ಭಾನುವಾರದಂದೇ ಮಂಡ್ಯದಲ್ಲಿ KSRTC ಮುಷ್ಕರ ಆರಂಭ

Posted By:
Subscribe to Oneindia Kannada

ಬೆಂಗಳೂರು, ಜುಲೈ 24: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಭಾನುವಾರದಂದೇ ಆರಂಭಗೊಂಡಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ. ಆದರೆ, ಮಂಡ್ಯ, ಮಳವಳ್ಳಿ, ಕೆಆರ್ ಪೇಟೆಗಳಲ್ಲಿ ಭಾನುವಾರದಂದೇ ನೌಕರರು ಮುಷ್ಕರ ಹೂಡಿರುವುದರಿಂದ, ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬಿಎಂಟಿಸಿ, ಕೆಎಸ್ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಎನ್‌ಇಕೆಆರ್‌ಟಿಸಿ ಸೇರಿ ಎಲ್ಲಾ ನಿಗಮಗಳಿಂದ ಒಟ್ಟು 23 ಸಾವಿರ ಬಸ್ಸುಗಳಿದ್ದು, 1.25 ಲಕ್ಷ ಸಿಬ್ಬಂದಿಗಳಿದ್ದಾರೆ. ಮುಷ್ಕರಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಸಾರಿಗೆ ಸಂಸ್ಥೆ ನೌಕರರು ಶೇ. 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ಬೇಡಿಕೆಗಳನ್ನು ಅವರು ಸರ್ಕಾರದ ಮುಂದಿಟ್ಟಿದ್ದಾರೆ.

KSRTC Transport staff to strike updates Mandya Malavalli

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ವೇತನ ಪರಿಷ್ಕರಣೆ ಬಗ್ಗೆ ಸರ್ಕಾರದ ಏಕಪಕ್ಷೀಯ ನಿರ್ಧಾರ ಖಂಡಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಮುಷ್ಕರದ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದು, 'ಶೇ 10ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಲೇ ನಿಗಮಗಳಿಗೆ ವರ್ಷಕ್ಕೆ 400 ಕೋಟಿ ಹೆಚ್ಚುವರಿ ಹೊರೆಯಾಗಲಿದೆ. ಶೇ 30ರಷ್ಟು ವೇತನ ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲದ ಮಾತು. ನೌಕರರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ' ಎಂದು ಎಐಟಿಯುಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅನಂತ ಸುಬ್ಬರಾವ್ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Joint Committee of KSRTC workers unions have called for an indefinite strike from July 25 to press for their demands.Mandya and Malavalli, KR pet union have started strike from Sunday(July 24) itself.
Please Wait while comments are loading...