ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಉಪ ಚುನಾವಣೆ : ನ.2,3ರಂದು ಶಾಲಾ-ಕಾಲೇಜುಗಳಿಗೆ ರಜೆ

|
Google Oneindia Kannada News

ಮಂಡ್ಯ, ಅಕ್ಟೋಬರ್ 28 : ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.

ಡಿಡಿಪಿಐ ಅವರು ನವೆಂಬರ್ 2 ಮತ್ತು 3ರಂದು ಮಂಡ್ಯ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಶಿಕ್ಷಕರು ಚುನಾವಣಾ ಕರ್ತವ್ಯಕ್ಕೆ ಹೋಗುವ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಮಂಡ್ಯ ಚುನಾವಣೆ : ಸಿದ್ದರಾಮಯ್ಯ ಸಭೆ ವಿಫಲ, ಕಾಂಗ್ರೆಸ್ ಪ್ರಚಾರವಿಲ್ಲಮಂಡ್ಯ ಚುನಾವಣೆ : ಸಿದ್ದರಾಮಯ್ಯ ಸಭೆ ವಿಫಲ, ಕಾಂಗ್ರೆಸ್ ಪ್ರಚಾರವಿಲ್ಲ

ನವೆಂಬರ್ 3ರಂದು ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿರುಸಿನಿಂದ ಪ್ರಚಾರ ನಡೆಯುತ್ತಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ.

ಕಾಂಗ್ರೆಸ್‌ ಪಾಲಿಗೆ ತಲೆನೋವಾದ ಮಂಡ್ಯ ಲೋಕಸಭೆ ಉಪ ಚುನಾವಣೆಕಾಂಗ್ರೆಸ್‌ ಪಾಲಿಗೆ ತಲೆನೋವಾದ ಮಂಡ್ಯ ಲೋಕಸಭೆ ಉಪ ಚುನಾವಣೆ

ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಎಲ್.ಆರ್.ಶಿವರಾಮೇಗೌಡ ಅವರು ಮೈತ್ರಿ ಪಕ್ಷಗಳ ಅಭ್ಯರ್ಥಿ. ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಅವರು ಕಣದಲ್ಲಿದ್ದಾರೆ.

ಮಂಡ್ಯ ಉಪ ಚುನಾವಣೆ : ಕಾಂಗ್ರೆಸ್‌ಗೆ ಬಿಸಿತುಪ್ಪವಾದ ರಮ್ಯಾ ಅಭಿಮಾನಿಗಳುಮಂಡ್ಯ ಉಪ ಚುನಾವಣೆ : ಕಾಂಗ್ರೆಸ್‌ಗೆ ಬಿಸಿತುಪ್ಪವಾದ ರಮ್ಯಾ ಅಭಿಮಾನಿಗಳು

ಮಂಡ್ಯ ಲೋಕಸಭಾ ಉಪ ಚುನಾವಣೆ

ಮಂಡ್ಯ ಲೋಕಸಭಾ ಉಪ ಚುನಾವಣೆ

2014ರ ಲೋಕಸಭಾ ಚುನಾವಣೆಯಲ್ಲಿ ಸಿ.ಎಸ್.ಪುಟ್ಟರಾಜು ಅವರು ಮಂಡ್ಯ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಅವರು ಶಾಸಕರಾಗಿ ಆಯ್ಕೆಯಾದ ಕಾರಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಹಾಕಿಲ್ಲ

ಕಾಂಗ್ರೆಸ್ ಅಭ್ಯರ್ಥಿ ಹಾಕಿಲ್ಲ

ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಒಮ್ಮತದ ಅಭ್ಯರ್ಥಿಯಾಗಿ ಎಲ್.ಆರ್.ಶಿವರಾಮೇಗೌಡ ಅವರು ಕಣದಲ್ಲಿದ್ದಾರೆ. ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಅಭ್ಯರ್ಥಿ.

ಬಿಜೆಪಿ ಪಡೆದ ಮತಗಳೆಷ್ಟು?

ಬಿಜೆಪಿ ಪಡೆದ ಮತಗಳೆಷ್ಟು?

2009ರ ಲೋಕಸಭಾ ಚುನಾವಣೆಯಲ್ಲಿ ಎಲ್.ಆರ್.ಶಿವರಾಮೇಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದರು. 144875 ಮತಗಳನ್ನು ಪಡೆದಿದ್ದರು. 2014ರ ಚುನಾವಣೆಯಲ್ಲಿ ಪ್ರೊ.ಬಿ.ಶಿವಲಿಂಗಯ್ಯ ಅವರು ಅಭ್ಯರ್ಥಿಯಾಗಿದ್ದರು. 86,993 ಮತಗಳನ್ನು ಪಡೆದಿದ್ದರು. ಈ ಬಾರಿ ಎಲ್.ಆರ್.ಶಿವರಾಮೇಗೌಡ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಬಿಜೆಪಿ-ಜೆಡಿಎಸ್ ಪೈಪೋಟಿ

ಬಿಜೆಪಿ-ಜೆಡಿಎಸ್ ಪೈಪೋಟಿ

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಶಾಸಕರೇ ಇದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಕ್ಷೇತ್ರಕ್ಕೆ ಹೊಸಬರು. ಕ್ಷೇತ್ರದ ಜನರಿಗೆ ಹೆಚ್ಚಿನ ಪರಿಚಯವಿಲ್ಲ. ಪ್ರಧಾನಿ ನರೇಂದ್ರ ಮೋದಿ, ಯಡಿಯೂರಪ್ಪ ಹೆಸರು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದಾರೆ.

ಮತದಾರರ ವಿವರ

ಮತದಾರರ ವಿವರ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 1722476 ಮತದಾರರು ಇದ್ದಾರೆ. 843210 ಪುರುಷ, 845979 ಮಹಿಳಾ ಮತದಾರರು ಇದ್ದಾರೆ. 72 ಇತರೆ ಮತದಾರರು ಕ್ಷೇತ್ರದಲ್ಲಿದ್ದಾರೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

English summary
Mandya Deputy Director of Public Instruction (DDPI) announced holiday for school and college on November 2 and 3, 2018. Mandya Lok Sabha By election will be held on November 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X