ದಾಖಲೆ ಬೇಡ ಎಂದು ಯೋಧನ ವಿಮೆ ಹಣ ನೀಡಿ ಮಾನವೀಯತೆ ಮೆರೆದ ಎಲ್‌ಐಸಿ

ಮಂಡ್ಯ, ಫೆಬ್ರವರಿ 16: ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದಾರೆ. ದೇಶವೇ ಸೂತಕದಲ್ಲಿ ಮುಳುಗಿದೆ.

ವೀರಮರಣವಪ್ಪಿದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಭಾರತೀಯ ಜೀವ ವಿಮಾ ನಿಗಮ ತಕ್ಷಣ ವಿಮಾ ಮೊತ್ತವನ್ನು ತಲುಪಿಸಿದೆ. ಯಾವುದೇ ದಾಖಲೆ, ಮರಣ ಪ್ರಮಾಣ ಪತ್ರವನ್ನೂ ಕೇಳದೆ LIC ಮಂಡ್ಯ ಬ್ರಾಂಚ್ ನಿಂದ ನಾಮಿನಿ ಖಾತೆಗೆ 3,82,199 ರೂ ವಿಮೆ ಮರಣದಾವೆ ಮೊತ್ತವನ್ನು ನೀಡಿದೆ.

ಯಾವುದೇ ದಾಖಲೆಯನ್ನೂ ಕೇಳದೆ LIC ಹಣ ನೀಡಿದೆ. ಪಾಲಿಸಿ ನಂ 725974544ನಲ್ಲಿ ಯೋಧ ಗುರು ವಿಮೆ ಮಾಡಿಸಿದ್ದು, ಅವರು ಹುತಾತ್ಮರಾಗಿದ್ದ ವಿಚಾರ ತಿಳಿಯುತ್ತಿದ್ದಂತೆ ನಾಮಿನಿ ಖಾತೆಗೆ ಹಣ ವರ್ಗಾವಣೆ ಮಾಡಿದೆ.

LIC releases insurance premium to Pulwama martyred soldier Guru

ಎಲ್‌ಐಸಿ ಕಾರ್ಯಕ್ಕೆ ಸಾರ್ವಜನಿಕರು ಕೃತಜ್ಞತೆ ಸಲ್ಲಿಸಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ವೀರಯೋಧ ಗುರು ಅವರ ಪಾರ್ಥಿವ ಶರೀರ ಬರಲಿದೆ. ಅಂತಿಮ ವಿಧಿ ವಿಧಾನಗಳು ಮಂಡ್ಯದಲ್ಲಿ ನಡೆಯಲಿದೆ. ಮಂಡ್ಯದ ಕೆಎಂ ದೊಡ್ಡಿ ಸೇರಿದಂತೆ ಹಲವು ಕಡೆ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ವೀರಯೋಧ ಹುತಾತ್ಮ ಗುರು ಕುಟುಂಬಕ್ಕೆ ಬಿಬಿಎಂಪಿಯಿಂದ 14 ಲಕ್ಷ

ವೀರಯೋಧ ಹುತಾತ್ಮ ಗುರು ಕುಟುಂಬಕ್ಕೆ ಬಿಬಿಎಂಪಿಯಿಂದ 14 ಲಕ್ಷ

ಮಂಡ್ಯದ ವೀರಯೋಧನ ಗುರು ಕುಟುಂಬಕ್ಕೆ ಬಿಬಿಎಂಪಿಯು 14 ಲಕ್ಷ ರೂ ಸಹಾಯ ಧನ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 42 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಅದರಲ್ಲಿ ಮಂಡ್ಯ ಮೂಲದ ಗುರು ಕೂಡ ಒಬ್ಬರು.

ಪಂಜಾಬ್‌ ಸರ್ಕಾರದಿಂದ ಪ್ರತಿ ಹುತಾತ್ಮ ಯೋಧರ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ

ಪಂಜಾಬ್‌ ಸರ್ಕಾರದಿಂದ ಪ್ರತಿ ಹುತಾತ್ಮ ಯೋಧರ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ

ಪಂಜಾಬ್ ಸರ್ಕಾರವು ಪುಲ್ವಾಮಾ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ ರಾಜ್ಯದ ನಾಲ್ಕು ಸೈನಿಕರ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರವನ್ನು ಘೋಷಿಸಿದೆ.

ಒಡಿಶಾ ಸರ್ಕಾರದಿಂದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ಘೋಷಣೆ

ಒಡಿಶಾ ಸರ್ಕಾರದಿಂದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಒಡಿಶಾದ ಜವಾನರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರವನ್ನು ಘೋಷಿಸಿದೆ.

ಪುಲ್ವಾಮ ಉಗ್ರರ ದಾಳಿಯಲ್ಲಿ 60 ಕೆಜಿ RDX ಬಳಕೆ

ಪುಲ್ವಾಮ ಉಗ್ರರ ದಾಳಿಯಲ್ಲಿ 60 ಕೆಜಿ RDX ಬಳಕೆ

ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಈ ಹಿಂದೆ ಭಾವಿಸಿದ್ದಂತೆ 350 ಕೆಜಿ ಸ್ಫೋಟಕವಿಲ್ಲ ಬದಲಾಗಿ 60 ಕೆಜಿ ಆರ್‌ಡಿಎಕ್ಸ್ ಬಳಸಲಾಗಿತ್ತು ಎಂಬ ಮಾಹಿತಿ ಸಿಆರ್‌ಪಿಎಫ್ ಅಧಿಕಾರಿಗಳ ಮೂಲಗಳು ತಿಳಿಸಿವೆ.

ಸಿದ್ದಿವಿನಾಯಕ ಟ್ರಸ್ಟ್‌ನಿಂದ ಹುತಾತ್ಮ ಯೋಧರ ಕುಟುಂಬಕ್ಕೆ 51 ಲಕ್ಷ

ಮುಂಬೈನ ಶ್ರೀ ಸಿದ್ಧಿವಿನಾಯಕ ಟ್ರಸ್ಟ್‌ ಪುಲ್ವಾಮಾ ದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾಗಿರುವ ಯೋಧರಿಗೆ ಸಹಾಯ ಹಸ್ತ ಚಾಚಿದೆ. ಯೋಧರ ಕುಟುಂಬಕ್ಕೆ 51 ಲಕ್ಷ ರೂ ನೀಡಲು ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+