ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ

|
Google Oneindia Kannada News

ಮಂಡ್ಯ, ಏಪ್ರಿಲ್ 16 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್‌ ಅವರಿಗೆ ಟಿಕೆಟ್ ನೀಡಲಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮೇಲುಕೋಟೆ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಮಾತು ತಪ್ಪಿದ್ರಾ ಅಂಬರೀಶ್, ಗಣಗಿ ರವಿ ಬಂಡಾಯಕ್ಕೆ ಏನು ಕಾರಣ?ಮಾತು ತಪ್ಪಿದ್ರಾ ಅಂಬರೀಶ್, ಗಣಗಿ ರವಿ ಬಂಡಾಯಕ್ಕೆ ಏನು ಕಾರಣ?

ಮೇಲುಕೋಟೆ ಕ್ಷೇತ್ರದಲ್ಲಿ ಸ್ವರಾಜ್ ಇಂಡಿಯಾದ ಅಭ್ಯರ್ಥಿ, ರೈತ ನಾಯಕ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪಕ್ಷ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರ ಮಂಡ್ಯ. ಮಾಜಿ ಸಚಿವ, ಹಾಲಿ ಶಾಸಕ ಅಂಬರೀಶ್ ಅವರಿಗೆ ಟಿಕೆಟ್ ಸಿಗಲಿದೆಯೇ? ಇಲ್ಲವೇ? ಎಂಬ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಅಂಬರೀಶ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಅಂಬರೀಶ್ ಅಭ್ಯರ್ಥಿ

ಅಂಬರೀಶ್ ಅಭ್ಯರ್ಥಿ

ಮಂಡ್ಯ ಕ್ಷೇತ್ರಕ್ಕೆ ಹಾಲಿ ಶಾಸಕ, ಮಾಜಿ ವಸತಿ ಸಚಿವ ಅಂಬರೀಶ್ ಅವರು ಅಭ್ಯರ್ಥಿ. ಅಂಬರೀಶ್ ಅವರಿಗೆ ಈ ಬಾರಿ ಟಿಕೆಟ್ ಸಿಗಲಿದೆಯೇ? ಇಲ್ಲವೇ ಎಂಬ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಅಂಬರೀಶ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಅಂಬರೀಶ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ವಸತಿ ಖಾತೆ ಸಚಿವರಾಗಿದ್ದರು. ಸಚಿವ ಸಂಪುಟ ಪುನಾರಚನೆ ಸಮಯದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿತ್ತು. ನಂತರ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದರು. ಅವರು ಪಕ್ಷ ಬಿಟ್ಟು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು.

ಪಿ.ನರೇಂದ್ರ ಸ್ವಾಮಿ

ಪಿ.ನರೇಂದ್ರ ಸ್ವಾಮಿ

ಹಾಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರು ಮಳವಳ್ಳಿ ಕ್ಷೇತ್ರದ ಅಭ್ಯರ್ಥಿ. ಕಳೆದ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿರುವ ಅವರು 2008ರಲ್ಲಿ ಹಾಗು 2013ರಲ್ಲಿ ಗೆಲುವಿನ ನಗೆ ಬೀರಿದ್ದಾರೆ.

2008ರಲ್ಲಿ ಪಕ್ಷೇತರ ಶಾಸಕರಾಗಿದ್ದ ನರೇಂದ್ರಸ್ವಾಮಿ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದವರು. ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತರು ಆಗಿದ್ದಾರೆ.

ಜಿ.ಎಂ.ಮಧು

ಜಿ.ಎಂ.ಮಧು

ಮದ್ದೂರು ಕ್ಷೇತ್ರಕ್ಕೆ ಜಿ.ಎಂ.ಮಧು (ಮಧು ಜಿ.ಮಾದೇಗೌಡ) ಅವರು ಅಭ್ಯರ್ಥಿ. ಕಳೆದ ಚುನಾವಣೆಯಲ್ಲಿಯಲ್ಲಿಯೂ ಅವರು ಸ್ಪರ್ಧಿಸಿದ್ದರು. 48,968 ಮತಗಳನ್ನು ಪಡೆದು, ಜೆಡಿಎಸ್‌ನ ಡಿ.ಸಿ.ತಮ್ಮಣ್ಣ ವಿರುದ್ಧ ಸೋಲು ಕಂಡಿದ್ದರು.

ರಮೇಶ್ ಬಂಡಿಸಿದ್ದೇಗೌಡ

ರಮೇಶ್ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ರಮೇಶ್ ಬಾಬು ಬಂಡಿಸಿದ್ದೇಗೌಡ ಅಭ್ಯರ್ಥಿ. 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದರು. 2016ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಚೆಲುವರಾಯಸ್ವಾಮಿ ಹಾಗು ಜಮೀರ್ ಅಹಮದ್ ಖಾನ್ ಜೊತೆಗೆ ಅಡ್ಡಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡರು. ನಂತರ ಕಾಂಗ್ರೆಸ್ ಸೇರಿದ್ದು ಟಿಕೆಟ್ ನೀಡಲಾಗಿದೆ.

ಎನ್.ಚೆಲುವರಾಯಸ್ವಾಮಿ

ಎನ್.ಚೆಲುವರಾಯಸ್ವಾಮಿ

ನಾಗಮಂಗಲ ಕ್ಷೇತ್ರಕ್ಕೆ ಎನ್.ಚೆಲುವರಾಯಸ್ವಾಮಿ ಅಭ್ಯರ್ಥಿ. 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದರು. 2016ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಚೆಲುವರಾಯಸ್ವಾಮಿ ಅವರು ಅಡ್ಡಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡರು. ನಂತರ ಕಾಂಗ್ರೆಸ್ ಸೇರಿದ್ದು ಟಿಕೆಟ್ ನೀಡಲಾಗಿದೆ.

ಕೆ.ಬಿ.ಚಂದ್ರಶೇಖರ್ ಅಭ್ಯರ್ಥಿ

ಕೆ.ಬಿ.ಚಂದ್ರಶೇಖರ್ ಅಭ್ಯರ್ಥಿ

ಕೃಷ್ಣರಾಜಪೇಟೆ (ಕೆ.ಆರ್.ಪೇಟೆ) ಕ್ಷೇತ್ರಕ್ಕೆ ಕೆ.ಬಿ.ಚಂದ್ರಶೇಖರ್ ಅವರು ಅಭ್ಯರ್ಥಿ. 2013ರ ಚುನಾವಣೆಯಲ್ಲಿ ಅವರು 47,541 ಮತಗಳನ್ನು ಪಡೆದು ಜೆಡಿಎಸ್‌ನ ನಾರಾಯಣ ಗೌಡ ವಿರುದ್ಧ ಸೋಲು ಕಂಡಿದ್ದಾರೆ.

English summary
Karnataka Congress announced 1st list of candidates for Karnataka assembly elections 2018. In Mandya district candidates announced for all 6 assembly constituency. Here are the candidates brief profiles of the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X