Government Employee: ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಕೆಎಎಸ್ ಅಧಿಕಾರಿ
ಮಂಡ್ಯ, ಡಿಸೆಂಬರ್ 02: ಕೆಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆಯುವ ಅಧಿಕಾರಿ ಸ್ವಾಮೀಜಿಯಾಗಿ ಮುಂದಿನ ಜೀವನವನ್ನು ಕಳೆಯಲಿದ್ದಾರೆ. ಡಾ. ಹೆಚ್. ಎಲ್. ನಾಗರಾಜು ಹೆಸರಿನ ಅಧಿಕಾರಿ ಹಾಲಿ ಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಯನ್ನು ನೋಡಿಕೊಳ್ಳುತ್ತಿದ್ದಾರೆ.
ಮಂಡ್ಯ ಅಪರ ಜಿಲ್ಲಾಧಿಕಾರಿ ಹೆಚ್. ಎಲ್. ನಾಗರಾಜು ಕೆಲವೇ ದಿನಗಳಲ್ಲಿ ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಎಂದು ಟಿವಿ 9 ವರದಿ ಮಾಡಿದೆ. ಆಧ್ಯಾತ್ಮದ ಕಡೆ ಹೆಚ್ಚಿನ ಒಲವು ಹೊಂದಿರುವ ಹೆಚ್. ಎಲ್. ನಾಗರಾಜು ಈ ತೀರ್ಮಾನ ಅಚ್ಚರಿಗೆ ಕಾರಣವಾಗಿದೆ.

ಈ ಹಿಂದೆ ಸಹ ಹೆಚ್. ಎಲ್. ನಾಗರಾಜು 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದರು. ಆಗ ಅವರು ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ತಮ್ಮ ಹೆಸರನ್ನು ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಬದಲಾವಣೆ ಮಾಡಿಕೊಂಡಿದ್ದರು.
ಒತ್ತಡಕ್ಕೆ ಮಣಿದಿದ್ದರು: ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಹೆಚ್. ಎಲ್. ನಾಗರಾಜು ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದು ತಮ್ಮ ಹೆಸರನ್ನು ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಬದಲಾವಣೆ ಮಾಡಿಕೊಂಡಿದ್ದರು. ಆದರೆ ಸಾರ್ವಜನಿಕರು, ಕುಟುಂಬದವರ ವಿರೋಧ ಮಣಿದಿದ್ದರು. ಸರ್ಕಾರಿ ಉದ್ಯೋಗಕ್ಕೆ ವಾಪಸ್ ಆಗಿದ್ದರು. ಈಗ ಮತ್ತೊಮ್ಮೆ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ.
ಸುಮಾರು 2 ವರ್ಷಗಳಿಂದ ಮಂಡ್ಯ ಅಪರ ಜಿಲ್ಲಾಧಿಕಾರಿಗಳಾದಿ ಡಾ. ಹೆಚ್. ಎಲ್ ನಾಗರಾಜು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಸದ್ಯ ಅವರು ಡಿಸೆಂಬರ್ 20ರಿಂದ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸಮ್ಮೇಳನ ಮುಗಿಯುತ್ತಿದ್ದಂತೆಯೇ ಅವರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿ ಹೇಳಿದೆ.
ಡಾ. ಹೆಚ್. ಎಲ್ ನಾಗರಾಜು ಅವರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಸದ್ಯಕ್ಕೆ ಈ ಕುರಿತು ಡಾ. ಹೆಚ್. ಎಲ್ ನಾಗರಾಜು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸನ್ಯಾಸ ದೀಕ್ಷೆ ಸ್ವೀಕಾರ: 16 ಜುಲೈ 2011ರಂದು ಡಾ. ಹೆಚ್. ಎಲ್ ನಾಗರಾಜು ದಿಢೀರ್ ಬೆಳವಣಿಗೆಯಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿದ್ದರು. ಗುರು ಪೂರ್ಣಿಮಾ ದಿನವಾದ ಶುಕ್ರವಾರ ಅವರು ಸನ್ಯಾಸ ದೀಕ್ಷೆ ಪಡೆದುಕೊಂಡಿದ್ದರು. ಆಗ ಅವರು ಕೆ. ಆರ್. ಪೇಟೆಯ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಸನ್ಯಾಸ ದೀಕ್ಷೆ ಪಡೆದ ಬಳಿಕ ಅವರ ಹೆಸರು ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಬದಲಾಗಿತ್ತು. ಈ ಕುರಿತು ಮಾತನಾಡಿದ್ದ ಅವರು, "ಈ ಹಂತದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ದೊಡ್ಡ ಸ್ವಾಮೀಜಿಗಳು ಮಾತನಾಡಲು ಸಮ್ಮತಿಸಿದರೆ ಪ್ರತಿಕ್ರಿಯೆ ನೀಡುತ್ತೇನೆ" ಎಂದು ಹೇಳಿದ್ದರು.
ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಡಾ. ಹೆಚ್. ಎಲ್. ನಾಗರಾಜು, ಹೊನ್ನೆನಹಳ್ಳಿ ಗ್ರಾಮದ ಲಿಂಗಯ್ಯ, ಹೊನ್ನಮ್ಮ ದಂಪತಿಗಳ ಪುತ್ರ. 2005ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ. ಸನ್ಯಾಸ ದೀಕ್ಷೆ ಪಡೆಯುವಾಗ ಅವರು ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಿರಲಿಲ್ಲ. ಸದ್ಯ ಅವರು ರಜೆ ಮೇಲೆ ಇದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದರು.
ಆದರೆ ಜುಲೈ 31ರಂದು ದಿಢೀರ್ ಬೆಳವಣಿಗೆಯಲ್ಲಿ ಡಾ. ಹೆಚ್. ಎಲ್ ನಾಗರಾಜು ಸನ್ಯಾಸ ದೀಕ್ಷೆ ತೊರೆದು ಸರ್ಕಾರಿ ಸೇವೆಗೆ ಮರಳಲು ಬಯಸಿದ್ದರು. 15 ದಿನಗಳ ರಜೆಯ ಬಳಿಕ ಸನ್ಯಾಸ ದೀಕ್ಷೆ ತೊರೆದು ಕರ್ತವ್ಯಕ್ಕೆ ಮರಳುತ್ತೇನೆ ಎಂದು ಅವರು ಘೋಷಣೆ ಮಾಡಿದ್ದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications