ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ: ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ; ಯೋಗಿ ಆದಿತ್ಯನಾಥ್ ಭಾಗಿ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 27: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೇಳವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ ಪ್ರಚಾರ ವಾಹನ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ನಾನಾ ಭಾಗಗಳಿಂದ ಸಾಧು, ಸಂತರು, ಭಾಗವಹಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಸೆ. 28ರಿಂದ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ; ಭರದಿಂದ ಸಾಗಿದೆ ಸಿದ್ಧತೆಸೆ. 28ರಿಂದ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ; ಭರದಿಂದ ಸಾಗಿದೆ ಸಿದ್ಧತೆ

ಮಹಾ ಕುಂಭಮೇಳವನ್ನು ಜಗದ್ಗುರಗಳ ಸೂಚನೆಯಂತೆ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಂಗಳವಾರ ಪೂರ್ವಭಾವಿ ಸಭೆ ನಡೆಸಲಾಯಿತು. ಮಹಾಕುಂಭಮೇಳ ನಡೆಯುತ್ತಿರುವುದು ನಮ್ಮೆಲ್ಲರ ಪುಣ್ಯ. 9 ವರ್ಷಗಳ ಹಿಂದೆ ಅದ್ಭುತವಾಗಿ ನಡೆದಿತ್ತು. ಇದೀಗ ಮತ್ತೆ ಜಗದ್ಗುರುಗಳ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸೋಣ ಎಂದು ಕೆಆರ್ ಪೇಟೆ ಶಾಸಕ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು.

Maha Kumbh Mela held in KR Pets Triveni Sangama from Oct 13 to 16

ಕೆ.ಆರ್. ಪೇಟೆಗೆ ಮಾತ್ರವಲ್ಲ, ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳಿಗೆ ಹೆಮ್ಮೆಯ ಕಾರ್ಯಕ್ರಮ. ನಾನು ಸೇವಕನಾಗಿ ದುಡಿಯುವುದಕ್ಕೆ ಬಂದಿದ್ದು, ರಾಜಕಾರಣದಿಂದ ಏನನ್ನು ಮಾಡಬೇಕಿಲ್ಲ. ಸೇವಕನಾಗಿ ದುಡಿದು ಕುಂಭಮೇಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗೋಣ. ಈ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಬರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

9 ವರ್ಷಗಳ ನಂತರ ಕುಂಭ ಮೇಳ

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, " 9 ವರ್ಷಗಳ ಹಿಂದೆ ಯಾವುದೇ ಪೂರ್ವ ಸಿದ್ದತೆಗಳಿಲ್ಲದೇ, ದಿಢೀರ್ ಆಗಿ ರೂಪುಗೊಂಡು ಯಶಸ್ವಿಯಾಗಿ ಕುಂಭಮೇಳ ನಡೆದಿತ್ತು. ಆಗ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡಿದ್ದ ನಾರಾಯಣಗೌಡರು ಯಶಸ್ವಿಗೊಳಿಸಿದ್ದರು. ಈಗ ಸಚಿವರಾಗಿ ಮತ್ತೊಮ್ಮೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದು, ಉತ್ತಮವಾಗಿ ರೂಪಿಸುತ್ತಿದ್ದಾರೆ. ಮಹಾಕುಂಭಮೇಳದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಎಲ್ಲರ ಸುಯೋಗ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಗಂಗಾರತಿ, ಸ್ನಾನಘಟ್ಟಗಳನ್ನು ನಿರ್ಮಿಸಲಾಗುತ್ತಿದ್ದು, ಸ್ನಾನ ಘಟ್ಟಗಳನ್ನು ಬಳಸುವಾಗ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲರೂ ಇದಕ್ಕೆ ಸಹಕರಿಸಿ ಯಶಸ್ವಿಗೊಳಿಸಬೇಕು" ಎಂದು ಹೇಳಿದರು.

Maha Kumbh Mela held in KR Pets Triveni Sangama from Oct 13 to 16

ಜಾತಿಬೇಧ, ಪಕ್ಷಬೇಧ ಮರೆತು ಭಾಗಿಯಾಗಿ
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕುಂಭಮೇಳ ಆಯೋಜನೆ ಕುರಿತು ಈ ಹಿಂದೆ ವಿಜಯನಗರದ ಮಠದಲ್ಲಿ ಪೂರ್ವಭಾವಿ ಸಭೆ ನಡೆದಿತ್ತು. ಇಂದು ಅದಕ್ಕೆ ಪೂರಕವಾಗಿ ಮತ್ತೊಂದು ಸಭೆ ನಡೆದಿದೆ. ಸರಕಾರ, ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನದಿ ನೀರಿಗೆ, ಗಾಳಿಗೆ ಯಾವುದೇ ಜಾತಿ ಇಲ್ಲ. ಜಾತಿಬೇಧ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಸೇರಿ ಇದನ್ನು ಯಶಸ್ವಿಗೊಳಿಸಬೇಕು. ಇದು ಜನಮಾನಸಕ್ಕೆ ಮುಟ್ಟುವ ಕಾರ್ಯಕ್ರಮವಾಗಲಿ ಎಂದು ಆಶಿಸಿದರು.

ಕಾಗಿನೆಲೆ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಶಾಸಕ ಕೇಶವಪ್ರಸಾದ್, ಮಾಜಿ ಶಾಸಕ ಮಾದೇಗೌಡ, ಜಿಲ್ಲಾಧಿಕಾರಿ ಎಸ್ ಅಶ್ವಥಿ, ಎಸ್ಪಿ ಯತೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದು ಕ್ರೀಡಾ ಸಚಿವ ಡಾ.ನಾರಾಯಣ ಗೌಡ ತಿಳಿಸಿದ್ದರು. ಲಕ್ನೋದಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ್ಧ ಸಚಿವ ಡಾ.ನಾರಾಯಣ ಗೌಡ ಅವರು ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೆ ಆಹ್ವಾನ ನೀಡಿದ್ದರು.

ಅಕ್ಟೋಬರ್ 13 ರಿಂದ 16ರವರೆಗೂ ಕೆ.ಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ತಿಳಿಸಿರುವುದಾಗಿ ಸಚಿವರು ಹೇಳಿದ್ದರು.

English summary
Triveni Sangam at Ambigarahalli in Akki Hebbal hobli in KR Pet taluk will host a three-day Kumbh Mela in October this year, Uttara Pradesh Chief Minister Yogi Adityanath will inaugurate the historical event,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X