ಶಾಲೆಗಳ ಆರಂಭಕ್ಕೆ ಕ್ಷಣಗಣನೆ; ಮಂಡ್ಯ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ
ಶೈಕ್ಷಣಿಕ ವರ್ಷ ಆರಂಭಗೊಂಡು ಶಾಲೆಗಳ ಪುನರಾರಂಭಕ್ಕೆ ದಿನಗಣನೆ ಶುರುವಾಗಿದ್ದರೂ ಸಹ ಮಂಡ್ಯ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1605 ಶಿಕ್ಷಕರ ಕೊರತೆ ಎದುರಾಗಿದೆ.
ಪ್ರಾಥಮಿಕ ಶಾಲೆಗಳಿಗೆ 4,496 ಸಹ ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಆದರೆ, ಈ ಪೈಕಿ 3,370 ಹುದ್ದೆಗಳಷ್ಟೇ ಭರ್ತಿಯಾಗಿದ್ದು, 1,126 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಈ ಮಧ್ಯೆ ಕಳೆದ ನಾಲ್ಕೈದು ತಿಂಗಳ ಹಿಂದೆ 430 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಆಯ್ಕೆಯಾಗಿರುವ 360 ಮಂದಿ ವರದಿ ಮಾಡಿಕೊಂಡಿದ್ದಾರೆ. ಉಳಿದವರು ನ್ಯಾಯಾಲಯದ ತಡೆಯಾಜ್ಞೆ ಹಾಗೂ ಇತರೆ ಕಾರಣಗಳಿಂದ ವರದಿ ಮಾಡಿಕೊಂಡಿಲ್ಲ.

ಸಹ ಶಿಕ್ಷಕರ ಕೊರತೆಯೇ ಹೆಚ್ಚು
ಪ್ರಾಥಮಿಕ ಶಾಲೆಗಳಲ್ಲಿ ಇರುವ ಸಹ ಶಿಕ್ಷಕರೇ ವಿಷಯವಾರು ಪಾಠಗಳನ್ನು ಮಾಡಿ, ಶೈಕ್ಷಣಿಕ ಚಟುವಟಿಕೆಗಳನ್ನು ಮುಗಿಸುತ್ತಾರೆ. ಆದರೆ, ಪ್ರೌಢಶಾಲೆಗಳಿಗೆ ವಿಷಯವಾರು ಶಿಕ್ಷಕರೇ ಬೇಕಿದೆ. ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಒಟ್ಟಾರೆ 350ಕ್ಕೂ ಶಿಕ್ಷಕರ ಕೊರತೆಯಿದೆ. ಇದರಲ್ಲಿ 15ಕ್ಕೂ ಹೆಚ್ಚು ಮುಖ್ಯಶಿಕ್ಷಕರ ಹುದ್ದೆಗಳಷ್ಟೇ ಖಾಲಿ ಇವೆ. ಇದರಿಂದ ಅಷ್ಟೇನೂ ಸಮಸ್ಯೆಯಿಲ್ಲ. ಸಹ ಶಿಕ್ಷಕರೇ ಪ್ರಭಾರ ಮುಖ್ಯಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಾರೆ.
ಆದರೆ, ಮುಖ್ಯ ಶಿಕ್ಷಕರು ಸೇರಿದಂತೆ 479 ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಇವುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಸೇರಿವೆ. ಪ್ರತಿ ಪ್ರೌಢಶಾಲೆಯಲ್ಲೂ ಒಂದೊಂದು ವಿಷಯಕ್ಕೆ ಒಬ್ಬೊಬ್ಬರು ಶಿಕ್ಷಕರಿರಬೇಕಿದೆ. ಆದರೆ, ಜಿಲ್ಲೆಯಲ್ಲಿ ಆ ಪರಿಸ್ಥಿತಿಯಿಲ್ಲ.
ತರಗತಿ ನಡೆಸುವುದೇ ದೊಡ್ಡ ಸವಾಲು
ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. ಆದರೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಒಟ್ಟು ಬರೋಬ್ಬರಿ 1605 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಇದರಿಂದ ಪೂರ್ಣ ಪ್ರಮಾಣದಲ್ಲಿ ವಿಷಯವಾರು ತರಗತಿಗಳನ್ನು ನಡೆಸುವುದೇ ದೊಡ್ಡ ಸವಾಲಾಗಿವೆ.
