ಕೆ.ಅರ್.ಎಸ್ ಗೆ ನುಗ್ಗಲು ಯತ್ನಿಸಿದವರ ಮೇಲೆ ಲಾಠಿ ಚಾರ್ಜ್
ಮಂಡ್ಯ, ಸೆಪ್ಟೆಂಬರ್ 9: ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಶುಕ್ರವಾರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕೆಆರ್ ಎಸ್ ಅಣೆಕಟ್ಟೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾ ನಿರತರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾ ನಿರತರು ಏಕಾಏಕಿ ನುಗ್ಗಲು ಯತ್ನಿಸಿದಾಗ ಲಾಠಿ ಚಾರ್ಜ್ ನಡೆಸಲಾಗಿದೆ
ಇದೇ ವೇಳೆ ಪ್ರತಿಭಟನಾ ನಿರತರ ಮೇಲೆ ಅಶ್ರುವಾಯು ಸಿಡಿಸಲಾಗಿದ್ದು, ಆಕ್ರೋಶಗೊಂಡಿದ್ದ ಪ್ರತಿಭಟನಾನಿರತರನ್ನು ತಡೆಯಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ, ತಮಿಳುನಾಡಿಗೆ ನೀರು ಹರಿಸಬಾರದು, ನಿಮ್ಮಿಂದ ತಡೆಯಲು ಸಾಧ್ಯವಿಲ್ಲದಿದ್ದರೆ ನಾವು ತಡೆಯುತ್ತೀವಿ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕೆ.ಆರ್.ಎಸ್ ಸಮೀಪ ಕಾವೇರಿ ನದಿಗೆ ಇಬ್ಬರು ಜಿಗಿದಿದ್ದಾರೆ. ಮಂಡ್ಯದ ಸಂಜಯ್ ಸರ್ಕಲ್ ಬಳಿ ಕೂಡ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾನಿರತರು ಜಮೆಯಾಗಿದ್ದಾರೆ.












Click it and Unblock the Notifications