ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 17,79,243 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಪೈಕಿ 8,76,112 ಮಂದಿ ಪುರುಷರು, 9,02,063 ಮಂದಿ ಮಹಿಳಾ ಮತದಾರರಿದ್ದಾರೆ ಎಂದು ತಿಳಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 693 ಸೂಕ್ಷ್ಮ ಮತಕೇಂದ್ರಗಳು ಹಾಗೂ 33 ದುರ್ಬಲ ಮತಕೇಂದ್ರಗಳನ್ನು ಗುರುತಿಸಲಾಗಿದೆ. 40 ಪಿಂಕ್ ಮತಗಟ್ಟೆಗಳು, 8 ವಿಕಲಚೇತನರು, 16 ಸಾಂಪ್ರದಾಯಿಕ, 16 ಯುವ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಮೊಬೈಲ್ ನಿಷೇಧ
ಮತಗಟ್ಟೆಯ 100 ಮೀಟರ್ ಅಂತರದೊಳಗೆ ಮೊಬೈಲ್ ಬಳಕೆ ನಿಷೇಧವಿದೆ. ಎಲ್ಲಾ ರೀತಿಯ ಪ್ರಚಾರ ನಿರ್ಬಂಧಿಸಲಾಗಿದೆ. 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಟೆಂಟ್‌ಗಳನ್ನು ತೆರೆಯುವಂತಿಲ್ಲ. ಪ್ರತೀ ಮತಗಟ್ಟೆಗೆ ಒಬ್ಬ ಪೋಲಿಂಗ್ ಏಜೆಂಟ್, ಇಬ್ಬರು ರಿಲೀಫ್ ಏಜೆಂಟರನ್ನು ನೇಮಕ ಮಾಡಲು ಅವಕಾಶವಿರುತ್ತದೆ ಎಂದರು.
ಜಿಲ್ಲೆಯ 1824 ಮತಗಟ್ಟೆಗಳಿಗೆ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಆರ್‌ಪಿಎಫ್ 72 ಜನರ ತಂಡ, ಎಸ್‌ಎಪಿ ಗುಜರಾತ್ 216 ಜನರ ತಂಡ, ಒಟ್ಟು ನಾಲ್ಕು ಕಂಪನಿಗಳು ಭದ್ರತೆಯಲ್ಲಿ ತೊಡಗಿಸಿಕೊಳ್ಳಲಿವೆ ಎಂದು ತಿಳಿಸಿದರು.
ವಿಕಲಚೇತನರು, ಹಿರಿಯ ನಾಗರೀಕರು ಸುಗಮವಾಗಿ ಮತ ಚಲಾಯಿಸಲು ಪ್ರತೀ ಮತಗಟ್ಟೆಯಲ್ಲೂ ಇಳಿಜಾರು ವ್ಯವಸ್ಥೆ, ವ್ಹೀಲ್‌ಚೇರ್, ದೃಷ್ಠಿದೋಷವುಳ್ಳವರಿಗೆ ಮತದಾನ ಮಾಡಲು ಅವಶ್ಯವಾಗುವಂತೆ ಬ್ರೈಲ್ ಲಿಪಿಯುಳ್ಳ ವಿದ್ಯುನ್ಮಾನ ಮತಯಂತ್ರ ವ್ಯವಸ್ಥೆ ಹಾಗೂ ಡಮ್ಮಿ ಬ್ರೈಲ್ ಬ್ಯಾಲೆಟ್ ಪೇಪರ್ ವ್ಯವಸ್ಥೆ ಕಲ್ಪಿಸಲಾಗಿದೆ. ಮತದಾರರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ವೇತನ ಸಹಿತ ರಜಾದಿನ
ಏಪ್ರಿಲ್ 26ರ ಸಾವತ್ರಿಕ ಚುನಾವಣಾ ದಿನದಂದು ಸರ್ಕಾರಿ, ಅರೆ ಸರ್ಕಾರಿ ಸೇರಿದಂತೆ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿಯಾಗಿ ಕೆಲಸ ಮಾಡುವ ಎಲ್ಲರಿಗೂ ವೇತನ ಸಹಿತ ರಜಾದಿನ ನೀಡಬೇಕು. ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
8 ವಿಧಾನ ಸಭಾ ಕ್ಷೇತ್ರಗಳಲ್ಲೂ 25 ಚೆಕ್‌ಪೋಸ್ಟ್‌ಗಳಲ್ಲಿ ಸ್ಪಷ್ಟ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಕ್ರಮ ಮದ್ಯ ಹಾಗೂ ನಗದನ್ನು ಜಪ್ತಿಗೊಳಿಸಲಾಗಿದ್ದು, ಒಟ್ಟು ₹1.06,08,990 ಕೋಟಿ ನಗದು, ₹1,50,27,871.39 ರೂ. ಮೌಲ್ಯದ 52,861,62 ಲೀಟರ್ ಮದ್ಯ, ₹2,17,040 ವೌಲ್ಯದ 5.704 ಕೆ.ಜಿ ಡ್ರಗ್, ₹ 40 ಸಾವಿರ ಮೌಲ್ಯದ 2 ಸಾವಿರ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಚುನಾವಣಾ ಸಂಬಂಧ ಈವರೆಗೆ 65 ದೂರುಗಳು ದಾಖಲಾಗಿದ್ದು, ಇದರಲ್ಲಿ 55 ಬಗೆಹರಿಸಲಾಗಿದೆ. 11 ಪ್ರಕರಣಗಳು ಬಾಕಿ ಉಳಿದಿವೆ. ಚುನಾವಣಾ ಸಂಬಂಧಿತ 204 ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದರು.
ಮಂಡ್ಯ ಲೋಕಸಭಾ ವ್ಯಾಪ್ತಿಯ 15,60,457 ಮಂದಿ ಮತದಾರರಿಗೆ ವೋಟರ್ ಸ್ಲಿಪ್‌ಗಳನ್ನು ವಿತರಿಸಲಾಗಿದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಎಲ್ಲ ಮತದಾರರಿಗೆ ಮತದಾನದ ದಿನಾಂಕ, ವೇಳಾಪಟ್ಟಿ ನೀಡಿ ಮತಗಟ್ಟೆಗೆ ಆಗಮಿಸಿ ಮತದಾರರು ಚಲಾಯಿಸಲು ಪ್ರಜಾಪ್ರಭುತ್ವದ ಮತದಾನದ ಹಬ್ಬಕ್ಕೆ ಆಮಂತ್ರಣ ಎಂಬ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಪ್ರತೀ ಕುಟುಂಬಕ್ಕೆ ವಿತರಿಸಲಾಗಿದೆ. ಮತದಾನ ಕಾರ್ಯಕ್ಕಾಗಿ 8396 ಮಂದಿ ಅಧಿಕಾರಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಮದ್ಯ ಮಾರಾಟ ಬಂದ್
ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 27ರ ಬೆಳಗ್ಗೆ 6 ಗಂಟೆವರೆಗೆ ಜಿಲ್ಲಾಧ್ಯಂತ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 3ರ ಸಂಜೆ 5 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ಗಂಟೆಯವರೆಗೆ ಮಂಡ್ಯ ನಗರ ವ್ಯಾಪ್ತಿ ಹಾಗೂ ನಗರ ವ್ಯಾಪ್ತಿಯ 5 ಕಿ.ಮೀ. ಸುತ್ತಳತೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications