KRS Dam: ಕೆಆರ್‌ಎಸ್‌ ಜಲಾಶಯದ ಒಳಹರಿವು 856 ಕ್ಯೂಸೆಕ್ ಹೆಚ್ಚಳ-ಮಾಹಿತಿ ಇಲ್ಲಿದೆ

KRS Dam: ಭಾರೀ ಮಳೆ ಹಿನ್ನೆಲೆ ರಾಜ್ಯದಲ್ಲಿನ ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಅಲ್ಲದೆ, ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣವು ಕೂಡ ಹೆಚ್ಚಾಗುತ್ತಿದೆ. ಹಾಗೆಯೇ ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಈ ಮೂರು ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ನೀರಿನ ಮಟ್ಟ ನಿನ್ನೆಗಿಂತ ಇಂದು (ಮೇ 25) ಮತ್ತೆ ಏರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಅಂಕಿಅಂಶಗಳ ವಿವರವನ್ನು ಇಲ್ಲಿ ತಿಳಿಯಿರಿ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದಲೂ ಮಳೆರಾಯ ಅಬ್ಬರಿಸುತ್ತಲೇ ಇದ್ದು, ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಆಗಿರುವ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹರಿದುಬರುತ್ತಲೇ ಇದೆ.

KRS Dam Inflow increased 856 cusecs on May 25 know statistics

ಭಾರೀ ಮಳೆ ಮುಂದುವರಿದ ಹಿನ್ನೆಲೆ ಇಂದು (ಮೇ 25) ಕೆಆರ್‌ಎಸ್‌ ಜಲಾಶಯಕ್ಕೆ 3,365 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ 2,509 ಕ್ಯೂಸೆಕ್ ಒಳಹರಿವು ಇದ್ದು, 24 ಗಂಟೆಗಳಲ್ಲೇ ಅಂದರೆ ಇದೀಗ 856 ಕ್ಯೂಸೆಕ್ ನೀರು ಹೆಚ್ಚಳ ಆಗಿದೆ ಎಂದು ತಿಳಿದುಬಂದಿದೆ.

124.80 ಅಡಿಗಳ ಗರಿಷ್ಠ ಮಟ್ಟದ ಕೆಆರ್‌ಎಸ್ ಜಲಾಶಯದಲ್ಲಿ ಇದೀಗ 82.30 ಅಡಿ ನೀರು ಇದೆ. 49.45 ಟಿಎಂಸಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 11.83 ಟಿಎಂಸಿ ನೀರು ಸಂಗ್ರವಾಗಿದೆ. ಈ ಮೂಲಕ ಈಗ ಜಲಾಶಯಕ್ಕೆ 3,365 ಕ್ಯೂಸೆಕ್ ಒಳಹರಿವು ಇದ್ದು, 528 ಕ್ಯೂಸೆಕ್ ಹೊರಹರಿವು ಇದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಹೀಗೆ ಮಳೆ ಮುಂದುವರೆದರೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗಿ ನೀರಿನ ಬಿಕ್ಕಟ್ಟಿನ ಸಮಸ್ಯೆಗಳೆಲ್ಲ ಬಗೆಹರಿಯುತ್ತದೆ. ಅಷ್ಟೇ ಅಲ್ಲದೆ, ಎರಡು ರಾಜ್ಯಗಳ ನಡುವೆ ಇರುವ ದ್ವೇಷದ ಜ್ವಾಲೆಯನ್ನು ತಣ್ಣಗೆ ಮಾಡಿದಂತಾಗುತ್ತದೆ. ಮತ್ತೊಂದೆಡೆ ಡ್ಯಾಂನ ನೀರಿನ ಮಟ್ಟ ಹೆಚ್ಚುತ್ತಿದ್ದಂತೆ ಈ ಭಾಗದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಬೆಂಗಳೂರು ಜನರ ನೀರಿನ ಸಮಸ್ಯೆಯೂ ಕೂಡ ಬಗೆಹರಿದಂತಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+