Get Updates
Get notified of breaking news, exclusive insights, and must-see stories!

Rahul Gandhi in Mandya: ಮಂಡ್ಯದಲ್ಲಿ ಕುಮಾರಣ್ಣನ ಸೋಲಿಸಲು ಬರ್ತಾರೆ ರಾಹುಲ್ ಗಾಂಧಿ!

ಮಂಡ್ಯ, ಏಪ್ರಿಲ್. 12: ಎಚ್ ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ನಿಲ್ಲುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರ ಮತ್ತಷ್ಟು ಕುತೂಹಲದ ಕ್ಷೇತ್ರವಾಗಿ ಮಾರ್ಪಟ್ಟಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಎಚ್ ಡಿ ಕುಮಾರಸ್ವಾಮಿಯನ್ನು ಸೋಲಿಸಲು ಕಾಂಗ್ರೆಸ್ ಹಲವು ರಣತಂತ್ರ ಅನುಸರಿಸುತ್ತಿದೆ.

ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಅವರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡುತ್ತಿದ್ದಾರೆ. ಇದರ ಜೊತೆಗೆ ಮಂಡ್ಯದಲ್ಲಿ ಸ್ಟಾರ್ ಪ್ರಚಾರಕರು ಕಾಲಿಡಲಿದ್ದಾರೆ. ನಟಿ, ಮಾಜಿ ಸಂಸದೆ ರಮ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮಂಡ್ಯದಲ್ಲಿ ಭಾರೀ ಪ್ರಚಾರ ನಡೆಸಲಿದ್ದಾರೆ ಎಂದು ವರದಿಯಾಗಿದೆ.

Lok Sabha Election 2024 Congress leader Rahul Gandhi will join mandya election campaign

ಸಕ್ಕರೆ ನಾಡು ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​​ ಚಂದ್ರು ಗೆಲ್ಲಿಸಲು ಕಾಂಗ್ರೆಸ್‌ ನಾನಾ ರೀತಿಯಲ್ಲಿ ರಣತಂತ್ರ ಹೆಣೆಯುತ್ತಿದೆ. ಮಂಡ್ಯ ಕ್ಷೇತ್ರವನ್ನು ಪ್ರತಿಷ್ಠೆಯ ಕಣ ಎಂಉದ ಭಾವಿಸಿರುವ ಕಾಂಗ್ರೆಸ್‌, ಪ್ರಚಾರಕ್ಕೆ ಸ್ಟಾರ್‌ ಪ್ರಚಾರಕರನ್ನೇ ಕರೆತರುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದಲ್ಲ ಒಂದು ಪ್ಲ್ಯಾನ್ ಮಾಡುತ್ತಿದ್ದಾರೆ.

ಇದರ ಭಾಗವಾಗಿಯೇ ರಾಹುಲ್ ಗಾಂಧಿ ಅವರನ್ನು ಮಂಡ್ಯಗೆ ಪ್ರಚಾರಕ್ಕೆ ಕರೆಸಲು ಸಿದ್ಧತೆ ನಡೆಸಿದೆ. ಏಪ್ರಿಲ್ 17ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ, ವೆಂಕಟರಮಣೇಗೌಡ ಪರ ಪ್ರಚಾರ ನಡೆಸಲಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯದ ಆವರಣದಲ್ಲಿ ಬೃಹತ್​​​ ಬಹಿರಂಗ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಸುಮಾರು 1 ಲಕ್ಷ ಜನರನ್ನ ಸೇರಿಸಲು ಪ್ಲ್ಯಾನ್ ಮಾಡಿದೆ.

ಮನೆ ಮನೆ ಪ್ರಚಾರಕ್ಕೆ ಸಿದ್ಧವಾದ ಕಾಂಗ್ರೆಸ್

ಕಾಂಗ್ರೆಸ್ ಪ್ರಚಾರ ಆರಂಭಿಸಿದ್ದು, ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಶಾಸಕ ಗಾಣಿಗ ರವಿಕುಮಾರ್ ಮಾತನಾಡಿದ್ದಾರೆ. ಏಪ್ರಿಲ್ 12 ರಂದು ಚಿಕ್ಕಮಂಡ್ಯದಿಂದ ಪಥಸಂಚಲನ ನಡೆಸಲು ಸಿದ್ಧವಾಗಿದ್ದಾರೆ. ಏಪ್ರಿಲ್ 16 ರಂದು ಮಂಡ್ಯ ನಗರದ 10 ಸ್ಥಳಗಳಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತೇವೆ. ಮನೆ-ಮನೆ ಪ್ರಚಾರವನ್ನೂ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

Lok Sabha Election 2024 Congress leader Rahul Gandhi will join mandya election campaign

ಇನ್ನು, ಮಂಡ್ಯದಲ್ಲಿ ರಮ್ಯಾ ಮತ್ತು ರಾಹುಲ್ ಗಾಂಧಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ. "ರಾಹುಲ್ ಗಾಂಧಿ ಅವರು ಏಪ್ರಿಲ್ 17 ಅಥವಾ 20 ರಂದು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ನಾವು ಅಂದು ಬೃಹತ್ ರ್ಯಾಲಿಯನ್ನು ಆಯೋಜಿಸುತ್ತೇವೆ. ರಮ್ಯಾ ಕೂಡ ಕ್ಷೇತ್ರದಲ್ಲಿ ಸಾಕಷ್ಟು ಶ್ಲಾಘನೀಯ ಕೆಲಸ ಮಾಡಿದ್ದಾರೆ. ಇದೆಲ್ಲಾ ನಮಗೆ ಪ್ಲಸ್ ಪಾಯಿಂಟ್ ಆಗಲಿದೆ. ನಮ್ಮ ಅಭ್ಯರ್ಥಿ ಗೆಲುವಿಗೆ ಸಹಾಯವಾಗಲಿದೆ" ಎಂದು ಹೇಳಿದ್ದಾರೆ.

ಇನ್ನೂ, ಇತ್ತೀಚೆಗೆ ವೈರಲ್ ಆಗಿರುವ ಜಾತಿ ಲೆಕ್ಕಾಚಾರ ಸಮೀಕ್ಷೆಯೊಂದರಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೋಲಲಿದ್ದಾರೆ ಎಂದಿದೆ. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ಕಾಣಲಿದ್ದಾರೆ ಎಂದು ತಿಳಿಸಿದೆ. ಜಾತಿ ಲೆಕ್ಕಾಚಾರದ ಪ್ರಕಾರ ಕ್ಷೇತ್ರದಲ್ಲಿ 17,49,388 ಮತದಾರರಿದ್ದು ಅದರಲ್ಲಿ 13,12,041 ಮಂದಿ ಮತ ಚಲಾಯಿಸಿದರೆ 6,37,769 ಮತಗಳು ಎಚ್‌ಡಿ ಕುಮಾರಸ್ವಾಮಿ ಅವರಿಗೆ ಮತ್ತು 6,74,272 ಮತಗಳು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಸೇರಲಿವೆ. ಇದರಿಂದ 36,503 ಮತಗಳ ಅಂತರದಿಂದ ಸ್ಟಾರ್ ಚಂದ್ರು ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+