ಅಂಬರೀಶ್ ಅಭಿಮಾನಿಗಳಿಗೆ ಮನವಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು, ನವೆಂಬರ್ 25: ಮಂಡ್ಯ ಜಿಲ್ಲೆಯ ಅಂಬರೀಶ್ ಅಭಿಮಾನಿಗಳಲ್ಲಿ ಸಿಎಂ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಅಂಬರೀಶ್ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಮಂಡ್ಯಕ್ಕೆ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಬರುತ್ತೇವೆ. ಮಂಡ್ಯದ ಜನರು ಅಲ್ಲಿಯೇ ತಮ್ಮ ನಾಯಕನ ಅಂತಿಮ ದರ್ಶನ ಪಡೆಯಬಹುದು ಎಂದು ಸಿಎಂ ಹೇಳಿದ್ದಾರೆ.

ಆದರೆ ಮಂಡ್ಯದಲ್ಲಿಯೇ ಅಂಬರೀಶ್ ಅವರ ಅಂತಿಮಕಾರ್ಯ ಮಾಡಬೇಕು ಎಂದು ದಯವಿಟ್ಟು ಯಾರೂ ಆಗ್ರಹಿಸಬೇಡಿ ಎಂದು ಕುಮಾರಸ್ವಾಮಿ ಅವರು ಮಂಡ್ಯದ ಅಂಬರೀಶ್ ಅಭಿಮಾನಿಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

Kumaraswamy request to Mandya Ambareesh followers not to be emotional

ನಾಳೆ ಬೆಳಿಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ಕಾರ್ಯ ನೆರವೇರಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಅವರನ್ನು ಮಂಡ್ಯದಲ್ಲಿಯೇ ಮಣ್ಣು ಮಾಡಬೇಕೆಂದು ಅವರ ಅಭಿಮಾನಿಗಳು ಒತ್ತಾಯ ಮಾಡಬಾರದು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ಕೇಂದ್ರ ರಕ್ಷಣಾ ಮಂತ್ರಿ ಅವರೊಂದಿಗೆ ಮಾತನಾಡಿ ಹೆಲಿಕಾಪ್ಟರ್‌ ಮೂಲಕ ಮಂಡ್ಯಕ್ಕೆ ಸಂಜೆ ವೇಳೆಗೆ ಅಂಬರೀಶ್ ಅವರ ಮೃತದೇಹವನ್ನು ಕೊಂಡೊಯ್ಯಲಾಗುವುದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಕಲ ವ್ಯವಸ್ಥೆ ಮಾಡಲಗುತ್ತದೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+