ಅಕ್ಟೋಬರ್ 5ರಂದು ಯಾವೆಲ್ಲಾ ಕಾರ್ಯಕ್ರಮಗಳಿರಲಿವೆ?-ಇಲ್ಲಿದೆ ಸಂಪೂರ್ಣ ಮಾಹಿತಿ
ಮಂಡ್ಯ, ಅಕ್ಟೋಬರ್, 04: ಮೈಸೂರು ದಸರಾದ ಆದಿ ಸ್ಥಳವಾದ ಶ್ರೀರಂಗಪಟ್ಟಣದಲ್ಲಿ ದಸರಾಗೆ ಶುಕ್ರವಾರ (ಅಕ್ಟೋಬರ್ 04) ವಿದ್ಯುಕ್ತ ಚಾಲನೆ ದೊರೆತಿದೆ. ಅಕ್ಟೋಬರ್ 7ರ ವರೆಗೆ ದಸರಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನೆರವೇರಲಿದ್ದು, ಪ್ರತಿ ದಿನವೂ ಧಾರ್ಮಿಕ & ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಾಗಾದ್ರೆ, ಶನಿವಾರ(ಅ.5) ಏನೇನು ಕಾರ್ಯಕ್ರಮಗಳು ನಡೆಯಲಿವೆ ಎಂದು ಇಲ್ಲಿ ತಿಳಿಯಿರಿ.
ಅಕ್ಟೋಬರ್ 5ರಂದು ಬೆಳಗ್ಗೆ 6:30ಕ್ಕೆ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರೆಗೆ ಬೆಟ್ಟ ಹತ್ತುವ ಸ್ಪರ್ಧೆ ನಡೆಯಲಿದೆ. 29 ವರ್ಷ ಒಳಗಿನ ಯುವಕ-ಯುವತಿಯರು ಹಾಗೂ 30 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಬೆಳಗ್ಗೆ 10 ಗಂಟೆಯಿಂದ 12:30ರ ವರೆಗೆ ಮಕ್ಕಳ ಚಲನಚಿತ್ರಗಳ ಸಿನಿಮೋತ್ಸವ ನಡೆಯಲಿದೆ. ಗಂಜಾಂನ ಶ್ರೀದೇವಿ ಚಿತ್ರಮಂದಿರದಲ್ಲಿ 'ಅನ್ನ', ಬಾಬುರಾಯನ ಕೊಪ್ಪಲುನ ಭಾರತಿ ಚಿತ್ರಮಂದಿರದಲ್ಲಿ 'ನಾನು ಸಚಿನ್ ತೆಂಡೂಲ್ಕರ್ ಅಲ್ಲ' ಹಾಗೂ ಅರಕೆರೆ ಮಂಜುನಾಥ್ ಚಿತ್ರಮಂದಿರದಲ್ಲಿ 'ಜೀರ್ಜಿಂಬೆ' ಮಕ್ಕಳ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಮಹಿಳೆಯರಿಗೆ ವಿವಿಧ ಕಾರ್ಯಕ್ರಮಗಳು: ಇನ್ನೊಂದೆಡೆ ಬೆಳಗ್ಗೆ 10 ಗಂಟೆಗೆ ಶ್ರೀ ರಂಗನಾಥಸ್ವಾಮಿ ದೇವಾಲಯದ ಶ್ರೀರಂಗ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಸರಾ ನಡೆಯಲಿದೆ. ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಬಾಲ್ಯ ವಿವಾಹ ನಿಷೇಧ ಕುರಿತು ಗೀತೆ, ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟುವ ಕುರಿತು ನಾಟಕ, ಜಾನಪದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1 ಗಂಟೆಯಿಂದ 2:30ರ ವರೆಗೆ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಶ್ರೀ ರಂಗವೇದಿಕೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯ ನಡೆಯಲಿದೆ. ಮಧ್ಯಾಹ್ನ 3ಗಂಟೆಗೆ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮದ್ಯಾಹ್ನ 3 ರಿಂದ 3.10 ವರಗೆ ಜಾನಪದ ಸಂಗೀತ, 3.15 ರಿಂದ 3.25 ರವರೆಗೆ ನೃತ್ಯ ಕಲಾ ಪ್ರದರ್ಶನ, 3.30 ರಿಂದ 3.40 ರವರೆಗೆ ಜನಪದ ಮಹಾಕಾವ್ಯ 3.45 ರಿಂದ ಸಂಜೆ 4.55 ರವರೆಗೆ ಮೈಸೂರು ರಾಜರ ಲಾವಣಿಗಳನ್ನು ಹಾಡಲಾಗುವುದು.
ವಿಜಯ್ ಪ್ರಕಾಶ್ ತಂಡದಿದ ಸಂಗೀತ ಸಂಜೆ: ಇದಾದ ಬಳಿಕ ಸಂಜೆ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಶ್ರೀರಂಗನಾಥಸ್ವಾಮಿ ದೇವಾಲಯದ ಶ್ರೀರಂಗ ವೇದಿಕೆಯಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 5ರಿಂದ 5:10ರ ವರೆಗೆ ಜಾನಪದ ಗೀತೆ, 5:15ರಿಂದ 5.25ರ ವರೆಗೆ ಸೋಬಾನೆ ಪದ, 5:30ರಿಂದ 5:40ರ ವರೆಗೆ ಮೂಡಲಪಾಯ ಯಕ್ಷಗಾನ ನಡೆಯಲಿದೆ.
5:45ರಿಂದ 5:55ರ ವರೆಗೆ ಜಾನಪದ ಗೀತೆ, 6 ಗಂಟೆಯಿಂದ 6:10 ವರೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ, 6.15 ರಿಂದ 6:25ರ ವರೆಗೆ ರಂಗಗೀತೆ, 6.30ರಿಂದ 6:40ರ ವರೆಗೆ ಜಾನಪದ ಗೀತೆ, 6:45ರಿಂದ 7ರ ವರೆಗೆ ಮಾತನಾಡುವ ಗೊಂಬೆ, ಜಾದೂ ಕಲಾವಿದೆ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7 ಗಂಟೆಗೆ ಖ್ಯಾತ ಹಿನ್ನೆಲೆ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ತಂಡದಿದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications