ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಪ್ಪಿಸಲಾಗದು-ಚಲುವರಾಯಸ್ವಾಮಿ

By ಮಂಡ್ಯ, ಪ್ರತಿನಿಧಿ
|
Google Oneindia Kannada News

ಮಂಡ್ಯ, ಜನವರಿ 20 : ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಜಾರಿಗೊಳಿಸಲು ಉದ್ದೇಶಿಸಿರುವ ಯೋಜನೆಗಳು ಸಾಲ ಮನ್ನಾಕ್ಕಿಂತಲೂ ಉಪಯುಕ್ತವಾದ ಯೋಜನೆಗಳು ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದರು.

ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜನವರಿ 27ರಂದು ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 200 ಯುನಿಟ್‌ವರೆಗೆ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂಪಾಯಿ, ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ಇದೆಲ್ಲಾ ಸೇರಿದರೆ 5 ವರ್ಷಕ್ಕೆ ಪ್ರತಿ ಕುಟುಂಬಕ್ಕೆ 3 ಲಕ್ಷ ರೂಪಾಯಿ ಕೊಡುಗೆ ಸಿಕ್ಕಂತಾಗುತ್ತದೆ ಎಂದು ತಿಳಿಸಿದರು.

Breaking; ಜೆಡಿಎಸ್‌ ಬಿಟ್ಟು ಕಾಂಗ್ರೆಸ್ ಸೇರಿದ ಮಾಜಿ ಶಾಸಕಿ Breaking; ಜೆಡಿಎಸ್‌ ಬಿಟ್ಟು ಕಾಂಗ್ರೆಸ್ ಸೇರಿದ ಮಾಜಿ ಶಾಸಕಿ

ಸಾಲ ಮನ್ನಾದಿಂದ ಕನಿಷ್ಠ 50 ಸಾವಿರ ರೂಪಾಯಿವರೆಗಷ್ಟೇ ರೈತರಿಗೆ ಉಪಯೋಗ ದೊರೆಯಲಿದೆ. ಅದೇ ದೊಡ್ಡ ಸಾಧನೆಯಲ್ಲ. ಕಾಂಗ್ರೆಸ್ ಘೋಷಣೆಗಳ ಹಿಂದೆ ರೈತರು ಹಾಗೂ ಸಮಾಜದ ಎಲ್ಲ ವರ್ಗದ ಜನರ ಹಿತ ಅಡಗಿದೆ. ಇದನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

KPCC Vice President N. Chaluvaraya Swamy Reaction About Prajadhwani Programme

ಚುನಾವಣೆ ವೇಳೆಗೆ ಪ್ರಣಾಳಿಕೆಯಲ್ಲಿ ಜನರಿಗೆ ಇನ್ನೂ ಹಲವು ಯೋಜನೆಗಳನ್ನು ನೀಡುವುದಕ್ಕೆ ಸಿದ್ಧರಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಪ್ಪಿಸಲಾಗದು. ಮಂಡ್ಯದಿಂದಲೇ ಆ ಸಂದೇಶ ರವಾನೆಯಾಗಬೇಕಾದರೆ ಹೆಚ್ಚು ಸ್ಥಾನಗಳನ್ನು ಜಿಲ್ಲೆಯಲ್ಲಿ ಗೆಲ್ಲಬೇಕು. ಪ್ರಜಾಧ್ವನಿ ಮುಖಾಂತರ ಗೆಲುವಿನ ಸಂದೇಶ ರಾಜ್ಯಕ್ಕೆ ತಲುಪಬೇಕು ಎಂದು ಕಾರ್ಯಕರ್ತರಲ್ಲಿ ಹುರುಪು ತುಂಬುವ ಮಾತುಗಳನ್ನಾಡಿದ್ದಾರೆ.

ಜಿಲ್ಲೆಯೊಳಗೆ ಜೆಡಿಎಸ್, ನಂತರ ಬಿಜೆಪಿ ಪ್ರತಿಸ್ಪರ್ಧಿಗಳಾಗಿವೆ. ಈ ಎರಡೂ ಪಕ್ಷಗಳನ್ನು ಕಡೆಗಣಿಸದೆ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಿದೆ. ಯಾವುದೇ ಕಾರಣಕ್ಕೂ ಉದಾಸೀನ ಮಾಡಬೇಡಿ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಸಂಕಲ್ಪ ಮಾಡಬೇಕು. ಪ್ರಜಾಧ್ವನಿ ಕಾರ್ಯಕ್ರಮವನ್ನು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲೇ ನಡೆಸಲು ತೀರ್ಮಾನಿಸಿ ಅನುಮತಿ ಪಡೆದುಕೊಂಡಿದ್ದೇವೆ. ಜೆಡಿಎಸ್ ಪಂಚರತ್ನ ರಥಯಾತ್ರೆ, ಬಿಜೆಪಿ ಜನಸಂಕಲ್ಪ ಯಾತ್ರೆ ಮೀರಿಸುವಂತೆ ಜನರನ್ನು ಸಂಘಟಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ ಪ್ರಜಾಧ್ವನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ, ಆಕಾಂಕ್ಷಿಗಳಾದ ಕೀಲಾರ ರಾಧಾಕೃಷ್ಣ, ಗಣಿಗ ರವಿಕುಮಾರ್, ಅಮರಾವತಿ ಚಂದ್ರಶೇಖರ್, ಡಾ.ಹೆಚ್.ಕೃಷ್ಣ, ಹಾಲಹಳ್ಳಿ ರಾಮಲಿಂಗಯ್ಯ, ಸಿದ್ದಾರೂಢ ಸತೀಶ್, ಎಂ.ಎಸ್.ಚಿದಂಬರ, ತಾಪಂ ಮಾಜಿ ಅಧ್ಯಕ್ಷ ತ್ಯಾಗರಾಜು, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್‌ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

English summary
No one can stop Congress victory in assembly election 2023 says KPCC vice president N. Chaluvaraya Swamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X