ಜಿಲ್ಲೆಯಲ್ಲಿ 783 ಕಿರಿಯ ಪ್ರಾಥಮಿಕ, 818 ಹಿರಿಯ ಪ್ರಾಥಮಿಕ, 215 ಪ್ರೌಢಶಾಲೆಗಳು, 9 ಪದವಿ ಪೂರ್ವ ಕಾಲೇಜುಗಳು (ಪ್ರೌಢಶಾಲೆ ವಿಭಾಗ ಸೇರಿ) ಸೇರಿದಂತೆ 1824 ಸರ್ಕಾರಿ ಶಾಲೆಗಳಿವೆ. ಜೊತೆಗೆ, 172 ಅನುದಾನಿತ, 423 ಅನುದಾನರಹಿತ ಖಾಸಗಿ ಶಾಲೆಗಳು, 42 ಸಮಾಜಕಲ್ಯಾಣ ಇಲಾಖೆಯ ಶಾಲೆಗಳು, ತಲಾ ಒಂದೊಂದು ಜವಾಹರ್ ನವೋದಯ ವಿದ್ಯಾಲಯ, ಕೇಂದ್ರೀಯ ವಿದ್ಯಾಲಯ, 2 ಮೌಲಾನ ಅಬ್ದುಲ್ ಆಜಾದ್ ಶಾಲೆಗಳು ಸೇರಿದಂತೆ 2,465 ಶಾಲೆಗಳಿವೆ.
ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣ ಸಂಸ್ಥೆಯವರೇ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರದ್ದೇ ಬಹುದೊಡ್ಡ ಸಮಸ್ಯೆಯಾಗಿದೆ.
ಮಂಡ್ಯ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಸೇರಿದಂತೆ ಒಟ್ಟು 1957 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಆದರೆ, ಪ್ರಸ್ತುತ 1,478 ಹುದ್ದೆಗಳಲ್ಲಿ ಮಾತ್ರ ಶಿಕ್ಷಕರು ಕಾರ‌್ಯ ನಿರ್ವಹಿಸುತ್ತಿದ್ದು, 479 ಹುದ್ದೆಗಳು ಖಾಲಿ ಉಳಿದಿವೆ. ಇನ್ನು ಪ್ರಾಥಮಿಕ ಶಾಲೆಗಳಿಗೆ 4,496 ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, 3,370 ಹುದ್ದೆಗಳು ಭರ್ತಿಯಾಗಿವೆ. 1,126 ಶಿಕ್ಷಕರ ಹುದ್ದೆಗಳು ಈಗಲೂ ಖಾಲಿ ಇವೆ. ಇದರೊಂದಿಗೆ ಜಿಲ್ಲೆಯ ಪ್ರಾಥಮಿಕ ಶಾಲೆಗಳಲ್ಲಿ 430 ಮುಖ್ಯ ಶಿಕ್ಷಕರ ಹುದ್ದೆಗಳು ಖಾಲಿ ಇವೆ.
ಇದರಿಂದ ಶೈಕ್ಷಣಿಕ ಚಟುವಟಿಕೆಗಳು ಮತ್ತು ಪಾಠಪ್ರವಚನಗಳಿಗೆ ತೊಂದರೆಯಾಗುವ ಸಾಧ್ಯತೆಯೇ ಹೆಚ್ಚು. ಶಾಲಾ ಪ್ರಾರಂಭೋತ್ಸವಕ್ಕೆ 8 ದಿನಗಳಷ್ಟೇ ಬಾಕಿ ಉಳಿದಿದೆ. ಶಾಲಾ ಪ್ರಾರಂಭೋತ್ಸವದ ಬೆನ್ನಲ್ಲೇ ಮಕ್ಕಳ ದಾಖಲಾತಿ ನಡೆಯುತ್ತಿದ್ದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕೆಲಸವನ್ನೂ ಶಿಕ್ಷಕರು ಮಾಡಬೇಕು. ಮತ್ತೊಂದೆಡೆ ತರಗತಿಗಳಲ್ಲಿ ಪಾಠಪ್ರವಚನಗಳು ಆಗಬೇಕಿದೆ.
ಆದರೆ, ಶಿಕ್ಷಕರ ಕೊರತೆಯಿಂದಾಗಿ ಇದ್ಯಾವ ಕಾರ್ಯವೂ ಸರಿಯಾಗಿ ನಡೆಯದೆ, ಮಕ್ಕಳ ಶೈಕ್ಷಣಿಕ ಪ್ರಗತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗದು. ಹೀಗಾಗಿ ಶಿಕ್ಷಕರ ಕೊರತೆ ನೀಗಿಸುವ ದೃಷ್ಟಿಯಿಂದಲೇ ರಾಜ್ಯ ಸರ್ಕಾರ ಮತ್ತು ಶಾಲಾ ಶಿಕ್ಷಣ ಇಲಾಖೆ ತ್ವರಿತ ಕ್ರಮ ವಹಿಸಬೇಕೆಂಬುದು ಸಾರ್ವಜನಿಕರ ಒತ್ತಾಯವೂ ಆಗಿದೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications