• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಡ್ಯ: ಸೆ.16 ರಿಂದ ಕೆಆರ್ ಎಸ್ ಪ್ರವಾಸಿಗರಿಗೆ ಮುಕ್ತ

By ಮೈಸೂರು ಪ್ರತಿನಿಧಿ
|

ಮಂಡ್ಯ, ಸೆಪ್ಟೆಂಬರ್ 15: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಇನ್ನು ಯಾವುದೇ ಪ್ರವಾಸಿ ತಾಣ ನೋಡಲು ಮಿಸ್‌ ಮಾಡಿಕೊಳ್ಳುವಂತಿಲ್ಲ. ಈಗಾಗಲೇ ಜಯಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರಿಗೆ ತೆರೆದಿದ್ದು, ಈಗ ಮತ್ತೊಂದು ಪ್ರಮುಖ ಪ್ರವಾಸಿ ತಾಣ ತೆರೆಯಲಿದೆ.

ಕೆಆರ್ ಎಸ್‌ ಜಲಾಶಯವು ನಾಳೆಯಿಂದ ಪ್ರವಾಸಿಗರಿಗೆ ಮುಕ್ತವಾಗಲಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವು ಸೆ.16 ರಿಂದ ಪ್ರವಾಸಿಗರಿಗೆ ಬೃಂದಾವನ ಗಾರ್ಡನ್ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.

ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿನಿಂದಲೇ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು.

ಇದೀಗ ಲಾಕ್ ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

   ಇವರಿಬ್ಬರ ಕಚ್ಚಾಟದಲ್ಲಿ ಅಧಿಕಾರಿಗಳು ಅಪ್ಪಚ್ಚಿ | Oneindia Kannada

   ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು, ಪ್ರವಾಸಿಗರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

   English summary
   The KRS Dam will be open to tourists from September 16 and the state government has allowed the visitors to view the Brindavana Garden.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X