ಮಂಡ್ಯ:ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರ ವಿರುದ್ಧ ರೈತರ ಪ್ರತಿಭಟನೆ
ರಸಗೊಬ್ಬರ, ಕೀಟ ನಾಶಕ, ಕಾರ್ಮಿಕರ ಕೂಲಿ, ಉಳುಮೆ ವೆಚ್ಚ ಮುಂತಾದ ವೆಚ್ಚಗಳು ದುಪ್ಪಟ್ಟಾಗಿದ್ದು, ಉತ್ಪಾದನಾ ವೆಚ್ಚ ಅಧಿಕಾರವಾಗಿರುವ ಕಾರಣ ಕಬ್ಬಿಗೆ ಟನ್ ಒಂದಕ್ಕೆ ಕನಿಷ್ಠ 4,500 ರೂ ರಾಜ್ಯ ಸಲಹಾ ಬೆಲೆ(ಎಸ್.ಎ.ಪಿ) ನಿಗದಿ ಮಾಡಬೇಕು ಎಂದು ಮಂಡ್ಯದಲ್ಲಿ ರೈತರು ಪ್ರತಿಭಟಿ
ಮಂಡ್ಯ, ಫೆಬ್ರವರಿ 13 : ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ(ಮೂಲ ಸಂಘಟನೆ)ದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಜಯಂತಿ ಅಂಗವಾಗಿ ನಗರದ ಸರ್‌ಎಂ.ವಿ.ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು.
ರಸಗೊಬ್ಬರ, ಕೀಟ ನಾಶಕ, ಕಾರ್ಮಿಕರ ಕೂಲಿ, ಉಳುಮೆ ವೆಚ್ಚ ಮುಂತಾದ ವೆಚ್ಚಗಳು ದುಪ್ಪಟ್ಟಾಗಿದ್ದು, ಉತ್ಪಾದನಾ ವೆಚ್ಚ ಅಧಿಕಾರವಾಗಿರುವ ಕಾರಣ ಕಬ್ಬಿಗೆ ಟನ್ ಒಂದಕ್ಕೆ ಕನಿಷ್ಠ 4,500 ರೂಪಾಯಿ ರಾಜ್ಯ ಸಲಹಾ ಬೆಲೆ(ಎಸ್.ಎ.ಪಿ) ನಿಗದಿ ಮಾಡಬೇಕು. ಪಶು ಆಹಾರದ ಬೆಲೆ ಹೆಚ್ಚಳ ಹಾಗೂ ಪಶು ಸಾಕಾಣಿಕೆ ನಿರ್ವಹಣಾ ವೆಚ್ಚ ಹೆಚ್ಚಾಗಿದ್ದು, ಪ್ರತಿ ಲೀಟರ್ ಹಾಲಿಗೆ ಕನಿಷ್ಠ 40 ಮತ್ತು ಸರ್ಕಾರದ ಸಹಾಯ ಧನ 8ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತಂದಿರುವ ಮಾರಕ ಕೃಷಿ ಕಾಯ್ದೆಗಳು ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮಾರಾಟವನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸುವ ಹುನ್ನಾರ ನಡೆಸುತ್ತಿದೆ. ಕೃಷಿ ಕ್ಷೇತ್ರವನ್ನು ಕಡೆಗಣಿಸಿ ರೈತರು ಕೃಷಿಯಿಂದ ವಿಮುಖರಾಗುವಂತೆ ಮಾಡಿ ಕೃಷಿಯನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸುವ ಹುನ್ನಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿರುವ ಕೆರೆ ಕಟ್ಟೆಗಳು ಹೂಳು ತುಂಬಿ ಕೆರೆಗಳು ಮುಚ್ಚಿಹೋಗುತ್ತಿದ್ದು, ಈ ಬೇಸಿಗೆ ಅವಧಿಯಲ್ಲಿ ಎಲ್ಲ ಕರೆ ಕಟ್ಟೆಗಳ ಹೂಳು ತೆಗೆಸಿ, ಕೆರೆ ಕಟ್ಟೆಗಳ ಪುನಃಶ್ಚೇತನ ಮಾಡಬೇಕು. ಆ ಮೂಲಕ ಅಂತರ್ಜಲ ವೃದ್ಧಿಯಾಗಲು ಕ್ರಮವಹಿಸಬೇಕು. ಕೇಂದ್ರ ಸರ್ಕಾರ ಮೂರು ಮಾರಕ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆದಂತೆ ರಾಜ್ಯ ಸರ್ಕಾರವು ಕೂಡ ಮೂರು ಮಾರಕ ಕೃಷಿ ಕಾಯಿದೆಗಳಾದ ಭೂ ಸುಧಾರಣಾ ತಿದ್ದುಪಡಿ ಕಾಯಿದೆ 2020, ಎಪಿಎಂಸಿ ತಿದ್ದುಪಡಿ ಕಾಯಿದೆ 2020 ಹಾಗೂ ಜಾನುವಾರು ಕಾಯಿದೆ 2020, ಎಪಿಎಂಸಿ ತಿದ್ದುಪಡಿ ಕಾಯಿದೆ 2020 ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯಿದೆ 2020 ಅನ್ನು ಕೂಡಲೇ ರದ್ದು ಪಡಿಸಬೇಕು ಎಂದು ಆಗ್ರಹ ಪಡಿಸಿದರು.
