ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

7 ಶಾಸಕರನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಕುಮಾರಸ್ವಾಮಿ ಋಣ ಸಂದಾಯ

By Gururaj
|
Google Oneindia Kannada News

ಮಂಡ್ಯ, ಜುಲೈ 05 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ತಮ್ಮ ಬಜೆಟ್‌ನಲ್ಲಿ ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ.

ಗುರುವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. 2018ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಶಾಸಕರು ಜಯಗಳಿಸಿದ್ದಾರೆ.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ಮಂಡ್ಯ ಕ್ಷೇತ್ರದ ಸಂಸದರಾಗಿದ್ದ ಸಿ.ಎಸ್.ಪುಟ್ಟರಾಜು ಅವರು 2018ರ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ಆದ್ದರಿಂದ, ಸಂಸದ ಸ್ಥಾನ ತೆರವಾಗಿದೆ. ಸಂಸತ್ ಉಪ ಚುನಾವಣೆ, ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕುಮಾರಸ್ವಾಮಿ ಅವರು ಜಿಲ್ಲೆಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.

ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ. ರೂ.ಗಳ ವಿಶೇಷ ಪ್ಯಾಕೇಜ್ ಸೇರಿದಂತೆ ವಿವಿಧ ಯೋಜನೆಗಳನ್ನು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಮಂಡ್ಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

Karnataka Buget 2018 : What Mandya gets from Kumaraswamy budget

* ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್

* ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿ ಮಾಡುವುದು. 30 ಕೋಟಿ ಅನುದಾನ

ಕುಮಾರಸ್ವಾಮಿ ಜೆಡಿಸ್ ಭದ್ರಕೋಟೆ ಹಾಸನಕ್ಕೆ ಕೊಟ್ಟಿದ್ದೇನು?ಕುಮಾರಸ್ವಾಮಿ ಜೆಡಿಸ್ ಭದ್ರಕೋಟೆ ಹಾಸನಕ್ಕೆ ಕೊಟ್ಟಿದ್ದೇನು?

* ಗಗನಚುಕ್ಕಿ, ಭರಚುಕ್ಕಿ ಜಲಪಾತ ಪದೇಶದಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ಹೆಚ್ಚುವರಿ ಪ್ರವಾಸಿ ಸೌಲಭ್ಯ ಒದಗಿಸಲು 5 ಕೋಟಿ ರೂ. ಅನುದಾನ

* ಲೋಕಪಾನಿ ನದಿಯಿಂದ ಮಂಡ್ಯ ಜಿಲ್ಲೆಯ ಹಾಗೂ ಇತರೆ ಕೆರೆಗಳಿಗೆ ನೀರು ತುಂಬಿಸುವ ಹಾಗೂ ಮಂಡ್ಯ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು 30 ಕೋಟಿ ರೂ.ಗಳ ಯೋಜನೆ

English summary
Karnataka Chief minister and Finance minister H.D.Kumaraswamy presented Karnataka budget 2018-19 on July 5, 2018. What Mandya get in H.D.Kumaraswamy budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X