ಮಂಡ್ಯವನ್ನು ನಾಯ್ಡುಮಯ ಮಾಡಲು ಹೊರಟಿದ್ದಾರೆ: ಶಿವರಾಮೇಗೌಡ
ಮಂಡ್ಯ, ಏಪ್ರಿಲ್ 1: ನಾಯ್ಡು ಜಾತಿ ಬಿಟ್ಟು ಗೌಡರನ್ನು ಮದುವೆಯಾದ ಸುಮಲತಾ ಗೌಡ್ತಿ ಹೇಗೆ ಆಗುತ್ತಾರೆ ಎಂದು ಸಂಸದ ಶಿವರಾಮೇಗೌಡ ಪುನಃ ಜಾತಿ ಕೆದಕುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಅಂಬರೀಷ್ ಅವರು ಮಂಡ್ಯದ ಗೌಡರು ಸರಿ. ಆದರೆ, ಸುಮಲತಾ ನಾಯ್ಡು ಜಾತಿಗೆ ಸೇರಿದವರು. ಅವರು ಅಂತರ್ಜಾತಿ ವಿವಾಹವಾಗಿದ್ದರು. ಅಂಬರೀಷ್ ಅವರನ್ನು ಮದುವೆಯಾದ ಮಾತ್ರಕ್ಕೆ ನಾಯ್ಡು ಜನಾಂಗಕ್ಕೆ ಸೇರಿದ ಸುಮಲತಾ ಗೌಡ್ತಿ ಆಗುವುದಿಲ್ಲ. ಅವರ ಜಾತಿ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದಿದ್ದಾರೆ.
ನಾಯ್ಡು ಜನಾಂಗದವರು ಬೆಂಗಳೂರಿನ ತುಂಬ ಇದ್ದಾರೆ. ಅದೇ ರೀತಿ ಈಗ ಮಂಡ್ಯವನ್ನೂ ನಾಯ್ಡುಮಯವನ್ನಾಗಿಸಲು ಹೊರಟಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರೂ ನಾಯ್ಡು ಜನಾಂಗದವರು. ಜಿಲ್ಲೆಗೆ ಅವರ ಕೊಡುಗೆ ಏನು ಎಂಬುದನ್ನು ಬಿಡಿಸಿ ಹೇಳಲಿ. 15 ವರ್ಷದಿಂದ ರಾಜಕೀಯದಲ್ಲಿ ಕಾಣಿಸಿಕೊಳ್ಳದ ಅವರು ಈಗ ಏಕೆ ಬಂದಿದ್ದಾರೆ? ಆದ್ದರಿಂದಲೇ ಜಾತಿ ಪ್ರಶ್ನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ದರ್ಶನ್ ಪಿಕ್ಚರ್‌ಗೆ ಮಾತ್ರವೇ ಸೀಮಿತವಾಗಿರಬೇಕು. ಜೆಡಿಎಸ್ ವಿರುದ್ಧ, ಒಕ್ಕಲಿಗ ಸಮುದಾಯದ ವಿರುದ್ಧ ತೊಡೆ ತಟ್ಟಿದರೆ ನಾವು ಸುಮ್ಮನಿರುವುದಿಲ್ಲ. ದರ್ಶನ್ ಅವರೇನೂ ಸುದೀಪ್, ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಅವರಿಗಿಂತ ದೊಡ್ಡ ನಟರೇನಲ್ಲ. ಯಾವ ಪಕ್ಷದ ಅಭ್ಯರ್ಥಿಯ ಪರವೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಈಗ ಇವರು ಬಂದು ಇಲ್ಲಿ ಏನು ಮಾಡಲು ಸಾಧ್ಯ? ಎಂದಿದ್ದಾರೆ.
ಭಾನುವಾರ ಕೂಡ ಶಿವರಾಮೇಗೌಡ ಸುಮಲತಾ ಅವರ ಜಾತಿ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದರು.
ಸುಮಲತಾ ಅವರು ಮಳವಳ್ಳಿ ಹುಚ್ಚೇಗೌಡರ ಸೊಸೆ ಎನ್ನುವುದರಲ್ಲಿ ಅರ್ಥವೇ ಇಲ್ಲ. ಅವರು ನಾಯ್ಡು ಜನಾಂಗದವರು, ಮಂಡ್ಯ ಗೌಡ್ತಿ ಅಲ್ಲ ಎಂದು ಹೇಳಿಕೆ ನೀಡಿದ್ದರು.
ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?
ಅಲ್ಲದೆ, ಅಂಬರೀಷ್ ಅವರನ್ನು ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದೇ ನಾನು. ಇನ್ನೂ ಕಣ್ಣುಬಿಡದ ಅಂಬರೀಷ್ ಅವರ ಮಗ ಅಭಿಷೇಕ್ ಅಪ್ಪನ ಹಾಗೆಯೇ ಮಾತನಾಡುತ್ತಿದ್ದಾನೆ. ಅಂಬರೀಷ್ ಅವರ ಮೃತದೇಹವನ್ನು ಮಂಡ್ಯಕ್ಕೆ ತಂದಾಗ ಸೇರಿದ್ದ ಜನಸಾಗರವನ್ನು ಕಂಡು ಸುಮಲತಾ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
ಶಿವರಾಮೇಗೌಡ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಂಬರೀಷ್ ಅಭಿಮಾನಿಗಳು, ಕಳೆದ ಲೋಕಸಭೆ ಉಪ ಚುನಾವಣೆ ಸಂದರ್ಭದಲ್ಲಿ ಅಂಬರೀಷ್ ಅವರ ಕಾಲಿಗೆ ಬಿದ್ದು ಶಿವರಾಮೇಗೌಡ ಬೆಂಬಲ ಕೋರುತ್ತಿರುವ ಚಿತ್ರವನ್ನು ಎಲ್ಲೆಡೆ ಹಂಚಿಕೊಳ್ಳುತ್ತಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications