ಮಂಡ್ಯದ ಮತದಾರರ ಪಟ್ಟಿ ಅಂತಿಮ, ಜಿಲ್ಲೆಯಲ್ಲಿ 14 ಲಕ್ಷ ಮತದಾರರು

ಮಂಡ್ಯ, ಜನವರಿ 18 : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಡ್ಯ ಜಿಲ್ಲಾಡಳಿತ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 14,85,065 ಮಂದಿ ಮತದಾರರಿದ್ದಾರೆ.

ಮಂಡ್ಯ ಜಿಲ್ಲಾಡಳಿತ 1.1.2019ಕ್ಕೆ ಅನ್ವಯವಾಗುವಂತೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳು, ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪಟ್ಟಿ ಪ್ರಕಟಿಸಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ 7,42,697 ಪುರುಷರು ಹಾಗೂ 7,42,368 ಮಹಿಳೆಯರು ಸೇರಿದಂತೆ ಒಟ್ಟು 14,85,065 ಮಂದಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಒಂದು ವೇಳೆ ಹೆಸರು ಕೈಬಿಟ್ಟು ಹೋಗಿದ್ದಲ್ಲಿ ಹಾಗೂ ದಿನಾಂಕ 01.01.2019ಕ್ಕೆ 18 ವರ್ಷ ತುಂಬಿರುವ ಯುವ ಮತದಾರರು ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅವಕಾಶವಿದೆ.

Mandya district voters list January 2019

ತಾಲೂಕುವಾರು ಮತದಾರರು : ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 1,20,906 ಪುರುಷರು ಹಾಗೂ 1,18,843 ಮಹಿಳೆಯರು ಸೇರಿದಂತೆ ಒಟ್ಟು 2,39,749 ಮತದಾರರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1,01,662 ಪುರುಷರು ಹಾಗೂ 104599 ಮಹಿಳೆಯರು ಸೇರಿದಂತೆ ಒಟ್ಟು 206261 ಮತದಾರರು ಇದ್ದಾರೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 97618 ಪುರುಷರು ಹಾಗೂ 97235 ಮಹಿಳೆಯರು ಸೇರಿದಂತೆ ಒಟ್ಟು 1,94,853 ಮತದಾರರು. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 109971 ಪುರುಷರು ಹಾಗೂ 113081 ಮಹಿಳೆಯರು ಸೇರಿದಂತೆ ಒಟ್ಟು 223052 ಮತದಾರರಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 103661 ಪುರುಷರು ಹಾಗೂ 105495 ಮಹಿಳೆಯರು ಸೇರಿದಂತೆ ಒಟ್ಟು 209156 ಮತದಾರರು. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 104423 ಪುರುಷರು ಹಾಗೂ 102371 ಮಹಿಳೆಯರು ಸೇರಿದಂತೆ ಒಟ್ಟು 206794 ಮತದಾರರು ಇದ್ದಾರೆ.

ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 104456 ಪುರುಷರು ಹಾಗೂ 100744 ಮಹಿಳೆಯರು ಸೇರಿದಂತೆ ಒಟ್ಟು 2052200 ಮತದಾರರು ಇದ್ದಾರೆ ಎಂದು ಜಿಲ್ಲಾಡಳಿತ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+