Get Updates
Get notified of breaking news, exclusive insights, and must-see stories!

ವಿಧಾನಸಭಾ ಚುನಾವಣೆ: ನನ್ನ ತಂದೆ ಮತ್ತೊಮ್ಮೆ ಸಿಎಂ ಆಗುವುದನ್ನು ನೋಡಬೇಕು ಎಂದ ಯತೀಂದ್ರ ಸಿದ್ದರಾಮಯ್ಯ

ಮಂಡ್ಯ, ಏಪ್ರಿಲ್.02: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ತಮ್ಮ ತಂದೆ ಮತ್ತೊಮ್ಮೆ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಶಾಸಕ ಯತೀಂದ್ರ, ಮಗನಾದ ನನಗೆ ನನ್ನ ತಂದೆ ಮತ್ತೊಮ್ಮೆ ಕರ್ನಾಟಕ ಸಿಎಂ ಆಗುವುದನ್ನು ನೋಡಬೇಕು, ಖಂಡಿತ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು. ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುತ್ತೇನೆ ಎಂದು ನಮ್ಮ ತಂದೆ ಹೇಳಿದ್ದಾರೆ" ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

Karnataka Election 2023: Want to see my father become CM again says Yathindra Siddaramaiah

ಈ ವೇಳೆ ಸಿದ್ದರಾಮಯ್ಯ ಅವರ ಎರಡನೇ ಕ್ಷೇತ್ರ ಇನ್ನೂ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ. ವರುಣಾ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಇಂಗಿತವನ್ನು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದು, ಇನ್ನೂ ಕ್ಷೇತ್ರಗಳು ಅಂತಿಮಗೊಂಡಿಲ್ಲ. ಅವರ ಹೇಳಿಕೆ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟದ ವದಂತಿಗೆ ಪುಷ್ಟಿ ನೀಡಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ನಡುವಿನ ನಾಯಕತ್ವದ ಕಿತ್ತಾಟವು ಪಕ್ಷವನ್ನು ಕತ್ತಲೆಯತ್ತ ತಳ್ಳುತ್ತಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ರಾಜ್ಯದಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಹೋರಾಟ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಬಣಗಳ ನಡುವೆ ಮಾತಿನ ಸಮರ ಮುಂದುವರಿದಿದೆ.

ಈ ಮುಸುಕಿನ ಗುದ್ದಾಟ ಪಕ್ಷದ ಪ್ರಸ್ತುತ ಸ್ವರೂಪದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿದೆ. ಪಕ್ಷದ ಬಹುತೇಕ ನಾಯಕರ ಪ್ರಕಾರ, ಈಗಾಗಲೇ ಹಲವು ಕಾಂಗ್ರೆಸ್ ನಾಯಕರಿಗೆ ಒಳಜಗಳಗಳು 'ದುಃಸ್ವಪ್ನ'ವಾಗಿ ಪರಿಣಮಿಸಿವೆ ಎನ್ನುತ್ತಿದ್ದಾರೆ. ಬಿಜೆಪಿ ಕೂಡ ಈ ಬಗ್ಗೆ ಹಲವು ಬಾರಿ ಟ್ವೀಟ್ ಮಾಡಿದೆ. ಬಿಜೆಪಿ ನಾಯಕರು ಕಾಮಗ್ರೆಸ್‌ನ ಸಿಎಂ ಅಬ್ಯರ್ಥಿ ಬಗ್ಗೆ ಹಲವು ಬಾರಿ ಹೇಳಿಕೆ ನೀಡಿದ್ದಾರೆ.

Karnataka Election 2023: Want to see my father become CM again says Yathindra Siddaramaiah

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಸಿಎಂ ಎಂಬ ಭ್ರಮೆಯಿಂದ ತಮ್ಮ ಪಕ್ಷದ ಹಲವರ ನಿದ್ದೆ ಕೆಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಪಕ್ಷದ ಕಾರ್ಯಕರ್ತರು ಭ್ರಮನಿರಸನಗೊಂಡಿದ್ದಾರೆ. ಆಂತರಿಕ ಸಂಘರ್ಷವನ್ನು ಸರಿಪಡಿಸಲು ದುರ್ಬಲ ಹೈಕಮಾಂಡ್‌ಗೆ ಸಾಧ್ಯವಿಲ್ಲ ಎಂದು ರಾಜ್ಯಕ್ಕೆ ತಿಳಿದಿದೆ ಮತ್ತು ಜನರು ಅವರಿಗೆ ಅಧಿಕಾರ ನೀಡಿದರೆ, ಸಂಘರ್ಷ ಗ್ಯಾರಂಟಿ" ಎಂದಿದ್ದಾರೆ.

ಇನ್ನು, ಕಾಂಗ್ರೆಸ್ ಮೂಲದ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಕೂಡ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಆಡಳಿತಾರೂಢ ಬಿಜೆಪಿ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದೆ ಮತ್ತು ಚುನಾವಣಾ ಆಯೋಗವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುತ್ತದೆ ಎಂದು ಆಶಿಸಿರುವುದಾಗಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೇ 10 ರಂದು ರಾಜ್ಯದಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆಯನ್ನು ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ತಮ್ಮ ಪಕ್ಷವು ಚುನಾವಣೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಈ ಚುನಾವಣೆ ಒಂದೇ ಹಂತದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.

224 ಸದಸ್ಯ ಬಲದ ಅಸೆಂಬ್ಲಿ ಚುನಾವಣೆಗೆ ಏಪ್ರಿಲ್ 13 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 ಆಗಿರುತ್ತದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+