ಕೆಆರ್‌ಎಸ್‌ನಿಂದ ನೀರು ಬಿಡುಗಡೆ, ಕೊಳ್ಳೆಗಾಲ ತಾಲೂಕಿನಲ್ಲಿ ಪ್ರವಾಹ ಭೀತಿ
Recommended Video

ಮಂಡ್ಯ, ಆಗಸ್ಟ್ 16: ಕರ್ನಾಟಕದ ಕರಾವಳಿ,ಮಲೆನಾಡು, ಮೈಸೂರು, ಮಂಡ್ಯ ಸೇರಿದಂತೆ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೃಷ್ಣರಾಜ ಜಲಾಶಯ ಭರ್ತಿಯಾಗಿದ್ದು, ಈಗಾಗಲೇ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಇದರಿಂದ ಕೊಳ್ಳೆಗಾಲ ತಾಲೂಕಿನ ದಾಸನಪುರ, ಹಳೆಹಂಪಾಪು, ಎಡಕೂರಿಯ ಅಣಗನಹಳ್ಳಿ, ಮಳ್ಳೂರು ಸೇರಿದಂತೆ ಹಲವು ಗ್ರಾಮಗಳಿಗೆ ಪ್ರವಾಹನ ಭೀತಿ ಎದುರಾಗಿದೆ. ಈಗಾಗಲೇ ಗ್ರಾಮದ ಎಲ್ಲಾ ಜಮೀನುಗಳು ಜಲಾವೃತಗೊಂಡಿದೆ. ಕಬ್ಬು, ರಾಗಿ, ಭತ್ತ ಸೇರಿದಂತೆ ಇನ್ನಿತರೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ.
ಮಂಗಳವಾರ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.ಕಳೆದ ಒಂದು ವಾರದಿಂದ ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದೆ. ಕೊಡಗು, ಮಡಿಕೇರಿ, ಕೇರಳ, ಮೈಸೂರು, ಮಂಗಳೂರು, ಮಲೆನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೃಷ್ಣರಾಜ ಜಲಾಶಯ ತುಂಬಿದ್ದು ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಒಂದು ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗಿದೆ.

ಮಂಗಳವಾರ ಮಧ್ಯಾಹ್ನದ ಒಳಗೆ 1,20,000 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇದೆ. ಇಷ್ಟೇ ಅಲ್ಲದೆ ಕೆಆರ್‌ಎಸ್‌ನಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದ್ದು, ಶ್ರೀರಂಗಪಟ್ಟಣ ಸುತ್ತಮುತ್ತಲಿನ ನದಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿಸಿದೆ.












Click it and Unblock the Notifications