ಸೇವಾ ವಲಯವಾದ ವಿದ್ಯುತ್ ಕ್ಷೇತ್ರವನ್ನು ವಿದ್ಯುತ್ ಕಾಯಿದೆಗೆ ತಿದ್ದುಪಡಿ ತಂದು ಖಾಸಗಿ ಕರಣ ಮಾಡಲು ಹೊರಟಿರುವ ಕ್ರಮವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು. ಖಾಸಗಿ ಕರಣದಿಂದ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ನಿಂತಲ್ಲಿ ಆಹಾರ ಉತ್ಪಾದನೆ ಮೇಲೆ ಹಾಗೂ ಭಾಗ್ಯ ಜ್ಯೋತಿ ಕುಟೀರ ಜ್ಯೋತಿ ಮುಂತಾದ ಯೋಜನೆಗಳಲ್ಲಿ ವಿದ್ಯುತ್ ಬಳಕೆದಾರರ ಮೇಲೆ ದುಷ್ಪರಿಣಾಮ ಬೀರಲಿದ್ದು, ಈ ವಿದ್ಯುತ್ ತಿದ್ದುಪಡಿ ಕಾಯಿದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು
ಮುಂಗಾರು ಸಕಾಲಕ್ಕೆ ಬಿದ್ದ ಕಾರಣ ಜಿಲ್ಲೆಯಲ್ಲಿ ರಾಗಿಯು ಉತ್ತಮ ಪಸಲು ಬಂದಿರುವ ಕಾರಣ ರಾಗಿಗೆ ಕ್ವಿಂಟಾಲ್ ಕನಿಷ್ಠ 5,000 ರೂಪಾಯಿಗೆ ಬೆಲೆ ನಿಗದಿ ಪಡಿಸಬೇಕು. ಕೊಬ್ಬರಿ ಬೆಲೆ ಕುಸಿದಿದ್ದು ರಾಜ್ಯ ಸರ್ಕಾರ ನಿಗದಿ ಪಡಿಸಿರುವ ಬೆಂಬಲ ಬೆಲೆ 11,750 ರೂ ಅವೈಜ್ಞಾನಿಕ ಬೆಲೆಯಾಗಿದ್ದು, ಕೊಬ್ಬರಿಗೆ ಕನಿಷ್ಠ 18,000 ರೂ ಬೆಲೆ ನಿಗದಿಪಡಿಸಬೇಕು. ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ವಿದ್ಯುತ್ ಬಾಕಿ ಬಲವಂತವಾಗಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಮುಂಬರುವ ಬೇಸಿಗೆ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಕೆರೆ ಕಟ್ಟೆಗಳ ಹೂಳು ತೆಗೆಸಬೇಕು. ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಬೇಕು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ದುಬಾರಿ ಬಡ್ಡಿಯನ್ನು ವಿಧಿಸಿ ಒತ್ತೆ ಇಟ್ಟ ಚಿನ್ನಾಭರಣಗಳನ್ನು ಬಿಡಿಸಿಕೊಳ್ಳಲಾಗದ ಸ್ಥಿತಿಗೆ ತಂದೊಂಡಿದ್ದು ಈ ಸಂಸ್ಥೆಗಳ ಮೇಲೆ ನಿಯಂತ್ರಣ ತರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್‌ಗೌಡ, ಗೌರವ ಅಧ್ಯಕ್ಷ ಬೋರಾಪುರ ಶಂಕರೇಗೌಡ, ಉಪಾಧ್ಯಕ್ಷ ಕೆ.ನಾಗೇಂದ್ರಸ್ವಾಮಿ, ಮುಖಂಡರಾದ ಡಿ.ಎಸ್.ಚಂದ್ರಶೇಖರ್, ಬೋರಲಿಂಗೇಗೌಡ, ತೇಜಸ್ ಕೋಡಿಶೆಟ್ಟಿಪುರ, ಕೆ.ರಾಮಲಿಂಗೇಗೌಡ, ಪ್ರಭುಲಿಂಗೇಗೌಡ ಭಾಗವಹಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications