ಆಂಜನೇಯ ಧ್ವಜ ಇಳಿಸಿದ ಅಧಿಕಾರಿಗಳು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ : ತಾಲೂಕಿನ ಕೆರಗೋಡು ಗ್ರಾಮದಲ್ಲಿ ಸ್ಥಾಪಿಸಿರುವ 108 ಅಡಿ ಆಂಜನೇಯ ಅರ್ಜುನ ಧ್ವಜಸ್ತಂಭದಲ್ಲಿನ ಹನುಮ ಧ್ವಜವನ್ನು ತೆರವು ಮಾಡಲು ಅಧಿಕಾರಿಗಳು ಮುಂದಾಗಿರುವುದರ ವಿರುದ್ಧ ಗ್ರಾಮವನ್ನು ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಗೌರಿಶಂಕರ ಸೇವಾ ಟ್ರಸ್ಟ್ ವತಿಯಿಂದ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯದ ಮುಂದೆ 40 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡಲು ಮುಂದಾಗಿದ್ದರು. ಈ ವಿಚಾರ ತಿಳಿದ ಕೆಲವರು ನಾವೂ ಅದಕ್ಕೆ ಸಹಕಾರ ನೀಡುತ್ತೇವೆ 60 ಅಡಿ ಧ್ವಜಸ್ತಂಭ ನಿರ್ಮಾಣ ಮಾಡುವಂತೆ ಸಲಹೆ ನೀಡಿದ್ದರು.

ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಶಾಸಕ ಪಿ. ರವಿಕುಮಾರ್ ಅವರು ಈ ಸ್ಥಳದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸುವ ಜೊತೆಗೆ ಗ್ರಾಮವನ್ನು ಸಿಂಗಪೂರ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಒಂದು ವೇಳೆ ಈ ಸ್ಥಳದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡುವುದರಿಂದ ಬಸ್ ನಿಲ್ದಾಣಕ್ಕೆ ತೊಂದರೆಯಾಗಬಹುದು ಎಂದು ಸಲಹೆ ನೀಡಿದ್ದರು.
ಶಾಸಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಯುವಕರು, ತಾವು ತೋರಿಸಿದ ಸ್ಥಳದಲ್ಲೇ ನಾವು ಧ್ವಜಸ್ತಂಭ ನಿರ್ಮಾಣ ಮಾಡುವುದಾಗಿ ಹೇಳಿ, ಸ್ಥಳ ನಿಯೋಜನೆ ಮಾಡುವಂತೆ ಮನವಿ ಮಾಡಿದರು. ಮೇಲ್ಬಾಗದ ರಂಗಮಂದಿರ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡುವಂತೆ ಸ್ವತಃ ಶಾಸಕರೇ ತಿಳಿಸಿದರು. ಶಾಸಕರ ಸಲಹೆ ಮೇರೆಗೆ ಟ್ರಸ್ಟ್ ವತಿಯಿಂದ ನಿರ್ಮಿಸಲುದ್ದೇಶಿಸಿದ್ದ 60 ಅಡಿ ಧ್ವಜಸ್ತಂಭಕ್ಕೆ ಬದಲಾಗಿ ಸುತ್ತಮುತ್ತಲ ಗ್ರಾಮಸ್ಥರ ಸಹಕಾರದಿಂದ ಸುಮಾರು 3.50 ಲಕ್ಷ ರೂ. ವೆಚ್ಚದಲ್ಲಿ 108 ಅಡಿ ಧ್ವಜಸ್ತಂಭ ನಿರ್ಮಾಣ ಮಾಡಿ ಅದಕ್ಕೆ ಶ್ರೀ ಆಂಜನೇಯ ಅರ್ಜುನ ಧ್ವಜಸ್ತಂಭ ಎಂದು ಹೆಸರಿಸಲಾಗಿದೆ.
ಅಂಬಾರಿ ಹೊರುತ್ತಿದ್ದ ಅರ್ಜುನನ ಹೆಸರು
ಇತ್ತೀಚೆಗೆ ಕಾಡಾನೆ ಹಿಡಿಯುವ ಕಾರ್ಯಾಚಾರಣೆ ವೇಳೆ ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಸಾವಿಗೀಡಾಗಿದ್ದು, ಅದರ ನೆನಪಿಗಾಗಿ ಶ್ರೀ ಆಂಜನೇಯ ಅರ್ಜುನ ಧ್ವಜಸ್ತಂಭ ಎಂದು ನಾಮಕರಣ ಮಾಡಲಾಗಿದೆ ಎಂದು ಟ್ರಸ್ಟ್ ಸದಸ್ಯರು ತಿಳಿಸಿದರು.
ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಸಂದರ್ಭದಲ್ಲಿ ಈ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಮತ್ತು ನಾಡ ಧ್ವಜವನ್ನು ಹಾರಿಸಲಾಗುವುದು ಉಳಿದ ದಿನಗಳಲ್ಲಿ ರಾಷ್ಟ್ರ ಧ್ವಜವನ್ನು ನಿತ್ಯ ಹಾರಿಸಬಾರದೆಂಬ ಕಾರಣಕ್ಕೆ ಬೇರೆ ದಿನಗಳಲ್ಲಿ ಶ್ರೀ ಆಂಜನೇಯಸ್ವಾಮಿಯ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಲಾಗಿತ್ತು.
ಧ್ವಜ ಸ್ತಂಭ ನಿರ್ಮಾಣಕ್ಕೆ ಸ್ಥಳೀಯ ಪಂಚಾಯಿತಿಯಿಂದ ಅನುಮೋದನೆ ಪಡೆಯುವ ಉದ್ದೇಶದಿಂದ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿತ್ತು. ಪಂಚಾಯಿತಿ ಸಭೆ ಕರೆಯಲಾಗಿದ್ದು, ಇದರಲ್ಲಿ 22 ಮಂದಿಯ ಪೈಕಿ 20 ಮಂದಿ ಸದಸ್ಯರು ಹಾಜರಾಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ 17 ಮಂದಿ ಸದಸ್ಯರು ಧ್ವಜಸ್ತಂಭ ಸ್ಥಾಪಕರ ಪರವಾಗಿ, ಇಬ್ಬರು ತಟಸ್ಥರಾಗಿ ಮತ್ತು ಮತ್ತೋರ್ವ ಸದಸ್ಯ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಂಡರು. ಒಟ್ಟಾರೆ ಬಹುಮತದ ಆಧಾರದ ಮೇರೆಗೆ ಧ್ವಜಸ್ತಂಭ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.
ಕಳೆದ ಜ. 20ರಂದು ಗ್ರಾಮದಲ್ಲಿ ಸರಳ ಸಮಾರಂಭದಲ್ಲಿ ಧ್ವಜಸ್ತಂಭ ಉದ್ಘಾಟಿಸಿ ಆಂಜನೇಯಸ್ವಾಮಿ ಧ್ವಜವನ್ನು ಹಾರಿಸಲಾಯಿತು. ನಿನ್ನೆಯ ಗಣರಾಜ್ಯೋತ್ಸವ ವೇಳೆ ರಾಷ್ಟ್ರಧ್ವಜವನ್ನು ಹಾರಿಸಿ, ಸಂಜೆ ಮತ್ತೆ ಆಂಜನೇಯಸ್ವಾಮಿ ಧ್ವಜ ಹಾರಿಸಲಾಯಿತು. ಇದನ್ನು ಸಹಿಸದ ಕೆಲವರು ಪಿತೂರಿ ನಡೆಸಿ ತಾಪಂ ಇಓಗೆ ದೂರು ನೀಡಿದ್ದಾರೆನ್ನಲಾಗಿದೆ. ದೂರಿನನ್ವಯ ಇಂದು ತಾಪಂ ಇಓ ವೀಣಾ ಅವರು ಸ್ಥಳ ಪರಿಶೀಲನೆ ನಡೆಸಿ ಆಂಜನೇಯಸ್ವಾಮಿ ಧ್ವಜ ತೆರವುಗೊಳಿಸುವಂತೆ ಸೂಚನೆ ನೀಡಿದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿದರು. ಬಳಿಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಪಂ ಇಓ ವೀಣಾ ಮತ್ತು ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ನೇತೃತ್ವದಲ್ಲಿ ಸಭೆ ನಡೆಸಿ ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರ ಸಲಹೆ ಮೇರೆಗೆ ಆಂಜನೇಯಧ್ವಜ ತೆರವನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.
ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮೇಲಧಿಕಾರಿಗಳಿಗೆ ತಿಳಿಸಿ ಅವರ ಸೂಚನೆ ಮೇರೆಗೆ ನಿರ್ಧಾರ ಪ್ರಕಟಿಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ವಾಪಸ್ಸು ಪಡೆದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications