ಮಂಡ್ಯ ಜನತೆಗೆ ಧನ್ಯವಾದ ಹೇಳಿದ ಹೆಚ್‌ ಡಿ ಕುಮಾರಸ್ವಾಮಿ: ಕಾರಣವೇನು?

ಮಂಡ್ಯ, ಏಪ್ರಿಲ್‌ 27: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಹೆಚ್‌ ಡಿ ಕುಮಾರಸ್ವಾಮಿ ಕಣದಲ್ಲಿದ್ದು, ಏಪ್ರಿಲ್‌ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮಂಡ್ಯ ಲೋಕಸಭೆ ಕ್ಷೇತ್ರದ ತಂದೆ ತಾಯಂದಿರು, ಅಕ್ಕತಂಗಿಯರು, ಅಣ್ಣತಮ್ಮಂದಿರಿಗೆ ಅನಂತ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಅತ್ಯಂತ ನಿರ್ಣಾಯಕವಾಗಿದ್ದ 2024ನೇ ಲೋಕಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ ಜನತಾದಳ ಹಾಗೂ ಬಿಜೆಪಿ (NDA) ಮೈತ್ರಿಕೂಟದ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾವೆಲ್ಲರೂ ತೋರಿದ ಪ್ರೀತಿ, ವಿಶ್ವಾಸಕ್ಕೆ ಧನ್ಯನಾಗಿದ್ದೇನೆ. ಕ್ಷೇತ್ರದ ಎಂಟೂ ವಿಧಾನಸಭೆ ಕ್ಷೇತ್ರಗಳಲ್ಲಿ ತಾವು ನೀಡಿದ ಅಭೂತಪೂರ್ವ ಬೆಂಬಲಕ್ಕೆ ಮೂಕವಿಸ್ಮಿತನಾಗಿದ್ದೇನೆ.

ತಾವೆಲ್ಲರೂ ಉರಿ ಬಿಸಿಲನ್ನು ಲೆಕ್ಕಿಸದೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದೀರಿ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಲು ನೀವು ತೋರಿದ ಉತ್ಸಾಹ, ಬದ್ಧತೆಯನ್ನು ಕಂಡು ನನ್ನ ಹೃದಯ ಉಕ್ಕಿ ಬಂದಿದೆ. ವಿಶೇಷವೆಂದರೆ; ಬೆಂಗಳೂರು, ಮೈಸೂರು ನಗರಗಳು ಸೇರಿದಂತೆ ದೇಶ ವಿದೇಶಗಳಲ್ಲಿ ನೆಲೆಸಿರುವ ಜಿಲ್ಲೆಯ ನನ್ನ ಬಂಧುಗಳು ಮತಗಟ್ಟೆಗೆ ಬಂದು ಹರಸಿದ್ದಾರೆ. ನಿಮ್ಮೆಲ್ಲರ ಋಣ ದೊಡ್ಡದು.

Lok Sabha Poll Former CM HD Kumaraswamy thanked the people of Mandya

ಎಷ್ಟೋ ಅಪಪ್ರಚಾರ, ಅಪದ್ಧಗಳ ನಡುವೆಯೂ ಪ್ರತಿಗಾಮಿ ಶಕ್ತಿಗಳನ್ನು ಮೆಟ್ಟಿ ನಿಂತು ಸುನಾಮಿಯಂತೆ ಮತ ಚಲಾಯಿಸಿದ್ದೀರಿ. ಇಡೀ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ದಾಖಲೆಯಷ್ಟು ಮತದಾನ ಆಗಿರುವುದು ನೀವು ವ್ಯಕ್ತಪಡಿಸಿದ ಅಕ್ಕರೆಯ ಪ್ರತಿಫಲ ಎಂದೇ ನಾನು ಭಾವಿಸಿದ್ದೇನೆ. ನನ್ನ ಪರವಾಗಿ ಹಗಲಿರುಳೆನ್ನದೆ ದುಡಿಮೆ ಮಾಡಿದ ಜಾತ್ಯತೀತ ಜನತಾದಳ ಹಾಗೂ ಭಾರತೀಯ ಜನತಾ ಪಕ್ಷದ ಸಮಸ್ತ ಕಾರ್ಯಕರ್ತರು, ಮುಖಂಡರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಪ್ರತಿಯೊಬ್ಬರ ಹೆಸರನ್ನೂ ಸ್ಮರಿಸುತ್ತಾ ನನ್ನ ಹೃದಯಾಂತರಾಳದ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+