Kodi Mutt Swamiji: ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ಕೋಡಿಮಠದ ಶ್ರೀಗಳು ಹೇಳಿದ್ಧೇನು ಗೊತ್ತಾ?
Kodi Mutt Swamiji: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಕೋಡಿಮಠದ ಶ್ರೀಗಳು ಸಂತಾಪ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಎಸ್‌ಎಂ ಕೃಷ್ಣ ಅವರೊಂದಿಗಿನ ಒಡನಾಟದ ಬಗ್ಗೆ ಕೆಲವು ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದರೆ ಏನೆಲ್ಲ ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು (ಡಿಸೆಂಬರ್ 10) ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು, ನಾನು ಬೆಂಗಳೂರಿನಲ್ಲಿ ಓದುವಾಗ ಕಾನೂನು ಕಾಲೇಜಿನಲ್ಲಿ ಎಸ್.ಎಂ.ಕೃಷ್ಣ ಅವರು ಪ್ರಾಧ್ಯಪಕಾರಾಗಿ ಕೆಲಸ ಮಾಡುತ್ತಿದ್ದರು. ಬಳಿಕ 3 ಬಾರಿ ಮಠಕ್ಕೆ ಭೇಟಿ ನೀಡಿದ್ದರು. ಅವರು ಉಪಮುಖ್ಯಮಂತ್ರಿ ಆಗಿದ್ದಾಗ ನೀವು ಸಿಎಂ ಆಗುತ್ತೀರ ಎಂದು ನಾನು ಹೇಳಿದ್ದೆ ಎಂದು ತಿಳಿಸಿದ್ದಾರೆ.

ಇನ್ನು ವರನಟ ಡಾ.ರಾಜಕುಮಾರ್ ಅಪಹರಣ ಆದ ವೇಳೆ ಎಸ್.ಎಂ.ಕೃಷ್ಣ ನನ್ನನ್ನ ಮನೆಗೆ ಕರೆಸಿದ್ದರು. ಆ ವೇಳೆ ಎಸ್.ಎಂ.ಕೃಷ್ಣ ದಂಪತಿ ಚಿಂತಾಕ್ರಾಂತರಾಗಿದ್ದರು. ಆಗ 107 ದಿನಗಳ ಬಳಿಕ ರಾಜ್‌ಕುಮಾರ್ ಬಿಡುಗಡೆ ಆಗುತ್ತಾರೆಂದು ಭವಿಷ್ಯ ನುಡಿದಿದ್ದೆ. ಆದ್ದರಿಂದ ಎಸ್‌ಎಂ ಕೃಷ್ ಅವರೊಂದಿಗೆ ನಿಕಟ ಮತ್ತು ಪ್ರೀತಿ ಸಂಪರ್ಕ ಇತ್ತು ಎಂದು ಶ್ರೀಗಳು ನೆನಪುಗಳನ್ನು ಮೆಲುಕು ಹಾಕಿದರು.
ಮುಬೈನಲ್ಲಿ ರಾಜ್ಯಪಾಲರಾಗಿದ್ದ ವೇಳೆ ನನ್ನನ್ನು ಕರೆಸಿಕೊಂಡಿದ್ದರು. ಎಸ್.ಎಂ.ಕೃಷ್ಣ ಅವರ ಸಾವಿನಿಂದ ತುಂಬಾ ನಷ್ಟವಾಗಿದೆ. ಸರ್ಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರುವುದಕ್ಕೆ ಎಸ್.ಎಂ.ಕೃಷ್ಣ ದೂರ ದೃಷ್ಟಿಯೇ ಕಾರಣ ಎಂದು ಹೇಳಿ ಗಮನ ಸೆಳೆದರು.
ಎಸ್.ಎಂ.ಕೃಷ್ಣ ಅವರ ರಾಜಕೀಯದ ಹಾದಿ
* 1962ರಲ್ಲಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು.
* 1968ರಲ್ಲಿ ಲೋಕಸಭಾ ಸದಸ್ಯರಾಗಿ ಎಸ್ಎಂಕೃಷ್ಣ ಆಯ್ಕೆ.
* 1972ರಲ್ಲಿ ಕೇಂದ್ರ ಸಚಿವರಾಗಿದ್ದ ಎಸ್ಎಂ ಕೃಷ್ಣ.
* 1989-1992ರ ವರೆಗೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.
* 1992-1994ರ ವರೆಗೆ ಡಿಸಿಎಂ ಆಗಿದ್ದರು.
* 1996ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
* 2004-2008ರ ವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.
* ಒಟ್ಟಾರೆಯಾಗಿ ಪ್ರಮುಖ 10 ಚುನಾವಣೆಗಳನ್ನು ಎದುರಿಸಿದ್ದಾರೆ.
* 6 ವಿಧಾನಸಭಾ ಚುನಾವಣೆಗಳನ್ನು ಎದುರಿದ್ದು ಇವುಗಳಲ್ಲಿ 4 ರಲ್ಲಿ ಗೆಲುವು, 2 ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.
* 4 ಲೋಕಸಭಾ ಚುನಾವಣೆಗಳನ್ನು ಎದುರಿದ್ದು, ಈ ಪೈಕಿ 3 ಚುನಾವಣೆಯಲ್ಲಿ ಗೆಲುವು ಪಡೆದು, 1 ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.
* ಮದ್ದೂರು ಕ್ಷೇತ್ರದಿಂದ 3 ಬಾರಿ ಹಾಗೂ ಚಾಮರಾಜಪೇಟೆಯಿಂದ 1 ಬಾರಿ ಶಾಸಕರಾಗಿದ್ದಾರೆ.
* ಮೂರು ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದಾರೆ.
* 1 ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
* 2 ಬಾರಿ ರಾಜ್ಯಸಭಾ ಸದಸ್ಯರಾಗಿದ್ದಾರೆ.
* ಕರ್ನಾಟಕದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸ್ಪೀಕರ್, ಕೈಗಾರಿಕೆ, ವಾಣಿಜ್ಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
* 1993 ರಿಂದ 1994 ರ ವರಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ಎಸ್ಎಂ ಕೃಷ್ಣ ಸೇವೆ ಸಲ್ಲಿಸಿದ್ದಾರೆ.
* 1995ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಸ್ಎಂಕೃಷ್ಣ ಸೋಲು ಅನುಭವಿಸಬೇಕಾಯಿತು. ಆ ವೇಳೆ ರಾಜಕೀಯದಲ್ಲಿ ಉತನ್ನತ ಮಟ್ಟದಲ್ಲಿದ್ದ ಕೃಷ್ಣ ಅವರ ಸೋಲು ವ್ಯಾಪಕ ಚರ್ಚೆಗೆ ಸಹ ಕಾರಣವಾಯಿತು.
* 1996 ರಲ್ಲಿ ಕೃಷ್ಣ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುತ್ತಾರೆ.
ಬಳಿಕ 1999 ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗುತ್ತಾರೆ.
* 1999 ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಎಸ್ಎಂ ಕೃಷ್ಣ ಮುನ್ನೆಡಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.
ಮದ್ದೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಎಸ್ಎಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರು. ಈ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮೊದಲ ನಾಯಕ ಸಿಎಂ ಆಗಿರುವ ಹೆಗ್ಗಳಿಕೆಗೆ ಕೃಷ್ಣ ಅವರು ಪಾತ್ರರಾಗಿದ್ದಾರೆ.












Click it and Unblock the Notifications