ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ

|
Google Oneindia Kannada News

Recommended Video

Karnataka Elections 2018 : ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ | Oneindia Kannada

ಮಂಡ್ಯ, ಏಪ್ರಿಲ್ 10 : ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ಟಿಕೆಟ್ ಹಂಚಿಕೆ ಗೊಂದಲ ಬಗೆಹರಿದಿದೆ. ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಅವರು ಟಿಕೆಟ್ ಪಡೆದಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

2018ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ನವದೆಹಲಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿದೆ. ಸಭೆಯಲ್ಲಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.

ಮಂಡ್ಯದ ಟಿಕೆಟ್ : ಹೊಸ ಬೇಡಿಕೆ ಮುಂದಿಟ್ಟ ಅಂಬರೀಶ್ಮಂಡ್ಯದ ಟಿಕೆಟ್ : ಹೊಸ ಬೇಡಿಕೆ ಮುಂದಿಟ್ಟ ಅಂಬರೀಶ್

ಮಂಡ್ಯ, ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಆದರೆ, ಮೇಲುಕೋಟೆ ಕ್ಷೇತ್ರದಲ್ಲಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ. ಸ್ವರಾಜ್ ಇಂಡಿಯಾ ಪಕ್ಷದಿಂದ ಕಣಕ್ಕಿಳಿಯಲಿರುವ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಪಕ್ಷ ಬೆಂಬಲಿಸಲಿದೆ.

ಕರ್ನಾಟಕ ರಾಜಕೀಯದ ಚಿತ್ರಣ ಬದಲಿಸಬಲ್ಲ ಆ 10 ಕ್ಷೇತ್ರಗಳುಕರ್ನಾಟಕ ರಾಜಕೀಯದ ಚಿತ್ರಣ ಬದಲಿಸಬಲ್ಲ ಆ 10 ಕ್ಷೇತ್ರಗಳು

ಮದ್ದೂರು ಮತ್ತು ಕೆ.ಆರ್.ಪೇಟೆ ಕ್ಷೇತ್ರಗಳಿಗೆ ಹಲವು ಆಕಾಂಕ್ಷಿಗಳಿದ್ದಾರೆ. ಆದ್ದರಿಂದ, ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಇಂದು ಸ್ಕ್ರೀನಿಂಗ್ ಸಮಿತಿ ಸಭೆ ಮುಗಿಯಲಿದೆ. ಇದೇ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಲಿದೆ.

ಮಂಡ್ಯ ಕ್ಷೇತ್ರಕ್ಕೆ ಅಂಬರೀಶ್

ಮಂಡ್ಯ ಕ್ಷೇತ್ರಕ್ಕೆ ಅಂಬರೀಶ್

ಮಂಡ್ಯ ಕ್ಷೇತ್ರಕ್ಕೆ ಹಾಲಿ ಶಾಸಕ ಅಂಬರೀಶ್ ಅವರು ಅಭ್ಯರ್ಥಿ ಎಂದು ತೀರ್ಮಾನಿಸಲಾಗಿದೆ. ಆದರೆ, ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಇನ್ನೂ ಅಂತಿಮ ತೀರ್ಮಾನ ಪ್ರಕಟಿಸಿಲ್ಲ.

ಅಂಬರೀಶ್ ಅವರು ಸ್ಪರ್ಧೆ ಮಾಡುವ ಕುರಿತು ತೀರ್ಮಾನ ತಿಳಿಸುವಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದರು. ಆದರೆ, ಅಂಬರೀಶ್ ಅವರು ಇನ್ನೂ ಮೌನವಾಗಿದ್ದಾರೆ.

ಅಂಬರೀಶ್ ಅವರಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡುವ ಜೊತೆಗೆ ಕೆ.ಆರ್.ಪೇಟೆ ಮತ್ತು ಮದ್ದೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಮಾಡುವ ಜವಾಬ್ದಾರಿಯನ್ನು ನೀಡಲಾಗಿದೆ. ಅಂಬರೀಶ್ 'ಅಂಬಿ ನಿಂಗೆ ವಯಸ್ಸಾಯ್ತೋ?' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಶ್ರೀರಂಗಪಟ್ಟಣದ ಅಭ್ಯರ್ಥಿ ಯಾರು?

ಶ್ರೀರಂಗಪಟ್ಟಣದ ಅಭ್ಯರ್ಥಿ ಯಾರು?

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ರಮೇಶ್ ಬಂಡಿಸಿದ್ದೇಗೌಡ ಅವರು ಅಭ್ಯರ್ಥಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಜೆಡಿಎಸ್‌ನ ಬಂಡಾಯ ಶಾಸಕರ ಗುಂಪಿನಲ್ಲಿ ಅವರು ಗುರುತಿಸಿಕೊಂಡಿದ್ದರು.

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕೆಪಿಸಿಸಿ ಸದಸ್ಯ ಇಂಡವಾಳು ಸಚ್ಚಿದಾನಂದ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರು ಬಂಡಾಯವೇಳುವ ಸಾಧ್ಯತೆ ಇದ್ದು, ಅವರ ಜೊತೆ ಮಾತುಕತೆ ನಡೆಸಿ ಎಂದು ಜಿಲ್ಲಾ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ನಾಗಮಂಗಲ ಕ್ಷೇತ್ರದ ಅಭ್ಯರ್ಥಿ

ನಾಗಮಂಗಲ ಕ್ಷೇತ್ರದ ಅಭ್ಯರ್ಥಿ

ನಾಗಮಂಗಲ ಕ್ಷೇತ್ರಕ್ಕೆ ಎನ್.ಚಲುವರಾಯಸ್ವಾಮಿ ಅವರು ಅಭ್ಯರ್ಥಿಯಾಗಿದ್ದಾರೆ. ಇವರೂ ಸಹ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್‌ಗೆ ಬಂದವರು. ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡವರು.

ನಾಗಮಂಗಲ ಕ್ಷೇತ್ರಕ್ಕೆ ಜೆಡಿಸ್ ಸುರೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಕಳೆದ ವಾರ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಎಚ್.ಡಿ.ಕುಮರಸ್ವಾಮಿ ಅವರು ಕ್ಷೇತ್ರದಲ್ಲಿ ಪಕ್ಷದ ಬಲ ಕುಸಿದಿಲ್ಲ ಎಂಬ ಸಂದೇಶ ಸಾರಿದ್ದಾರೆ.

ಪಿ.ಎಂ.ನರೇಂದ್ರ ಸ್ವಾಮಿ

ಪಿ.ಎಂ.ನರೇಂದ್ರ ಸ್ವಾಮಿ

ಮಳವಳ್ಳಿ ಕ್ಷೇತ್ರದಲ್ಲಿ ಹಾಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಪಿ.ಎಂ.ನರೇಂದ್ರ ಸ್ವಾಮಿ ಅವರು ಕಳೆದ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ, 2008ರಲ್ಲಿ ಹಾಗು 2013ರಲ್ಲಿ ಗೆಲುವಿನ ನಗೆ ಬೀರಿದ್ದಾರೆ.

2008ರಲ್ಲಿ ಪಕ್ಷೇತರ ಶಾಸಕರಾಗಿದ್ದ ನರೇಂದ್ರಸ್ವಾಮಿ, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದವರು. ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತರಾಗಿರುವ ಅವರಿಗೆ ಈ ಬಾರಿಯೂ ಟಿಕೆಟ್ ನೀಡಲಾಗಿದೆ.

ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ

ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ

ಮೇಲುಕೋಟೆ ಕ್ಷೇತ್ರದಲ್ಲಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುತಿಲ್ಲ. ರೈತ ಸಂಘದ ಅಧ್ಯಕ್ಷ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಪಕ್ಷ ಬೆಂಬಲ ನೀಡಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ದಿನಗಳ ಹಿಂದೆ ದರ್ಶನ್ ಪುಟ್ಟಣ್ಣಯ್ಯ ಸ್ಪರ್ಧೆ ಮಾಡಿದರೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದರು.

ದರ್ಶನ್ ಪುಟ್ಟಣ್ಣಯ್ಯ ಅವರು ಸ್ವರಾಜ್ ಇಂಡಿಯಾ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

English summary
Karnataka Congress finalized party candidates for Mandya district. Ambareesh will contest from Mandya assembly constituency. Here is a probable candidates list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X