ಕೆರಗೋಡು ಧ್ವಜ ವಿವಾದ: ಮಂಡ್ಯ ಬಂದ್‌ಗೆ ಸಹಕರಿಸುವಂತೆ ಗುಲಾಬಿ ಹೂ ನೀಡಿ ಮನವಿ
ಮಂಡ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ನಗರದ ವರ್ತಕರು ಮತ್ತು ಅಂಗಡಿ ವ್ಯಾಪರಸ್ಥರಿಗೆ ಗುಲಾಬಿ ಹೂ ನೀಡಿ ಸ್ವಯಂ ಪ್ರೇರಿತ ಮಂಡ್ಯ ನಗರ ಬಂದ್‌ಗೆ ಮನವಿ ಮಾಡಿದರು. ಶುಕ್ರವಾರ ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ.
ಬೇಕರಿ ಮಾಲೀಕರ ಸಂಘದ ಅಧ್ಯಕ್ಷ ಎಚ್.ಆರ್. ಅರವಿಂದ್ ಮಾತನಾಡಿ, ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ಬಗ್ಗೆ, ಕೆರಗೋಡು ಗ್ರಾಮಸ್ಥರು ಎಷ್ಟೇ ಮನವಿ ಮಾಡಿದರು ಬೆಲೆ ಕೊಡದ ಜಿಲ್ಲಾಡಳಿತ ಹಾಗು ಕಾಂಗ್ರೆಸ್ ಸರ್ಕಾರ ಹಿಂದೂಗಳ ದಮನಕಾರಿ ನೀತಿ ಅನುಸರಿಸುತ್ತಿದೆ, ಪಂಚಾಯಿತಿ ಸದಸ್ಯರ ನಿರ್ಣಯ ಹನುಮ ಧ್ವಜದ ಪರವಾಗಿದ್ದರೂ ಬೇಕೆಂದೇ ಗೊಂದಲ ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.

ಜನವರಿ 26 ರಂದು ರಾಷ್ಟ್ರೀಯ ಧ್ವಜ ಹಾರಿಸಿ ಗೌರವ ಸೂಚಿಸಲಾಯಿತು, ದೇಶ ಭಕ್ತಿಯ ಬಗ್ಗೆ ಮಂಡ್ಯದ ಜನರಿಗೆ ಕಾಂಗ್ರೆಸ್ ಪಾಠ ಮಾಡಬೇಕಿಲ್ಲ, ಭಾರತವನ್ನು ತುಂಡರಿಸುವ, ಕರ್ನಾಟಕವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ಮಾತನಾಡಿರುವ ಕಾಂಗ್ರೆಸ್ ಪಕ್ಷದಿಂದ ರಾಷ್ಟ್ರಭಕ್ತಿಯ, ಭಾರತ ಅಖಂಡತೆಯ ಬಗ್ಗೆ ಮಾತುಗಳು ಹಾಸ್ಯಾಸ್ಪದ, ರಾಮ ಭಕ್ತಿ-ರಾಷ್ಟ್ರ ಶಕ್ತಿ, ನಾವು ಹನುಮನ ನಾಡಿನವರು ಎಂದರು.
ಧ್ವಜ ಹಾರಿಸುವವರೆಗೂ ಹೋರಾಟ ನಿಲ್ಲಲ್ಲ
ಹನುಮ ಧ್ವಜವನ್ನು ಹಾರಿಸುವವರಗೂ ನಮ್ಮ ಹೋರಾಟ ನಿರಂತವಾಗಿರುತ್ತದೆ. ಹಾಗಾಗಿ ಮಂಡ್ಯನಗರ ಬಂದ್‌ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಯಂ ಪ್ರೇರಿತ ಬಂದ್‌ಗೆ ಸಹಕರಿಸಿ ಎಂದರು.
ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಸಹಕಾರ ನೀಡಿ, ಬಲವಂತ ಮಾಡುವುದಿಲ್ಲ, ಸಾವಿರಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಮಂಡ್ಯ ನಗರದಲ್ಲಿ ಬೈಕ್ ಮೂಲಕ ತೆರಳಿ ಮನವಿ ಮಾಡಲಿದ್ದಾರೆ ಎಂದು ಹೇಳಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications