ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಮ್ಯಾ ಸ್ಪರ್ಧೆ ಬಯಸಿದರೆ ಮುಕ್ತ ಅವಕಾಶವಿದೆ- ಕಾಂಗ್ರೆಸ್ ಶಾಸಕ
ಮಂಡ್ಯ, ಅಕ್ಟೋಬರ್ 12: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾ ಸ್ಪರ್ಧೆ ಬಯಸಿದರೆ ನನ್ನ ಮುಕ್ತ ಆಹ್ವಾನವಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಕೇವಲ 6 ತಿಂಗಳ ಅವರಿಗೆ ಸಂಸದೆಯಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಅವರು ಬಂದರೂ ನಮಗೆ ತೊಂದರೆ ಇಲ್ಲ. ರಮ್ಯಾ ಪರವಾಗಿ ಕೆಲಸ ಮಾಡುವುದಕ್ಕೆ ತಯಾರಿದ್ದೇವೆ ಎಂದು ತಿಳಿಸಿದರು.
ಚುನಾವಣೆ ಸ್ಪರ್ಧೆಯಲ್ಲಿ ಸಾಕಷ್ಟು ಮಂದಿ ಇದ್ದಾರೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ, ಎನ್.ಚಲುವರಾಯಸ್ವಾಮಿ ಪತ್ನಿ ಧನಲಕ್ಷ್ಮೀ ಅಥವಾ ಸಚಿವ ಎನ್.ಚಲುವರಾಯಸ್ವಾಮಿ ಈ ಮೂವರಲ್ಲಿ ಯಾರಿಗಾದರೂ ಟಿಕೆಟ್ ನೀಡಲಿ. ಕಾಂಗ್ರೆಸ್ ಗೆಲುವು ಸುಲಭವಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆಗಳಿರುವುದರಿಂದ ಈ ಮೂವರಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕೆನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಚುನಾವಣೆ ಪೂರ್ವಭಾವಿ ಸಭೆಯಲ್ಲೂ ನನ್ನ ನಿರ್ಧಾರ ತಿಳಿಸಿದ್ದೇನೆ ಎಂದು ತಿಳಿಸಿದರು.
ಮೈತ್ರಿಕೂಟಕ್ಕಿಂತ ಒಗ್ಗಟ್ಟು ಮೂಡಿಸುವುದು ಮುಖ್ಯ - ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಯಾರಾಗಬೇಕು ಎನ್ನುವುದಕ್ಕಿಂತ ಮುಖ್ಯವಾಗಿ ಒಗ್ಗಟ್ಟು ಮೂಡಿಸುವುದು ಮುಖ್ಯವಾಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಹೇಳಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರಾ, ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುವರೋ ಎನ್ನುವುದು ನಿರ್ಧಾರವಾಗಬೇಕಿದೆ. ಆನಂತರ ಉಭಯಪಕ್ಷಗಳ ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟು ಪ್ರದರ್ಶಿಸಬೇಕು. ಆನಂತರದಲ್ಲಿ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ತಿಳಿಸಿದರು.

ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವಂತೆ ಕೆ.ಸಿ.ನಾರಾಯಣಗೌಡ ಒತ್ತಾಯಿಸಿರುವ ಬಗ್ಗೆ ಮಾತನಾಡಿದ ಅವರು,
ನಾರಾಯಣಗೌಡರು ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಪಕ್ಷ ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಕ್ಷ ತೀರ್ಮಾನ ಮಾಡಲಿದೆ ಎಂದರು.
ಅವರ ರಾಜಕೀಯ ಭವಿಷ್ಯಕ್ಕೆ ಧಕ್ಕೆ ಆಗುವ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಎಲ್ಲರಲ್ಲೂ ಬೇಸರ ಆಗುತ್ತದೆ. ಇದು ರಾಷ್ಟ್ರಮಟ್ಟದಲ್ಲಿ ವರಿಷ್ಠರು ಮಾಡಿರುವ ನಿರ್ಧಾರ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ವರಿಷ್ಠರ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು ನಾವೂ ಸಹಕರಿಸಬೇಕು. ಏನೇ ಸಮಸ್ಯೆಗಳು ಎದುರಾದರೂ ಹೇಗೆ ಬಗೆಹರಿಸಿಕೊಳ್ಳಬೇಕೆಂಬ ಬಗ್ಗೆ ಆಲೋಚಿಸಬೇಕು ಎಂದು ಹೇಳಿದರು.
ಕೆ.ಸಿ.ನಾರಾಯಣಗೌಡರು ಹಿರಿಯರು. ನಮ್ಮ ಪಕ್ಷಕ್ಕೆ ಶಕ್ತಿ ತುಂಬಿದವರು. ಅವರಿಗೆ ಏನೇ ಸಮಸ್ಯೆಗಳಿದ್ದರೂ ಒಟ್ಟಿಗೆ ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತೇವೆ. ಅವರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಮೈತ್ರಿಯಿಂದ ಅವರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications