ಕೆರೆ ಕಾಮೇಗೌಡರಿಗೆ ಅನಾರೋಗ್ಯ: ಸರ್ಕಾರಿ ಆಸ್ಪತ್ರೆಗೆ ದಾಖಲು

ಮಂಡ್ಯ, ಜುಲೈ 10: ಪ್ರಕೃತಿ ಸಂರಕ್ಷಕ ಹಾಗೂ ಪ್ರಾಣಿಗಳಿಗೆ ಆಸರೆಯಾಗಲು ಹತ್ತಾರು ಕೆರೆಗಳನ್ನು ನಿರ್ಮಿಸಿದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯದ ಭಗೀರಥ, ಕೆರೆ ಕಾಮೇಗೌಡರಿಗೆ ಬಲಗಾಲಿನ ನರ ಸಂಬಂಧಿ ಕಾಯಿಲೆಯ ಗಾಯ ಉಲ್ಬಣಗೊಂಡಿರುವ ಹಿನ್ನೆಲೆ ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

Recommended Video

      ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಕಾಮೇಗೌಡರು | KameGowda | Oneindia Kannada

      ಡಿಎಚ್ಓ ಡಾ.ಎಚ್.ಪಿ ಮಂಚೇಗೌಡ, ಉಪ ತಹಸೀಲ್ದಾರ್ ಕುಮಾರ್, ತಾ.ಪಂ ಇಓ ಆಸ್ಪತ್ರೆಗೆ ಭೇಟಿ ನೀಡಿ, ಕಾಮೇಗೌಡರ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಅಗತ್ಯ ಚಿಕಿತ್ಸಾ ಸೌಲಭ್ಯಕ್ಕೆ ವೈದ್ಯರಿಗೆ ಸೂಚನೆ ನೀಡಲಾಗಿದೆ.

      ಇತ್ತೀಚಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಂಸೆಗೆ ಒಳಗಾಗಿದ್ದರು. 82 ವರ್ಷದ ಕಾಮೇಗೌಡರು ಸುಮಾರು 15 ಕೆರೆಗಳನ್ನು ನಿರ್ಮಿಸಿ, ಬೇಸಿಗೆಯಲ್ಲೂ ಅದರಲ್ಲಿ ನೀರು ಉಳಿಯುವ ಹಾಗೇ ನೋಡಿಕೊಳ್ಳುತ್ತಿದ್ದಾರೆ. ಸುಮಾರು 15 ಲಕ್ಷ ರೂ. ಖರ್ಚು ಮಾಡಿ ಕೆರೆಗಳ ನಿರ್ವಹಣೆ ಮಾಡುತ್ತಿದ್ದಾರೆ.

      Lake Man Kamegowda Admitted to Government Hospital

      ಶಾಲೆಯ ಮೆಟ್ಟಿಲು ಹತ್ತಿ ಅಕ್ಷರ ಕಲಿಯದ ಕಾಮೇಗೌಡರು ತಮ್ಮ ಪರಿಸರ ಪ್ರೀತಿಯಿಂದಾಗಿಯೇ ಇತರರಿಗೆ ಮಾದರಿಯಾಗಿದ್ದಾರೆ. ಚಿಕ್ಕಮನೆ, ತುಂಡು ಭೂಮಿ, ಒಂದಷ್ಟು ಕುರಿಗಳು ಕಾಮೇಗೌಡರ ಆಸ್ತಿಯಾಗಿದೆ.

      ಕುರಿ ಮೇಯಿಸುವ ಜೊತೆಗೆ ಕರೆ ನಿರ್ಮಾಣ ಮಾಡುವೆ ಎಂದು ಗುದ್ದಲಿ ಹಿಡಿದು ಕೆಲಸ ಮಾಡುವ ಕಾಮೇಗೌಡರನ್ನು ನೋಡಿ ಜನರು, ಸಂಬಂಧಿಕರು ಹುಚ್ಚ ಎಂದು ಜರಿದಿದ್ದರು. ರಾತ್ರಿ ಚಂದ್ರ, ದೀಪದ ಬೆಳಕಿನಲ್ಲಿಯೂ ಗುಡ್ಡದಲ್ಲಿ ಕೆರೆ ನಿರ್ಮಾಣ ಮಾಡಲು ಕಾಮೇಗೌಡರು ಕೆಲಸ ಮಾಡಿದ ಉದಾಹರಣೆಗಳಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+