Mandya Lok sabha election: ಮಂಡ್ಯದಿಂದ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ, ನಿಖಿಲ್ ಹೇಳಿದ್ದೇನು?
ಮಂಡ್ಯ, ಮಾರ್ಚ್ 25: ಲೋಕಸಭಾ ಚುನಾವಣೆಯಲ್ಲಿ ಕುತೂಹಲದ ಕ್ಷೇತ್ರವಾಗಿರುವ ಮಂಡ್ಯ ಇನ್ನೂ ಜನರ ಗಮನ ಸೆಳೆಯುತ್ತಲೇ ಇದೆ. ಬಿಜೆಪಿ- ಜೆಡಿಎಸ್ ಮೈತ್ರಿಯಲ್ಲಿನ ಮಂಡ್ಯ ಜೆಡಿಎಸ್ ಪಾಲಾಗಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ಇನ್ನು ನಿರ್ಧಾರವಾದಂತಿಲ್ಲ. ಈ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಕೇಳಿ ಬರುತ್ತಿದೆ.
ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಹಾಲಿ ಸಂಸದೆ ಸುಮಲತಾ ಅಂಬರೀಷ್‌ಗೆ ಟಿಕೆಟ್ ಕೈ ತಪ್ಪಿದ್ದು, ಅವರು ಬಮಡಾಯ ಏಳುವ ಸಾಧ್ಯೆತಗಳು ಹೆಚ್ಚಾಗಿಯೇ ಇವೆ. ಇನ್ನು ಮೈತ್ರಿ ಪಕ್ಷದ ಈ ಒಳ ಬೇಗುದಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುವುದಂತು ಪಕ್ಕ. ಈ ನಡುವೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಅಭ್ಯರ್ಥಿಯಾಗುವುದು ಫಿಕ್ಸ್ ಎನ್ನಲಾಗಿದ್ದು, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.
ಎಚ್ ಡಿ ಕುಮಾರ್ಸವಾಮಿನ ಸ್ಪರ್ಧಿಸುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ''ಮಂಡ್ಯ ಕ್ಷೇತ್ರದಿಂದ ಪಕ್ಷದ ಕಾರ್ಯಕರ್ತರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಯಾವಾಗಲೂ ಬಯಸುತ್ತಿದ್ದರು. ಆದರೆ, ಕ್ಷೇತ್ರದ ಕಾರ್ಯಕರ್ತರು ಕುಮಾರಸ್ವಾಮಿ ಮಾತ್ರ ಸ್ಪರ್ಧಿಸಬೇಕೆಂದು ಬಯಸಿದ್ದರು. ಖಂಡಿತವಾಗಿಯೂ ಕುಮಾರಸ್ವಾಮಿಯವರು ಕಾರ್ಯಕರ್ತರ ಬೇಡಿಕೆಗೆ ಬೇಗ ಸ್ಪಂದಿಸಬೇಕಾಗುತ್ತದೆ" ಎಂದು ಹೇಳಿದ್ದಾರೆ.
2018 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚನ್ನಪಟ್ಟಣದ ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಇದೇ ರೀತಿಯ ಪ್ರೀತಿ ಮತ್ತು ಪ್ರೀತಿಯನ್ನು ತೋರಿಸಿದ್ದರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಮಾರಸ್ವಾಮಿ ಸೋಮವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರನ್ನು ಭೇಟಿ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿರುವ ಎಚ್‌ಡಿ ಕುಮಾರಸ್ವಾಮಿ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಅವರ ಮನೆ ಜೆ.ಪಿ.ನಗರ ಮನೆಗೆ ಆಗಮಿಸಿದ್ದರು. ಇದೇ ವೇಳೆ ಮಂಡ್ಯ ಜಿಲ್ಲೆಯ ಬೆಂಬಲಿಗರು ಮಂಡ್ಯದಿಂದ ಸ್ಪರ್ಧಿಸುವಂತೆ ಆಗ್ರಹಿಸಿದ್ದಾರೆ.
ಈ ವೇಳೆ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದ ಎಚ್ ಡಿ ಕುಮಾರಸ್ವಾಮಿ, "ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ಸೋಮವಾರ ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ಸೋಮವಾರ ಯಾವುದೇ ಕಾರಣಕ್ಕೂ ನಿಮಗೆ ನಿರಾಸೆ ಮಾಡುವುದಿಲ್ಲ. ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿಯನ್ನು ಸೋಮವಾರ ಸಂಜೆಯೊಳಗೆ ತಿಳಿಸಲಾಗುವುದು" ಎಂದು ಭರವಸೆ ನೀಡಿದ್ದರು. ಇದು ಅವರು ಮಂಡ್ಯದಿಂದ ಸ್ಪರ್ಧಿಸುತ್ತಾರೆ ಎನ್ನುವುದಕ್ಕೆ ಅವರೇ ಕೊಟ್ಟಿರುವ ಸುಳಿವು.
ನಿಖಿಲ್ ಕುಮಾರಸ್ವಾಮಿ ಕೂಡ, " ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ಸೋಮವಾರ ಸಂಜೆಯೊಳಗೆ ಅಭ್ಯರ್ಥಿ ಅಂತಿಮ ಆಗಬಹುದು" ಎಂದು ತಿಳಿಸಿದ್ದರು.












Click it and Unblock the Notifications