ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಸ್ಥಿತಿ ಏನು, ಗತಿ ಯಾರು?
ಮಂಡ್ಯ, ಏಪ್ರಿಲ್ 18 : ಭಾರೀ ಕುತೂಹಲ ಕೆರಳಿಸಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಮಧ್ಯೆ ನೇರ ಜಟಾಪಟಿ ಆರಂಭವಾಗಿದೆ.
ರೈತಸಂಘದ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ಹಾಗೂ ಅನುಕಂಪ ಇರುವುದರಿಂದಾಗಿ ಜೆಡಿಎಸ್ ಅಭ್ಯರ್ಥಿ ಪುಟ್ಟರಾಜು ಅವರಿಗೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಆದರೂ ಬಿಜೆಪಿಯ ಸಂಭವನೀಯ ಅಭ್ಯರ್ಥಿ ಎಂದು ಹೇಳಲಾಗುತ್ತಿರುವ ಮಂಜುನಾಥ್ ಅವರು ಕ್ಷೇತ್ರದಲ್ಲಿ ಓಡಾಡುತ್ತಾ, ಸಂಘಟನೆಯಲ್ಲಿ ತೊಡಗಿದ್ದಾರೆ.
ಹಾಗೆ ನೋಡಿದರೆ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ರೀತಿಯಲ್ಲೂ ಪ್ರಬಲವಾಗಿಲ್ಲ. ಜತೆಗೆ ರೈತಸಂಘದ ಮತ್ತು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನಿಂತು ಗೆಲ್ಲುವುದು ಅಷ್ಟು ಸುಲಭವೂ ಅಲ್ಲ. ಆದರೂ ಎಚ್.ಮಂಜುನಾಥ್ ಅವರು ತಾನು ಇಬ್ಬರಿಗೂ ಪೈಪೋಟಿ ನೀಡುವುದಾಗಿ ಹೇಳುತ್ತಿದ್ದಾರೆ.

ಇನ್ನೂ ಬಿಜೆಪಿಯಿಂದ ಅವರನ್ನು ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ತಾವೇ ಅಭ್ಯರ್ಥಿ ಎಂಬಂತೆ ಕ್ಷೇತ್ರದಲ್ಲಿ ಓಡಾಡುತ್ತಿದ್ದು, ಈಗಾಗಲೇ ತಾಲೂಕಿನ ಬೆಳ್ಳಾಳೆ, ಮಾಣಿಕ್ಯನಹಳ್ಳಿ ಹಾಗೂ ಟಿ.ಎಸ್.ಛತ್ರ ಗ್ರಾಮದಲ್ಲಿ ತಮ್ಮ ಬೆಂಬಲಿಗರೊಂದಿಗೆ ಮತ ಪ್ರಚಾರ ನಡೆಸಿ, ಸಂಘಟನೆಯಲ್ಲಿ ತೊಡಗಿದ್ದಾರೆ.
ಬಿಜೆಪಿಯ ರಾಜ್ಯ ನಾಯಕರು ಯಾವ ರೀತಿ ನಿರ್ಧಾರ ಕೈಗೊಳ್ಳುತ್ತಾರೆ? ಎಚ್.ಮಂಜುನಾಥ್ ಅವರಿಗೆ ಸಾಥ್ ನೀಡುತ್ತಾರಾ? ಕಾದು ನೋಡಬೇಕಿದೆ.











Click it and Unblock the Notifications