ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯ ಬೃಹತ್ ಸಮಾವೇಶ?

|
Google Oneindia Kannada News

ಮಂಡ್ಯ, ಮೇ 06: ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪಕ್ಷಗಳ ಪ್ರಭಾವವಿರುವ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ?. ಈ ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆಯಾಗುತ್ತಿದೆ.

ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಮಂಡ್ಯ: ಕುಡಿದ ಅಮಲಿನಲ್ಲಿ ವೃದ್ಧನ ಮೇಲೆ ಹಲ್ಲೆ; ಆರ್‌ಪಿಎಫ್ ಇನ್ಸ್‌ಪೆಕ್ಟರ್ ಅಮಾನತುಮಂಡ್ಯ: ಕುಡಿದ ಅಮಲಿನಲ್ಲಿ ವೃದ್ಧನ ಮೇಲೆ ಹಲ್ಲೆ; ಆರ್‌ಪಿಎಫ್ ಇನ್ಸ್‌ಪೆಕ್ಟರ್ ಅಮಾನತು

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮಂಡ್ಯದಲ್ಲಿ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಹೇಳಿದರು.

Karnataka BJP To Organize Rally In Mandya CM Basavaraj Bommai Reaction

"ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬರುತ್ತಿದ್ದಾರೆ. ಹಂತಹಂತವಾಗಿ ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು ಒಲವು ತೋರುತ್ತಿದ್ದಾರೆ" ಎಂದರು.

"ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ" ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Karnataka BJP To Organize Rally In Mandya CM Basavaraj Bommai Reaction

"ಎಸ್.ಟಿ. ಜಯರಾಂ ಮಾತ್ರ ಅಲ್ಲದೆ ಯಾರು ನಮ್ಮ ಪಕ್ಷದ ಬಗ್ಗೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲ ಬಳಿ ಮಾತನಾಡಲಾಗುವುದು" ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

90ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಆರೋಗ್ಯವಂತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಅವರ ಮಾರ್ಗದರ್ಶನ ಸರ್ಕಾರ ಮತ್ತು ರಾಜ್ಯದ ಜನತೆಗೆ ದೊರೆಯುವಂತಾಗಲಿ ಎಂದರು.

Recommended Video

Gayle ದಾಖಲೆ ಮುರಿದ David Warner | Oneindia Kannada

English summary
Karnataka chief minister Basavaraj Bommai reaction on party rally in Mandya district. JD(S) party has stong hold in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X