Get Updates
Get notified of breaking news, exclusive insights, and must-see stories!

KR Pete Constituency: ಕಮಲಕೋಟೆಯನ್ನ ಛಿದ್ರಗೊಳಿಸಲು ದಳಪತಿಗಳ ಪ್ಲಾನ್. ಗೆಲ್ಲೋರ್ಯಾರು?

ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಾರಾಯಣ ಗೌಡ ವರನ್ನ ಸೋಲಿಸುವ ನಿಟ್ಟಿನಲ್ಲಿ ದಳಪತಿಗಳು ಚುನಾವಣಾ ತಂತ್ರಗಾರಿಕೆಯನ್ನ ನಡೆಸಿದ್ದಾರೆ.

ಮಂಡ್ಯ,ಫೆಬ್ರವರಿ24: ಮಂಡ್ಯ ಜಿಲ್ಲೆಯ ರಾಜಕಾರಣಕ್ಕೆ ತನ್ನದೆ ಆದ ಇತಿಹಾಸವಿದೆ. ಈ ಹಿಂದೆ ಲೋಕಾಸಭಾ ಚುನಾವಣೆ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರ ಸಾಕಷ್ಟು ಸದ್ದು ಮಾಡಿತ್ತು. ಅಲ್ಲದೇ ಹಳೆ ಮೈಸೂರು ಭಾಗವು ಎಲ್ಲಾ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ತಂತ್ರಗಾರಿಕೆಯನ್ನ ನಡೆಸಿವೆ.

ಇನ್ನೂ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರ ಈ ಹಿಂದೆ ಜೆಡಿಎಸ್ ನ ಭದ್ರಕೋಟೆಯಾಗಿತ್ತು. ಆದರೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ ನಾರಾಯಣ ಗೌಡರು ಕೆ ಆರ್ ಪೇಟೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿ ಕಮಲವನ್ನ ಅರಳಿಸಿದ್ದು ಒಂದು ಕಡೆ ದಳಪತಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಮೂರು ಪಕ್ಷಗಳಿಗೂ ಮಂಡ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಅನಿವಾರ್ಯವಾಗಿದ್ರೆ, ದಳಪತಿಗಳಿಗೆ ಕೈ ತಪ್ಪಿರುವ ಕೆ ಆರ್ ಪೇಟೆಯಲ್ಲಿ ಮತ್ತೆ ಹಿಡಿತ ಸಾಧಿಸುವ ಪ್ರಯತ್ನ ನಡೆಸಿದ್ದಾರೆ.

 ಅಮಿತ್ ಶಾ ತಂತ್ರ; ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಪ್ಲಾನ್

ಅಮಿತ್ ಶಾ ತಂತ್ರ; ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಪ್ಲಾನ್

ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಿದ ದಿನದಿಂದಲೂ ಸಚಿವ ನಾರಾಯಣ ಗೌಡರು ಬಿಜೆಪಿಯನ್ನ ಸಂಘಟಿಸುವ ನಿಟ್ಟಿನಲ್ಲಿ ತಳಮಟ್ಟದಿಂದಲೂ ಪಕ್ಷವನ್ನ ಗಟ್ಟಿಗೊಳಿಸು ಪ್ರಯತ್ನವನ್ನ ನಡೆಸುತ್ತಾ ಬಂದಿದ್ದಾರೆ. ಹಳೆ ಮೈಸೂರು ಭಾಗದ ಮೇಲೆ ಮೊದಲಿನಿಂದಲೂ ಕಣ್ಣಿಟ್ಟಿದ್ದ ಬಿಜೆಪಿಗೆ ಕೆ ಆರ್ ಪೇಟೆಯಲ್ಲಿ ಗೆಲುವು ಸಾಧಿಸಿದ್ದು ಹುಮ್ಮಸ್ಸಿಗೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯತ್ತ ಹೆಚ್ಚಿನ ನಿಗಾವಹಿಸಿ ಇತರೆ ಕ್ಷೇತ್ರಗಳನ್ನು ಗೆಲ್ಲುವ ತಂತ್ರಯನ್ನ ಬಿಜೆಪಿ ರೂಪಿಸಿದೆ. ಈಗಾಗಲೇ ಮಂಡ್ಯ ಜಿಲ್ಲೆಗೆ ಆಗಮಿಸಿದ್ದ ಅಮಿತ್ ಶಾ ಅವರು ಚುನಾವಣಾ ನಿಟ್ಟಿನಲ್ಲಿ ರಾಜ್ಯ ನಾಯಕರಿಗೆ ಕೆಲವೊಂದು ಸೂಚನೆಗಳನ್ನ ನೀಡಿದ್ದಾರೆ. ಮಂಡ್ಯದ ಇತರೆ ಕ್ಷೇತ್ರಗಳಲ್ಲಿ ಗೆಲ್ಲುವುದು ಒಂದು ಕಡೆಯಾದರೆ ಸದ್ಯ ಖಾತೆ ತೆರೆದಿರುವ ಕೆ.ಆರ್.ಪೇಟೆ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಬಿಜೆಪಿ ಮುಂದಿರುವ ಸವಾಲ್ ಆಗಿದೆ. ಪಕ್ಷ ಬಿಟ್ಟು ಹೋದ ನಾರಾಯಣ ಗೌಡರನ್ನ ಸೋಲಿಸಲು ದಳಪತಿಗಳು ರೆಡಿಯಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರವನ್ನ ಉಳಸಿಕೊಳ್ಳಲು ಬಿಜೆಪಿ ಸಾಕಷ್ಟು ತಯಾರಿಯನ್ನ ನಡೆಸಿದೆ ಎನ್ನಲಾಗಿದೆ.

ಕೈ ತಪ್ಪಿದ ಕ್ಷೇತ್ರ; ಟಿಕೆಟ್ ಗಾಗಿ ಮುನಿಸಿಕೊಂಡಿರುವ ಜೆಡಿಎಸ್ ನಾಯಕರು

ಕೈ ತಪ್ಪಿದ ಕ್ಷೇತ್ರ; ಟಿಕೆಟ್ ಗಾಗಿ ಮುನಿಸಿಕೊಂಡಿರುವ ಜೆಡಿಎಸ್ ನಾಯಕರು

ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರ ಮೊದಲಿನಿಂದಲೂ ಜೆಡಿಎಸ್ ಭದ್ರಕೋಟೆಯಾಗಿದ್ದು, ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಿರುವ ಕೋಪ ದಳಪತಿಗಳಿಗೆ ಇದ್ದೇ ಇದೆ. ಹೀಗಾಗಿ ನಾರಾಯಣಗೌಡರ ಮೇಲೆ ದ್ವೇಷವಿದ್ದು, ಮತ್ತೆ ಕ್ಷೇತ್ರ ಪಡೆಯಲು ಜೆಡಿಎಸ್ ಪ್ರಯತ್ನ ನಡೆಸಿದೆ.

ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಕೆ.ಆರ್.ಪೇಟೆ ಕ್ಷೇತ್ರಕ್ಕೆ ಯುವಮುಖಂಡ ಹೆಚ್.ಟಿ.ಮಂಜು ಅವರಿಗೆ ಟಿಕೆಟ್ ನೀಡಿದೆ. ಇದು ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಪರಾಜಿತರಾಗಿರುವ ಬಿ.ಎಲ್.ದೇವರಾಜು ಸೇರಿದಂತೆ ತಮ್ಮ ಪಕ್ಷದ ಇತರೆ ಆಕಾಂಕ್ಷಿಗಳಿಗೆ ಮನಸ್ತಾಪಕ್ಕೆ ಕಾರಣವಾಗಿದೆ. ಅದರಲ್ಲೂ ಕಳೆದ ಉಪಚುನಾವಣೆಯಲ್ಲಿ ಡಾ.ನಾರಾಯಣಗೌಡರ ವಿರುದ್ಧವಾಗಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲು ಕಂಡು ಈ ಬಾರಿ ತನಗೆ ಟಿಕೆಟ್ ನೀಡುತ್ತಾರೆಂಬ ನಿರೀಕ್ಷೆಯಲ್ಲಿದ್ದ ದೇವರಾಜು ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ದೇವರಾಜುರವರಿಗೆ ಟಿಕೆಟ್ ಸಿಗದ ಬೇಸರ ಒಂದು ಕಡೆಯಾದರೇ, ಈ ಬಾರಿ ನಾರಾಯಣಗೌಡರನ್ನು ಸೋಲಿಸಿ ಸೇಡು ತೀರಿಸಿಕೊಳ್ಳಲು ಜೆಡಿಎಸ್ ಹಾತೊರೆಯುತ್ತಿದೆ. ಆದರೆ ಈಗ ಜೆಡಿಎಸ್‌ನಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿರುವುದು ನಾರಾಯಣಗೌಡರಿಗೆ ಇದು ಅನುಕೂಲವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೇಳಿಕೊಳ್ಳುವಷ್ಟು ವರ್ಚಸ್ಸಿಲ್ಲ, ಆದರೆ ಈ ಬಾರೀ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಾಕಷ್ಟು ಜನರು ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ವಿಜಯ್ ರಾಮೇಗೌಡ, ಕಿಕ್ಕೇರಿ ಸುರೇಶ್, ಎಂ.ಡಿ.ಕೃಷ್ಣಮೂರ್ತಿ ಅವರು ಅರ್ಜಿ ಸಲ್ಲಿಸಿದ್ದಾರೆ.

ಪ್ರತಿ ಪಂಚಾಯಿತಿ, ಗ್ರಾಮಗಳಿಗೆ ತೆರಳಿ ಮತದಾರರನ್ನು ಭೇಟಿಯಾಗುತ್ತಾ ಚುನಾವಣಾ ಕಾರ್ಯಚಟುವಟಿಕೆಯನ್ನು ಕಾಂಗ್ರೆಸ್ ಚುರುಕುಗೊಳಿಸಿದ್ದಾರೆ. ಕಾಂಗ್ರೆಸ್‌ನ ಉನ್ನತಮಟ್ಟದ ನಾಯಕರ ಸಂಪರ್ಕದಲ್ಲಿರುವ ವಿಜಯ್ ರಾಮೇಗೌಡ ಈ ಚುನಾವಣೆಯಲ್ಲಿ ಟಿಕೆಟ್‌ ಪಡೆಯಲೇಬೇಕೆಂಬ ಹಠಕ್ಕೆ ಬಿದ್ದಿದ್ದು, ಕೆಲ ನಾಯಕರು ಹೈಕಮಾಂಡ್ ನಾಯಕರನ್ನ ಟಿಕೆಟ್ ಗಾಗಿ ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಆದರೆ ಸಾಕಷ್ಟು ಜನ ಆಕಾಂಕ್ಷಿಗಳಿರುವ ಕ್ಷೇತ್ರದಲ್ಲಿ ಯಾರಿಗೆ ಯಾವ ಆಧಾರದ ಮೇಲೆ ಟಿಕೆಟ್ ನೀಡಲಿದೆ ಎಂದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕ್ಷೇತ್ರದಲ್ಲಿ ನಿಗೂಢ ಹೆಚ್ಚಿಸಿದ ನಾರಾಯಣ ಗೌಡರ ನಡೆ

ಕ್ಷೇತ್ರದಲ್ಲಿ ನಿಗೂಢ ಹೆಚ್ಚಿಸಿದ ನಾರಾಯಣ ಗೌಡರ ನಡೆ

ಜೆಡಿಎಸ್‌ನ ಭದ್ರಕೋಟೆಯನ್ನು ಛಿದ್ರ ಮಾಡಿ ಮೊದಲ ಬಾರಿಗೆ ಕಮಲ ಅರಳುವಂತೆ ಮಾಡಿದ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಚುನಾವಣೆ ಹೊತ್ತಲಿ ಹೆಚ್ಚಾಗಿದೆ. ಅಭ್ಯರ್ಥಿ ವಿಚಾರದಲ್ಲಿ ಮೂರು ಪಕ್ಷಗಳಲ್ಲೂ ಗೊಂದಲ ಮುಂದುವರೆದಿದ್ದು, ಚುನಾವಣೆ ವೇಳೆಗೆ ರಾಜಕೀಯವಾಗಿ ಹತ್ತು ಹಲವು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೆಡಿಎಸ್ ಈಗಾಗಲೇ ಅಭ್ಯರ್ಥಿಯನ್ನ ಘೋಷಣೆ ಮಾಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಇದುವರೆಗೆ ಅಧಿಕೃತ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿಲ್ಲ.ಇನ್ನೂ ನಾರಾಯಣ ಗೌಡರು ತಮ್ಮ ಮುಂದಿನ ರಾಜಕೀಯ ಭವಿಷ್ಯದ ದೃಷ್ಠಿಯಿಂದಾಗಿ ಚುನಾವಣೆ ಹೊತ್ತಿಗೆ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+