KRS Dam: ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ
KRS Dam: ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳ ಜೀವನಾಡಿಯಾದ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಜಲಾಶಯ ಭರ್ತಿಯಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದಾರೆ. ಇನ್ನೂ ಇದೇ ವೇಳೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಯಡವಟ್ಟೊಂದ ಮಾಡಿದ್ದು, ಇದು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸಾಮಾನ್ಯವಾಗಿ ಜಲಾಶಯಗಳು ತುಂಬಿದಾಗ ಹೂ, ಹಣ್ಣು ಕಾಯಿಯನ್ನು ಮರದಲ್ಲಿ ಡ್ಯಾಂಗೆ ಬಿಡುವ ಮೂಲಕ ಬಾಗಿನ ಅರ್ಪಣೆ ಮಾಡುವುದು ನಮ್ಮ ಸಂಪ್ರದಾಯದಲ್ಲಿದೆ. ಆದರೆ ಇಂದು ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ವೇಳೆ ಅಧಿಕಾರಿಗಳು ದೊಡ್ಡ ಯಡವಟ್ಟೊಂದನ್ನು ಮಾಡಿದ್ದಾರೆ. ಮಾಹಿತಿ ಇಲ್ಲಿದೆ ಗಮನಿಸಿ.

ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಅವಾಮಾನ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಅಷ್ಟೇ ಅಲ್ಲದೆ, ಸಿಎಂ ಹಾಗೂ ಸಚಿವರು ಬಾಗಿನ ಅರ್ಪಣೆ ಮಾಡಿದ ಬಳಿಕ ಕಾವೇರಿ ನಿಗಮ ಅಧಿಕಾರಿಗಳು ಬಾಡೂಟ ಸೇವನೆ ಮಾಡಿದ್ದಾರೆ. ಕೆಆರ್‌ಎಸ್‌ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಡ ಆಯೋಜನೆ ಮಾಡಲಾಗಿದ್ದು, ಈ ಮೂಲಕ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
ಹಾಗಾದರೆ ಅಧಿಕಾರಿಗಳು ಮಾಡಿರುವ ಈ ಯಡವಟ್ಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಏನು ಹೇಳುತ್ತಾರೆ ಎಂದು ಕಾದುನೋಡಬೇಕಿದೆ. ಇನ್ನು 124.80 ಅಡಿ ಗರಿಷ್ಠ ನೀರಿ ಮಟ್ಟದ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಇದೀಗ 124.80 ಅಡಿ ನೀರಿದೆ.
ಡಿ.ಕೆ.ಶಿವಕುಮಾರ್ ಹೇಳಿದ್ದೇನು?: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಲವು ಪ್ರಮುಖ ಜಲಾಶಯಗಳು ಈಗಾಗಲೇ ತುಂಬುವ ಹಂತವನ್ನು ತಲುಪಿದ್ದರೆ, ಇನ್ನು ಕೆಲವು ಭರ್ತಿಯಾಗಿವೆ. ಇನ್ನಯ ಇಂದು (ಜುಲೈ 29) ಕೆಆರ್‌ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದಾರೆ. ಬಳಿಕ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
ಕಳೆದ ವರ್ಷ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಜಲಾಶಯಗಳೆಲ್ಲ ಬತ್ತುವ ಹಂತವನ್ನು ತಲುಪಿದ್ದವು. ಆದರೆ 2024ರ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಚುರುಕು ಪಡೆದಿದ್ದು, ಹಲವು ಜಲಾಶಯಗಳು ಭರ್ತಿಯಾಗಿವೆ. ಇನ್ನು ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ಕಬಿನ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದು, ಈ ವೇಳೆ ಮೈಸೂರು ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬೇಕಿತ್ತು. ಇದೀಗ ಕಬಿನಿ ಡ್ಯಾಂ ತುಂಬಿದ್ದು, ತಮಿಳುನಾಡಿಗೆ ನೀರು ಬಿಡಲಾಗಿದೆ ಎಂದರು.
ಜಲಾಶಯದ ನೀರಿನ ಮಟ್ಟ 2282.51 ಅಡಿಯಷ್ಟಿದೆ. ಒಳ ಹರಿವಿನ ಪ್ರಮಾಣ 22,334 ಕ್ಯೂಸೆಕ್ ಇದ್ದರೆ, ಹೊರಹರಿವನ್ನು 8,000 ಕ್ಯೂಸೆಕ್‌ಗೆ ಇಳಿಕೆ ಮಾಡಲಾಗಿದೆ. ಜಲಾಶಯದಲ್ಲಿ 18.55 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಕೇರಳದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಒಳಹರಿವು ಕಡಿಮೆಯಾಗಿದೆ. ಹವಾಮಾನ ಇಲಾಖೆಯು ಮತ್ತೆ ಮಳೆ ಚುರುಕು ಪಡೆಯಲಿದೆ ಎಂದು ತಿಳಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications