ಶನಿವಾರ ಬೆಳಗ್ಗೆ ಮಂಡ್ಯಕ್ಕೆ ಎಚ್.ಗುರು ಪಾರ್ಥಿವ ಶರೀರ
Recommended Video

ಮಂಡ್ಯ, ಫೆಬ್ರವರಿ 16 : ಪುಲ್ವಾಮದ ಅವಂತಿಪುರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಎಚ್.ಗುರು ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆ ರಾಜ್ಯಕ್ಕೆ ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದಲ್ಲಿ ಯೋಧ ಎಚ್.ಗುರು ಅವರ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶನಿವಾರ ಬೆಳಗ್ಗೆ ಪಾರ್ಥಿವ ಶರೀರ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿದ್ದು, ಅಲ್ಲಿಂದ ಮಂಡ್ಯಕ್ಕೆ ತರಲಾಗುತ್ತದೆ.
ಜಮ್ಮು ಮತ್ತು ಕಾಶ್ಮೀರದಿಂದ ಶುಕ್ರವಾರ ರಾತ್ರಿ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಮೃತದೇಹವನ್ನು ತರಲಾಗಿದೆ. ಸೇನಾ ವಿಮಾನ ವಿಳಂಬವಾದ ಹಿನ್ನಲೆಯಲ್ಲಿ ಶುಕ್ರವಾರ ತಡರಾತ್ರಿ ಬದಲು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಪಾರ್ಥಿವ ಶರೀರ ಬರಲಿದೆ.

ಯೋಧ ಎಚ್.ಗುರು ಅವರ ಕುಟುಂಬಕ್ಕೆ ಸ್ವಂತ ಜಮೀನು ಇಲ್ಲ. ಆದ್ದರಿಂದ, ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಮಂಡ್ಯ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿಕೊಂಡಿದೆ. ಮೊದಲು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಗುಡಿಗೆರೆಯ ಎಳನೀರು ಮಾರುಕಟ್ಟೆ ಎದುರಿನ ಬಿಸಿಎಂ ಹಾಸ್ಟೆಲ್ ಹಿಂಭಾಗದ ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಹೇಳಿದ್ದಾರೆ.












Click it and Unblock the Notifications