ಕೊರೊನಾ ಸೋಂಕಿಗೆ ಒಳಗಾಗಿರುವ ಕೆರೆ ಕಾಮೇಗೌಡ್ರ ಆರೋಗ್ಯ ಸ್ಥಿತಿ ಗಂಭೀರ: ಎಚ್ಡಿಕೆ ಟ್ವೀಟ್

ಮಂಡ್ಯ, ಜುಲೈ 25: ಕೊರೊನಾ ಸೋಂಕಿಗೆ ಒಳಗಾಗಿರುವ ಕೆರೆ ಕಾಮೇಗೌಡ್ರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Recommended Video

      Operation White Wash ರಹಸ್ಯ ಆಪರೇಷನ್ ವೈಟ್ ವಾಶ್ ಕಂಪ್ಲೀಟ್ ಮಾಹಿತಿ | Oneindia Kannada

      ಪ್ರಕೃತಿ ಮತ್ತು ಪ್ರಾಣಿಗಳ ಪಾಲಿಗೆ ಆಧುನಿಕ ಭಗೀರಥ ಎನಿಸಿದ್ದ ಮಂಡ್ಯದ ರೈತ ಕಾಮೇಗೌಡರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು. ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

      "ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

      Kere Kame Gowda Health Condition Is Critical: Former CM HD Kumaraswamy Tweet

      "ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ" ಇದು ಕುಮಾರಸ್ವಾಮಿ ಮಾಡಿರುವ ಟ್ವೀಟ್.

      ರೈತ ಕಾಮೇಗೌಡರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸುವುದಕ್ಕಾಗಿ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ವೈದ್ಯಕೀಯ ತಪಾಸಣೆ ವರದಿಯ ಪ್ರಕಾರ, ಕಾಮೇಗೌಡರಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿತ್ತು.

      ಕೊರೊನಾ ಸೋಂಕಿತ ಕಾಮೇಗೌಡರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರು ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+