ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶನಿವಾರ ಬೆಳಗ್ಗೆ ಮಂಡ್ಯಕ್ಕೆ ಎಚ್‌.ಗುರು ಪಾರ್ಥಿವ ಶರೀರ

|
Google Oneindia Kannada News

Recommended Video

Pulwama : ಅಕ್ಷರಶಃ ದುಃಖದ ಮಡುವಿನಲ್ಲಿರುವ ಮಂಡ್ಯ | ಗ್ರಾಮದ ಜನತೆಯಿಂದ ಪ್ರತಿಭಟನೆ | Oneindia Kannada

ಮಂಡ್ಯ, ಫೆಬ್ರವರಿ 16 : ಪುಲ್ವಾಮದ ಅವಂತಿಪುರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಎಚ್.ಗುರು ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆ ರಾಜ್ಯಕ್ಕೆ ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದಲ್ಲಿ ಯೋಧ ಎಚ್.‌ಗುರು ಅವರ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶನಿವಾರ ಬೆಳಗ್ಗೆ ಪಾರ್ಥಿವ ಶರೀರ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿದ್ದು, ಅಲ್ಲಿಂದ ಮಂಡ್ಯಕ್ಕೆ ತರಲಾಗುತ್ತದೆ.

ಬಂದಾಗಲೆಲ್ಲಾ ರೇಗುತ್ತಿದ್ದವನು ಈ ಸಾರಿ ಯಾಕೋ ನಗುತ್ತಲೇ ಇದ್ದ:ಗುರುವಿನ ತಂದೆ ಹೊನ್ನಯ್ಯಬಂದಾಗಲೆಲ್ಲಾ ರೇಗುತ್ತಿದ್ದವನು ಈ ಸಾರಿ ಯಾಕೋ ನಗುತ್ತಲೇ ಇದ್ದ:ಗುರುವಿನ ತಂದೆ ಹೊನ್ನಯ್ಯ

ಜಮ್ಮು ಮತ್ತು ಕಾಶ್ಮೀರದಿಂದ ಶುಕ್ರವಾರ ರಾತ್ರಿ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಮೃತದೇಹವನ್ನು ತರಲಾಗಿದೆ. ಸೇನಾ ವಿಮಾನ ವಿಳಂಬವಾದ ಹಿನ್ನಲೆಯಲ್ಲಿ ಶುಕ್ರವಾರ ತಡರಾತ್ರಿ ಬದಲು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಪಾರ್ಥಿವ ಶರೀರ ಬರಲಿದೆ.

ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ

H.Guru

ಯೋಧ ಎಚ್.ಗುರು ಅವರ ಕುಟುಂಬಕ್ಕೆ ಸ್ವಂತ ಜಮೀನು ಇಲ್ಲ. ಆದ್ದರಿಂದ, ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಮಂಡ್ಯ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿಕೊಂಡಿದೆ. ಮೊದಲು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಹುತಾತ್ಮ ಯೋಧ ಎಚ್.ಗುರು ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಎಸ್‌ವೈಹುತಾತ್ಮ ಯೋಧ ಎಚ್.ಗುರು ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಎಸ್‌ವೈ

ಗುಡಿಗೆರೆಯ ಎಳನೀರು ಮಾರುಕಟ್ಟೆ ಎದುರಿನ ಬಿಸಿಎಂ ಹಾಸ್ಟೆಲ್ ಹಿಂಭಾಗದ ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಹೇಳಿದ್ದಾರೆ.

English summary
The last rites of CRPF jawan H.Guru will be held on Saturday evening in Mandya. H.Guru who passed away on Thursday in Pulwama terrorist attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X