್‌ನಿಂದಾಗಿ ಜಿಮ್ ತೆರೆದಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಗೆ ಬಂದು ವಿವಿ ನಗರದ ತಮ್ಮದೇ ಮನೆಯಲ್ಲಿ ನೆಲೆಸಿದ್ದರು.

ಇಂಡುವಾಳು ಗ್ರಾಮದಲ್ಲಿರುವ ತನ್ನ ಸ್ನೇಹಿತನ ಮನೆಗೆ ಇಂದು ತೆರಳಿದ್ದು, ಅಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.












Click it and Unblock the Notifications