• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಜ್ಜಿಯ ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಮೊಮ್ಮಗ

By ಮಂಡ್ಯ ಪ್ರತಿನಿಧಿ
|

ಮಂಡ್ಯ, ಅಕ್ಟೋಬರ್ 18: ತನ್ನ ಅಜ್ಜಿಯ ಅಸ್ಥಿ ವಿಸರ್ಜನೆ ವೇಳೆ ಯುವಕನೊಬ್ಬ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ದೊಡ್ಡ ಗೋಸಾಯಿ ಘಾಟ್ ಹತ್ತಿರ ನಡೆದಿದೆ.

ಬೆಂಗಳೂರಿನ ಗವಿಪುರಂ ನಿವಾಸಿ 31 ವರ್ಷದ ಎನ್.ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋದ ಯುವಕನಾಗಿದ್ದು, ಶ್ರೀಪ್ರಸಾದ್ ನ ಅಜ್ಜಿ ಚಂದ್ರಮತಿ ಮೂರು ದಿನದ ಹಿಂದೆ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದರು. ಹೀಗಾಗಿ ಅಸ್ಥಿ ವಿಸರ್ಜನೆಗಾಗಿ ಕುಟುಂಬದ ಸದಸ್ಯರೆಲ್ಲ ಶ್ರೀರಂಗಪಟ್ಟಣ ಗೋಸಾಯಿ ಘಾಟ್ ಗೆ ಬಂದಿದ್ದರು.

ಸಂಪ್ರದಾಯಿಕವಾಗಿ, ಸರಳವಾಗಿ ಶ್ರೀರಂಗಪಟ್ಟಣ ದಸರಾ ಆಚರಣೆ

ಈ ವೇಳೆ ವೈದಿಕರ ಮಾರ್ಗದರ್ಶನದಂತೆ ವಿಧಿ ವಿಧಾನ ಮುಗಿಸಿ, ಅಂತಿಮವಾಗಿ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಹಾಗೂ ಆತನ ಭಾವ ಮಯೂರ್ ಕಾವೇರಿ ನದಿಗೆ ಇಳಿದಿದ್ದರು. ಅಸ್ಥಿ ಬಿಟ್ಟ ಬಳಿಕ ನೀರಿನಲ್ಲಿ ಮುಳುಗಲು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಇಬ್ಬರು ಕೊಚ್ಚಿಹೋಗಿದ್ದಾರೆ. ಈ ವೇಳೆ ಮಯೂರ್ ಅವರನ್ನು ಸ್ಥಳೀಯರು ದಡ ಸೇರಿಸಿದ್ದಾರೆ. ಆದರೆ ಶ್ರೀಪ್ರಸಾದ್ ಕುಟುಂಬಸ್ಥರ ಕಣ್ಣೆದುರೇ ನೀರಿನಲ್ಲಿ ಮುಳುಗಿದ್ದಾರೆ.

ನದಿ ಅಂಚಿನ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್ ಗಳಲ್ಲಿ ವೈದಿಕರು ಅಂತಿಮ ವಿಧಿ ವಿಧಾನ ನಡೆಸುತ್ತಿದ್ದರು. ನದಿ ಆಳವಿದ್ದರೂ ಹಣದ ಆಸೆಗಾಗಿ ಹೊರ ಜಿಲ್ಲೆಗಳಿಂದ ಬರುವ ಜನರನ್ನು ಪುಸಲಾಯಿಸಿ ಅಪಾಯವನ್ನೂ ಲೆಕ್ಕಿಸದೇ ಅವರಿಂದ ಅಸ್ಥಿ ವಿಸರ್ಜನೆ ಮಾಡಿಸುತ್ತಿದ್ದರು.

   Political Popcorn with Lavanya : Dr BL Shankar, ಈಗ ಆಗಿರೋದೆ ಸಾಕು ಇನ್ಮೇಲೆ ಚುನಾವಣೆಗೆ ನಿಲ್ಲಲ್ಲಾ!?! Part2

   ಕಾವೇರಿ ನದಿಯಲ್ಲಿ ನಡೆದ ಈ ದುರ್ಘಟನೆಯಿಂದ ಮೂರೇ ದಿನದಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವಕ್ಕಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

   English summary
   An incident where a young man washed up on the river Cauvery took place near the big Gosai ghat in Srirangapatna of Mandya district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X