ಮಂಡ್ಯ: ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ-2024ರ ಕಿರೀಟ

ಮಂಡ್ಯ, ಜನವರಿ 12: ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್-2024 ಕಿರೀಟವನ್ನು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿ ಮುಡಿಗೇರಿಸಿಕೊಂಡಿದ್ದಾರೆ. ಡಾ. ಪ್ರಿಯಾ ಗೋಸ್ವಾಮಿ ಮಂಡ್ಯ ಜಿಲ್ಲೆಯ ಮದ್ದೂರಿನ ಸೊಸೆ. ಇವರ ಪತಿ ಭಾರತೀಯ ಸೇನೆಯಲ್ಲಿರುವ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು. ಪಶು ವೈದ್ಯರಾಗಿರುವ ಡಾ. ಪ್ರಿಯಾ ಅವರು ಕೂಡ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗೆ ನವದೆಹಲಿಯಲ್ಲಿ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್-2024 ಕಾರ್ಯಕ್ರಮ ನಡೆಯಿತು. ವಿವಾಹವಾದ ಸ್ತ್ರೀಯರಿಗಾಗಿ ನಡೆಯುವ ಸೌಂದರ್ಯ ಸ್ಪರ್ಧೆ ಇದಾಗಿದೆ. ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್-2024 ಕಿರೀಟವು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿತು.

Maddur Dr Priy Goswami Bags Mrs India Pride Of Nation 2024 Crown

ನವದೆಹಲಿಯಲ್ಲಿ 5 ದಿನಗಳ ಕಾಲ ಈ ಸ್ಪರ್ಧೆ ನಡೆಯಿತು. ಅಂತಿಮ ಸುತ್ತಿನಲ್ಲಿ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದರು. ಜೊತೆಗೆ ಅದೇ ವೇದಿಕೆಯಲ್ಲಿ ಸೋಷಿಯಲ್ ಇನ್ಫ್ಲುಯೆನ್ಸರ್ ಗೌರವಕ್ಕೂ ಸಹ ಪಾತ್ರರಾದರು.

ಕನ್ನಡತಿಯಾಗಿದ್ದಾರೆ ಡಾ. ಪ್ರಿಯಾ ಗೋಸ್ವಾಮಿ: ವೃತ್ತಿಯಿಂದ ಪಶುಪಾಲನ ವೈದ್ಯರಾದ ಡಾ. ಪ್ರಿಯಾ ಗೋಸ್ವಾಮಿ ಮೂಲತಃ ಪಂಜಾಬ್‌ನವರು. ಗೋವಾದಲ್ಲಿ ಬೆಳೆದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿದ್ದಾರೆ. ಪತಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಮದ್ದೂರಿನ ಎಚ್. ಕೆ. ವೀರಣ್ಣಗೌಡ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಬಿ ಸಿದ್ದೇಗೌಡ ಅವರ ಪುತ್ರ ಕರ್ನಲ್ ಸಂಜೀತ್ ಅವರನ್ನು ಡಾ. ಪ್ರಿಯಾ ಗೋಸ್ವಾಮಿ ವಿವಾಹವಾಗಿದ್ದಾರೆ. ಪ್ರಸ್ತುತ ಕರ್ನಲ್ ಸಂಜೀತ್ ಉತ್ತರಖಾಂಡ್‌ನಲ್ಲಿ ಭಾರತೀಯ ಸೇನೆಯ ಕುದುರೆ ತರಬೇತಿ ವಿಭಾಗದ ಡೆಪ್ಯೂಟಿ ಕಮಾಂಡೆಂಟ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಪಶು ವೈದ್ಯರಾಗಿರುವ ಡಾ. ಪ್ರಿಯಾ ಗೋಸ್ವಾಮಿ ಅವರು ಸಹ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಜೀತ್ ಮತ್ತು ಡಾ. ಪ್ರಿಯಾ ಗೋಸ್ವಾಮಿ ದಂಪತಿಗಳಿಗೆ ಧ್ರುವಿ ಸಂಜಿತ್ (16) ಹಾಗೂ ಶೌರ್ಯಗೌಡ (9) ಎಂಬ ಮಕ್ಕಳಿದ್ದಾರೆ.

ಪತಿ ಕರ್ನಲ್ ಸಂಜೀತ್, ಮಾವ ಸಿದ್ದೇಗೌಡ, ಅತ್ತೆ ಸುಮಿತ್ರಮ್ಮ ಅವರ ಸಹಕಾರ ಹಾಗೂ ನಾದಿನಿ ಸುಪ್ರೀತಾ ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ಡಾ. ಪ್ರಿಯಾ ಗೋಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮದ ನಿರ್ದೇಶಕರಾದ ಭಾರ್ಕಾ ನಂಗಿಯಾ ಮತ್ತು ಅಭಿಷೇಕ್ ಅವರ ಸಲಹೆಗಳೇ‌ ಗೆಲುವಿಗೆ ದಾರಿ ತೋರಿಸಿದವು ಎಂದು ಹೇಳಿದ್ದಾರೆ.

ಡಾ. ಪ್ರಿಯಾ ಗೋಸ್ವಾಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಹಲವಾರು ಜನರು ಪೋಸ್ಟ್‌ಗಳ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪೊರ್ವೊರಿಮ್‌ನ ಡಿಫೆನ್ಸ್ ಕಾಲೋನಿಯ ನಿವಾಸಿ ಡಾ. ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ 2024 ಕಿರೀಟವನ್ನು ಅಲಂಕರಿಸಿದ್ದಾರೆ. ಡಾ ಪ್ರಿಯಾ ಪಶು ವೈದ್ಯಕೀಯ ರೋಗ ತಜ್ಞೆ ಮತ್ತು ಕರ್ನಲ್ ಸಂಜೀತ್ ಬಿ. ಎಸ್. ಅವರ ಪತ್ನಿ. ಅವರು ಅವರ್ ಲೇಡಿ ಆಫ್ ರೋಸರಿ ಕಾನ್ವೆಂಟ್ ಹೈಸ್ಕೂಲ್ ಡೋನಾ ಪೌಲಾ ಮತ್ತು ಧೆಂಪೆ ಕಾಲೇಜು ಮಿರಾಮಾರ್‌ನ ವಿದ್ಯಾರ್ಥಿನಿ ಎಂದು ಅವರ್ ಗೋವಾ ಫೇಸ್‌ಬುಕ್ ಜಾಲತಾಣದಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+