Mandya: ಕಾರಿನಲ್ಲಿದ್ದ ₹7 ಲಕ್ಷ ಕದಿಯಲು ಯತ್ನ; ಹಿಡಿದು ಥಳಿಸಿದ ಸಾರ್ವಜನಿಕರು
ಕಾರಿನಲ್ಲಿದ್ದ 7 ಲಕ್ಷ ರೂ. ನಗದು ಹಣವನ್ನು ಎಗರಿಸಲು ಹೋದ ಕಳ್ಳನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಂಡ್ಯ ನಗರದ ಹೊರ ವಲಯದ ಅಮರಾವತಿ ಹೊಟೇಲ್ ಬಳಿ ನಡೆದಿದೆ.
ಆಂಧ್ರ ಮೂಲದ ವ್ಯಕ್ತಿಯೊಬ್ಬ (ಹೆಸರು ತಿಳಿದುಬಂದಿಲ್ಲ) ಸಾರ್ವಜನಿಕರ ಕೈ ಸಿಕ್ಕಿಬಿದ್ದಿದ್ದು, ಆತನನ್ನು ಸಾರ್ವಜನಿಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಲ್ಲಹಳ್ಳಿ ಬಡಾವಣೆಯ ಮಧು ಎಂಬುವರು ನಗರ ಕೆನರಾ ಬ್ಯಾಂಕಿನಲ್ಲಿ 7 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಡು ತಮ್ಮ ಕಾರಿನಲ್ಲಿ ಅಮರಾವತಿ ಹೊಟೇಲ್ ಬಳಿ ಸ್ನೇಹಿತರನ್ನು ಭೇಟಿ ಮಾಡಲು ಆಗಮಿಸಿದ್ದರು.
ಕಾರನ್ನು ಹೊಟೇಲ್ ಹಿಂಭಾಗದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಸ್ನೇಹಿತರನ್ನು ಭೇಟಿ ಮಾಡಲು ತೆರಳಿದ್ದರು. ಸ್ನೇಹಿತರನ್ನು ಭೇಟಿ ಮಾಡಿ ವಾಪಸ್ಸು ಬರುವಷ್ಟರಲ್ಲಿ ಆರೋಪಿ ಕಾರಿನ ಚಾಲಕರ ಕಿಟಕಿಯ ಗಾಜನ್ನು ಒಡೆದು ಕಾರಿನೊಳಗೆ ನುಗ್ಗಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಆದರೆ ಹಣ ಆತನ ಕೈಗೆ ಸಿಗಲಿಲ್ಲ.
ಮಧು ಅವರು ವಾಪಸ್ಸು ಬಂದು ಕಾರಿನೊಳಗೆ ಹುಡುಕುತ್ತಿದ್ದ ಕಳ್ಳನನ್ನು ಕಂಡು ಆತನನ್ನ ಹಿಡಿಯಿರಿ ಎಂದು ಕಿರುಚಿದ್ದಾರೆ. ತಕ್ಷಣ ಎಚ್ಚೆತ್ತ ಕಳ್ಳ ಅಲ್ಲಿಂದ ಓಟ ಕೀಳಲು ಪ್ರಾರಂಭಿಸಿದ್ದ ಹೊಟೇಲ್‌ನ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಲು ಯತ್ನಿಸಿದ್ದ. ಮಧು ಅವರ ಕಿರುಚಾಟ ಆಲಿಸಿದ ಸಾರ್ವಜನಿಕರು ಕಳ್ಳನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದರು.
ಕಾರಿನೊಳಗೆ ಚಾಲಕನ ಸೀಟಿನ ಕೆಳಗೆ ಹಣ ಇಟ್ಟಿದ್ದರಿಂದ ಹಣ ಆತನ ಕೈಗೆ ಸಿಗಲಿಲ್ಲ. ಬಳಿಕ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications