ಸುಮಲತಾ, ದರ್ಶನ್‌ಗೆ ಸಿಆರ್‌ಪಿಎಫ್ ಭದ್ರತೆ ಕೊಡಿ : ಬಿಜೆಪಿ ಪತ್ರ

ಬೆಂಗಳೂರು, ಮಾರ್ಚ್ 26 : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರಿಗೆ ಸಿಆರ್‌ಪಿಎಫ್ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಕರ್ನಾಟಕ ಬಿಜೆಪಿ ಮನವಿ ಮಾಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಂಗಳವಾರ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಈ ಕುರಿತು ಪತ್ರ ಬರೆದಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಲಿಂಬಾವಳಿ ಅವರು ಏಕೆ ಭದ್ರತೆ ನೀಡಬೇಕು ಎಂದು ವಿವರಿಸಿದ್ದಾರೆ.

ಸುಮಲತಾ ಅಂಬರೀಶ್, ಸುಮಲತಾ ಪುತ್ರ ಅಭಿಷೇಕ್, ಕನ್ನಡ ಚಿತ್ರ ನಟರಾದ ಯಶ್ ಮತ್ತು ದರ್ಶನ್ ಅವರಿಗೆ ಸಿಆರ್‌ಪಿಎಫ್ ಯೋಧರ ಭದ್ರತೆಯನ್ನು ಒದಗಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಕಾಂಗ್ರೆಸ್‌-ಜೆಡಿಎಸ್ ಕಾರ್ಯಕರ್ತರಿಂದ ಅವರಿಗೆ ತೊಂದರೆಯಾಗಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್‌-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 18ರಂದು ಚುನಾವಣೆ ನಡೆಯಲಿದೆ....

ದರ್ಶನ್ ಮನೆ ಮೇಲೆ ಕಲ್ಲು ತೂರಾಟ

ದರ್ಶನ್ ಮನೆ ಮೇಲೆ ಕಲ್ಲು ತೂರಾಟ

ಅರವಿಂದ ಲಿಂಬಾವಳಿ ಅವರು ಏಕೆ ಸಿಆರ್‌ಪಿಎಫ್ ಭದ್ರತೆ ನೀಡಬೇಕು ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

* ಕನ್ನಡದ ಪ್ರಸಿದ್ಧ ನಟ ಮತ್ತು ಸುಮಲತಾ ಅವರ ಬೆಂಬಲಿಗರಾದ ದರ್ಶನ್ ನಿವಾಸದ ಮೇಲೆ ಮಾ.23ರಂದು ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ದಾಳಿ ಮಾಡಿದ್ದರು.

* ಸುಮಲತಾ ಅವರು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸುವ ದಿನ ಜೆಡಿಎಸ್‌-ಕಾಂಗ್ರೆಸ್‌ನವರು ಟಿವಿ ಕೇಬಲ್‌ಗಳನ್ನು ಬಂದ್ ಮಾಡಿದ್ದರು.

ಅಪಪ್ರಚಾರ ಮಾಡುತ್ತಿದ್ದಾರೆ

ಅಪಪ್ರಚಾರ ಮಾಡುತ್ತಿದ್ದಾರೆ

ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಸುಮಲತಾ, ದರ್ಶನ್ ಮತ್ತು ಯಶ್ ಅವರ ವಿರುದ್ಧ ಬಹಿರಂಗ ಸಭೆಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಅಪಪ್ರಚಾರ ಮಾಡಲಾಗುತ್ತಿದೆ.

ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿಗಳ ಪುತ್ರನ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ. ಆದ್ದರಿಂದ ಹೀಗೆ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು

ಚುನಾವಣಾ ಆಯೋಗಕ್ಕೆ ದೂರು

ಸುಮಲತಾ ಅಂಬರೀಶ್ ಅವರು ಈಗಾಗಲೇ ಚುನಾವಣಾ ಆಯೋಗಕ್ಕೆ ತಮ್ಮ ಫೋನ್ ಟ್ಯಾಪ್ ಆಗಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ತಮ್ಮ ಮೇಲೆ ಗುಪ್ತಚರ ಇಲಾಖೆ ಮೂಲಕ ಕಣ್ಗಾವಲು ಇಟ್ಟಿದೆ ಎಂದು ದೂರು ನೀಡಿದ್ದಾರೆ.

ಕೆಲವು ವ್ಯಕ್ತಿಗಳು ಸುಮಲತಾ ಅಂಬರೀಶ್‌ ಅವರ ಮನೆ ಭದ್ರತಾ ಸಿಬ್ಬಂದಿ ಮೂಲಕ ಮಾಹಿತಿಗಳನ್ನು ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಇಂತಹ ಕಾರ್ಯಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಅರವಿಂದ ಲಿಂಬಾವಳಿ ಬರೆದ ಪತ್ರ

ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರಿಗೆ ಸಿಆರ್‌ಪಿಎಫ್ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಕರ್ನಾಟಕ ಬಿಜೆಪಿ ಮನವಿ ಮಾಡಿದ್ದು, ಪತ್ರದ ಪ್ರತಿ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+