ಬಾಲಕೃಷ್ಣ ವಿರುದ್ಧ ತಿರುಗಿಬಿದ್ದ ಕುಮಾರಸ್ವಾಮಿ ಆಂಡ್ ಸನ್
ಮಂಡ್ಯ, ಏಪ್ರಿಲ್ 28: 'ನಿಖಿಲ್ ಕುಮಾರಸ್ವಾಮಿ ಅವರ ಕ್ಯಾಸೆಟ್ ನನ್ನ ಬಳಿ ಇದೆ ಅದನ್ನು ಬಿಡುಗಡೆ ಮಾಡುತ್ತೇನೆ' ಎಂದು ಜೆಡಿಎಸ್ನಿಂದ ಕಾಂಗ್ರೆಸ್ಗೆ ಹಾರಿರುವ ಎಚ್.ಸಿ.ಬಾಲಕೃಷ್ಣ ಹೇಳಿದ ಬೆನ್ನಲ್ಲೆ ಕುಮಾರಸ್ವಾಮಿ ಮತ್ತು ಮಗ ನಿಖಿಲ್ ಕುಮಾರಸ್ವಾಮಿ ಅವರು ಬಾಲಕೃಷ್ಣ ಅವರ ಮೇಲೆ ಹರಿಹಾಯ್ದಿದ್ದಾರೆ.
ಮಾಗಡಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ 'ಆತನಿಗೆ ತಾಕತ್ ಇದ್ದರೆ ಬಿಡುಗಡೆ ಸಿಡಿ ಬಿಡುಗಡೆ ಮಾಡಲಿ, ಸುಮ್ಮಮ್ಮನೆ ಸುಳ್ಳು ಹೇಳಿಕೊಂಡು ಓಡಾಡುವುದಲ್ಲ, ಆರು ಕೋಟಿ ಜನ ಅವರ ಯೋಗ್ಯತೆ ನೋಡಿದ್ದಾರೆ, ಹೇಗೆ ಬೆನ್ನಿಗೆ ಚೂರಿ ಇರಿದು ಹೊದರು ಎಂದು' ಎಂದು ನಿಖಿಲ್ ಕುಮಾರಸ್ವಾಮಿ ಅಬ್ಬರಿಸಿದ್ದಾರೆ.
ಈ ಬಾರಿ ಚುನಾವಣೆ ಆದ ನಂತರ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕಾಗುತ್ತದೆ, ಇನ್ನು ಮುಂದೆ ರಾಜಕೀಯ ಹೇಗೆ ಮಾಡ್ತಾರೋ ನಾನೂ ನೋಡ್ತೇನೆ' ಎಂದು ನಿಖಿಲ್ ಸವಾಲು ಹಾಕಿದ್ದಾರೆ.

ಇದೇ ವಿಷಯಕ್ಕೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಅವರು, ಅದೇನು ಸಿಡಿ ಇದೆಯೋ ಬಿಡುಗಡೆ ಮಾಡಲಿ ನೋಡೋಣ, ಅವರ ಬಳಿ ಸಾಕ್ಷ್ಯ ಇದ್ದರೆ ಬಿಡುಗಡೆ ಮಾಡಲಿ ನೋಡೇ ಬಿಡುತ್ತೇನೆ' ಎಂದು ಆವಾಜ್ ಹಾಕಿದ್ದಾರೆ ಕುಮಾರಸ್ವಾಮಿ.
ಆದರೆ ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಎಚ್.ಸಿ.ಬಾಲಕೃಷ್ಣ, 'ನಾನು ಯಾವ ಕ್ಯಾಸೆಟ್ ಅಥವಾ ಸಿಡಿ ಬಗ್ಗೆ ಮಾತನಾಡೇ ಇಲ್ಲ, ಅದೆಲ್ಲಾ ಮಾಧ್ಯಮಗಳ ಸೃಷ್ಠಿ, ಆದರೆ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯ ಅನುಭವ ಕಡಿಮೆ, ಅವರು ಮಾತನಾಡುವಾಗ ಜಾಗೃತೆಯಿಂದ ಮಾತನಾಡಬೇಕು' ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications