BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ KSRTC ಬಸ್ ಭೀಕರ ಅಪಘಾತ, ಸಿಸಿಟಿವಿಯಲ್ಲಿ ಘಟನೆ ಸೆರೆ
ಮಂಡ್ಯ, ಸೆಪ್ಟಂಬರ್ 30: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯು (Benglauru -Mysuru Express) ಸೋಮವಾರ ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಸಾಕ್ಷಿಯಾಗಿದೆ. ನೋಡ ನೋಡುತ್ತಿದ್ದಂತೆ 50ಕ್ಕೂ ಹೆಚ್ಚು ಜನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC) ಬಸ್ ಜಂಪ್ ಆಗಿ ಪಲ್ಟಿಯಾಗಿದೆ. ಸುಮಾರು 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಡ್ಯ ಬಳಿ ಸ್ಯಾಂಜೋ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಗಳೂರು ನಿಂದ ಹೆದ್ದಾರಿಯಲ್ಲಿ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೆದ್ದಾರಿಯಿಂದ ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳೀಯರು ಧಾವಿಸಿ ಕಿಟಿಕಿ ಗ್ಲಾಜು ಒಡೆದು ಜನರನ್ನು ರಕ್ಷಣೆ ಮಾಡಿದ್ದಾರೆ. ಇದೆಲ್ಲವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಸ್ಥಳಕ್ಕೆ ಸ್ಥಳೀಯ ಶಾಸಕ ರವಿ ಗಾಣಿಗ, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ್ ಅವರು ಭೇಟಿ ನೀಡಿದ್ದಾರೆ. ಘಟನೆಯಿಂದಾಗಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು, ಮಕ್ಕಳ ಸೇರಿದಂತೆ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಮೈಸೂರು ಭಾಗದಲ್ಲಿ ಈ ರೀತಿಯ ಘಟನೆಯಗಳು ಸಾಮಾನ್ಯ ಎಂಬಂತಾಗಿವೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ ಹಾಗೂ ಚಾಲಕ ನಿರ್ಲಕ್ಷ್ಯ ಅಂತಲೂ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.
ಸ್ಥಳೀಯರಿಂದ ಪ್ರಯಾಣಿಕರ ರಕ್ಷಣೆ
ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಿಂದ ಸರ್ವೀಸ್ ರಸ್ತೆಗೆ ಬಂದು ಬಸ್ ಪಲ್ಟಿಯಾಗುತ್ತಿದ್ದಂತೆ ಜನರು ಬಸ್‌ನತ್ತ ಧಾವಿಸಿದರು. ನೋಡ ನೋಡುತ್ತಲೇ ರಸ್ತೆ ಅಡ್ಡವಾಗಿ ಬಿದ್ದ ಬಸ್ ಮೇಲೆ ಹತ್ತಿ ಪ್ರಯಾಣಿಕರನ್ನು ರಕ್ಷಣೆ ಮಾಡಿದರು.

ಕಿಟಕಿ ಗ್ಲಾಜು ಒಡೆದು ಬಸ್‌ನಿಂದ ಮಹಿಳೆ ಮತ್ತು ಮಕ್ಕಳನ್ನು ರಕ್ಷಣೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಹತ್ತಿರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.
ಬೆಂಗಳೂರು ಮೈಸೂರು ರಸ್ತೆಯಲ್ಲಿ ಇನ್ನೇನು ಅಪಘಾತಗಳು ಕಡಿಮೆ ಆಗಿವೆ ಎನ್ನುವಷ್ಟರಲ್ಲಿ ಹೀಗೆ ಮತ್ತೆ ಮತ್ತೆ ಭೀಕರ ಅಪಘಾತಗಳು ಸಂಭವಿಸುತ್ತಿವೆ. ಮಂಡ್ಯ, ಮದ್ದೂರು ಭಾಗದಲ್ಲಿ ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಅವೈಜ್ಞಾನಿಕ ರಸ್ತೆ ನಿರ್ಮಾಣವು ಕಾರಣ ಎನ್ನಲಾಗಿದೆ.

ಸದ್ಯ ಸಿಸಿಟಿವಿ ದೃಶ್ಯಾವಳಿ ನೋಡಿದರೆ, ಕೆಎಸ್‌ಆರ್‌ಟಿಸಿ ವೇಗವಾಗಿ ಹೆದ್ದಾರಿಯಲ್ಲಿ ಬರುತ್ತಿದೆ. ಸರ್ವೀಸ್ ರಸ್ತೆಗೆ ಹೋಗುವ ಮಾರ್ಗ ದಿಢೀರ್ ಕಂಡಿದ್ದು, ಕೂಡಲೇ ಎಡಕ್ಕೆ ಬಸ್ ತಿರುಗಿದ ಹಿನ್ನೆಲೆಯಲ್ಲಿ ಚಾಲಕನ ಕಂಟ್ರೋಲ್ ತಪ್ಪು ಪಲ್ಪಿ ಹೊಡೆದಿದೆ ಎನ್ನಲಾಗುತ್ತಿದೆ.
ಲಾರಿ ಇರದಿದ್ದರೆ ಅಪಾರ ಸಾವು ನೋವು ಸಂಭವ
ಸರ್ವೀಸ್ ರಸ್ತೆಯಲ್ಲಿ ಇದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದು ಪಲ್ಪಿಯಾಗಿದೆ. ಈ ವೇಳೆ ಅದೃಷ್ಟವಶಾತ್ ಬೈಕ್ ಸವಾರನೊಬ್ಬ ಸಾವಿನ ದವಡೆಯಿಂದ ಪಾರಾಗಾಗಿದ್ದಾರೆ. ಈ ಲಾರಿ ಇಲ್ಲದಿದ್ದರೆ, ಕಾಪೌಂಡ್ ಇಲ್ಲವೇ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಗೆ ಬಸ್ ಡಿಕ್ಕಿ ಹೊಡೆದು ಅಪಾರ ಜೀವ ಹಾನಿಯಾಗುವ ಸಾಧ್ಯತೆ ಇತ್ತು. ಅದೃಷ್ಟ ವಶಾತ್ ಜೀವ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ನಂತರ ಸ್ಥಳಕ್ಕೆ ಬಂದ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕ್ರೇನ್ ಸಹಾಯದಿಂದ ಬಸ್ ಅನ್ನು ಸ್ಥಳಾಂತರಿಸಲಾಯಿತು. ಪ್ರಕರಣ ದಾಖಲಾಗಿದೆ. ಚಾಲಕನಿಂದ ವಿವರಣೆ ಕೇಳುವ ಸಾಧ್ಯತೆ ಇದೆ.












Click it and Unblock the Notifications