ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

106 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

By Gururaj
|
Google Oneindia Kannada News

ಮಂಡ್ಯ, ಜೂನ್ 29 : ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕೆಆರ್‌ಎಸ್ ನೀರಿನ ಮಟ್ಟ 106 ಅಡಿಗೆ ಏರಿಕೆಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದೆ. ಶುಕ್ರವಾರ 10,168 ಕ್ಯುಸೆಕ್ ಒಳಹರಿವು ದಾಖಲಾಗಿದೆ.

20 ವರ್ಷಗಳ ನಂತರ ಜೂನ್‌ನಲ್ಲಿ 100ರ ಗಡಿ ದಾಟಿದ ಕೆಆರ್‌ಎಸ್‌20 ವರ್ಷಗಳ ನಂತರ ಜೂನ್‌ನಲ್ಲಿ 100ರ ಗಡಿ ದಾಟಿದ ಕೆಆರ್‌ಎಸ್‌

20 ವರ್ಷಗಳ ಬಳಿಕ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿತ್ತು. ಶುಕ್ರವಾರ ಜಲಾಶಯದಲ್ಲಿ 106.25 ಅಡಿ ನೀರಿನ ಸಂಗ್ರಹವಿದೆ.

KRS water level reaches 106 feet

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯದಲ್ಲಿ ಕಳೆದ ವರ್ಷದ ಜೂನ್ 29ರಂದು 69.75 ಅಡಿ ನೀರಿನ ಸಂಗ್ರಹವಿತ್ತು. ಈ ವರ್ಷ ಜೂನ್ ಅಂತ್ಯದ ವೇಳೆಗೆ 106 ಅಡಿ ನೀರು ಸಂಗ್ರಹವಾಗಿದೆ.

100 ಅಡಿ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ100 ಅಡಿ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

ಕೊಡಗು ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಜನಜೀವನ ಸಹಜ ಸ್ಥಿತಿಗೆ ಬಂದಿದ್ದು, ನದಿಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ.

* ಹೇಮಾವತಿ ಜಲಾಶಯದ ನೀರಿನ ಮಟ್ಟ 2905.60 ಅಡಿ (ಗರಿಷ್ಠ ಮಟ್ಟ 2922 ಅಡಿ)
* ಹಾರಂಗಿ ಜಲಾಶಯದ ನೀರಿ ಮಟ್ಟ 2,845.50 ಅಡಿ (ಗರಿಷ್ಟ ಮಟ್ಟ 2,859 ಅಡಿ)

English summary
The water-level in the Krishnaraja Sagar (KRS) in Mandya district has reached 106 feet on June 29, 2018. 10,168 cusec inlow recorded on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X